22.5 C
Karnataka
Thursday, January 23, 2025

ಬೋಳಂತೂರು ದರೋಡೆ ಪ್ರಕರಣ :ಓವ೯ನ ಬಂಧನ, ಕಾರು, ನಗದು ವಶ

ಮ೦ಗಳೂರು: ವಿಟ್ಲ ಬೋಳಂತೂರಿನ‌ ಉದ್ಯಮಿಯ ಮನೆಯಲ್ಲಿ, ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಓವ೯ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಕೇರಳ ಕೊಲ್ಲಂ ಜಿಲ್ಲೆಯ ಅನಿಲ್‌ ಫರ್ನಾಂಡಿಸ್‌ ( 49 ವರ್ಷ) \ ಬ೦ಧಿತ ಆರೋಪಿಯಾಗಿದ್ದು ಆತನಿ೦ದ ಕಾರು, ನಗದು ವಶಪಡಿಸಿಕೊಳ್ಳಲಾಗಿದೆ.
ಜ.3ರಂದು ರಾತ್ರಿ, ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 6 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸ್ ಅಧೀಕ್ಷಕ ಯತೀಶ್ ಎನ್ ಅವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
ಪ್ರಕರಣಕ್ಕೆ ಸಂಬಂದಿಸಿದಂತೆ ಜ.23 ರಂದು ಕೇರಳ ಕೊಲ್ಲಂ ಜಿಲ್ಲೆಯ ತ್ರಿಕ್ಕಡವೂರ್‌ ,ಪೆರಿನಾಡ್‌ ನಿವಾಸಿ ಅನಿಲ್‌ ಫರ್ನಾಂಡಿಸ್‌ ನನ್ನು ಪೊಲೀಸರು ಬ೦ಧಿಸಿದ್ದಾರೆ.ಕೃತ್ಯಕ್ಕೆ ಉಪಯೋಗಿಸಿದ ಎರ್ಟಿಗಾ ಕಾರು, 5,00,000 ರೂ ನಗದು ಹಾಗೂ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಬಹುದು. ಸದ್ರಿ ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇರುತ್ತದೆ.
ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿರುತ್ತದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles