ಮಂಗಳೂರು: ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 – 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತುಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ.
ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರಗುವ 50ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಬೊಂಡಾಲ ಸಚ್ಚಿದಾನಂದ ಶೆಟ್ಟರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ 1961 ಸಪ್ಟೆಂಬರ್ 25ರಂದು ಜನಿಸಿದ ಸಚ್ಚಿದಾನಂದ ಶೆಟ್ಟರು ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆ ಮತ್ತುಪಾಣೆಮಂಗಳೂರು ಶಾರದಾ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ, ಬಂಟ್ವಾಳದಎಸ್.ವಿ.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು. ಮುಂಬೈ ಮಹಾನಗರದಲ್ಲಿವೃತ್ತಿಜೀವನ ಆರಂಭಿಸಿದ ಅವರು ಭಾರತೀಯ ವಿಮಾನಯಾನ ಹಾಗೂ ವಿವಿಧಕಂಪನಿಗಳ ಲೆಕ್ಕಪತ್ರ ವಿಭಾಗದಲ್ಲಿ ಸುಮಾರು 14 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ಊರಿಗೆ ಹಿಂತಿರುಗಿ ದುರ್ಗಾ ಫೆಸಿಲಿಟೀಸ್ ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ. ಲಿ. ಎಂಬಸಂಸ್ಥೆಯನ್ನು 2007 ರಲ್ಲಿ ಸ್ಥಾಪಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಅದರ ಶಾಖೆಗಳನ್ನುತೆರೆದು ತಮ್ಮ ಸೇವೆಯನ್ನು ವಿಸ್ತರಿಸಿರುತ್ತಾರೆ.
