17.2 C
Karnataka
Wednesday, January 22, 2025

ರೂಪೇಶ್ ಶೆಟ್ಟಿ, ನಿರ್ದೇಶನದ “ಜೈ” ತುಳು ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ “ಜೈ” ತುಳು ಸಿನಿಮಾದಲ್ಲಿ ‌ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸುತ್ತಿದ್ದಾರೆ. ಮಂಗಳೂರಿನಾದ್ಯಂತ ಶೂಟಿಂಗ್ ನಡೆಯುತ್ತಿದ್ದು, ಇನ್ನು ಕೆಲವು ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ ʼ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಸುನೀಲ್ ಶೆಟ್ಟಿ ಅವರುತುಳು ಸಿನಿಮಾದಲ್ಲಿ ನಟಿಸುತ್ತಿರುವುದು ಹಷ೯ ತ೦ದಿದೆ. ಅನೇಕ ವರ್ಷಗಳಿಂದ ತುಳು ಸಿನಿಮಾದಲ್ಲಿ ಅಭಿನಯಿಸಬೇಕೆಂಬ ಇಚ್ಛೆ ಇತ್ತು. “ಜೈ” ಸಿನಿಮಾ ಉತ್ತಮ ಕಥೆಯನ್ನು ಹೊ೦ದಿದೆ ಎ೦ದರು.
ಅನೇಕ ವರ್ಷಗಳಿಂದ ತುಳು ಸಿನಿಮಾದಲ್ಲಿ ಅಭಿನಯಿಸಬೇಕೆಂಬ ಇಚ್ಛೆ ಅವರಲ್ಲಿತ್ತು. ಆದರೆ ಅದಕ್ಕೆ ಕಾಲ ಕೂಡಿ ಬರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದ,”ಜೈ” ತುಳು ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಹಿಸುತ್ತಿದ್ದಾರೆ. “ಜೈ” ನಿಮಾಕ್ಕೆ ಮೂರನೆ ಹಂತದ ಚಿತ್ರೀಕರಣ ನಡಿತಾ ಇದ್ದು, ಹಾಡು ಚಿತ್ರೀಕರಣ ಇನ್ನು ನಡೆಯಲಿರುತ್ತದೆ .
ರೂಪೇಶ್ ಶೆಟ್ಟಿ ಅವರು ಮಾತನಾಡಿ . “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಕರಾವಳಿಯನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಉಡುಪಿ, ಕುಂದಾಪುರ ಮಂಗಳೂನಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.ಗಿರಿಗಿಟ್, ಗಮ್ಮಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದ್ದು, ಅನಿಲ್ ಶೆಟ್ಟಿ, ಸುಧಾಕ‌ರ್ ಶೆಟ್ಟಿ ಹಾಗೂ ಮಂಜುನಾಥ್ ಅತ್ತಾವರ ನಿರ್ಮಾಪಕರಾಗಿದ್ದಾರೆ.
ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕಥೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ. ಸಂಗೀತ ಲೊಯ್ ವೆಲೆಂಟಿನ್ ಸಲ್ಮಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ , ಸುಧಾಕರಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆತ್ಮ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್ ಎ೦ದರು/

“ಜೈ” ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ರಾಜ್ ದೀಪಕ್ ಶೆಟ್ಟಿ, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.”ಜೈ” ಸಿನಿಮಾ ತುಳು ಚಿತ್ರ ಆದಷ್ಟು ಬೇಗ ತೆರೆಕಾಣಲಿದೆ ಎ೦ದವರು ಹೇಳಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles