23.1 C
Karnataka
Saturday, November 23, 2024

ರಿಕ್ಷಾ ಡೈರಿ ಲೋಕಾರ್ಪಣೆ

ಮ೦ಗಳೂರು: ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9 ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಇವರು ಪುಸ್ತಕ ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ಇದರ ನಿರ್ದೇಶಕ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. ಲೇಖಕ ರೊನಿ ಅರುಣ್ ಪ್ರಸ್ತಾವನೆಗೈದು ವಿತೊರಿ ಕಾರ್ಕಳ ನಿರೂಪಿಸಿದರು.

ರಿಕ್ಷಾ ಡೈರಿ ದಿರ್ವೆಂ ಕೊಂಕಣಿ ಮಾಸಿಕದಲ್ಲಿ ಪ್ರಕಟವಾದ 44 ಲೇಖನಗಳ ಸಂಗ್ರಹ. ಕಲಾವಿದ ವಿಲ್ಸನ್ ಕಯ್ಯಾರ್ ಮುಖಪುಟ ರಚಿಸಿದ್ದಾರೆ. ಈ ಮೊದಲು ʻಬಿಡಾರ್ʼ ಕತಾಸಂಕಲನ ಹಾಗೂ ʻಥಕಾನಾತ್‌ಲ್ಲೊ ಝುಜಾರಿʼ (ಜೀವನ ಚರಿತ್ರೆ) ಪುಸ್ತಕಗಳನ್ನು ರೊನಿ ಅರುಣ್ ಬರೆದಿದ್ದು ʻಥಕಾನಾತ್‌ಲ್ಲೊ ಝುಜಾರಿʼ ಪುಸ್ತಕಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಲಭಿಸಿದೆ. ರಿಕ್ಷಾಡ ಡೈರಿ ಪುಸ್ತಕದ ರಿಯಾಯಿತಿ ಬೆಲೆ 100 ರೂ. ಮಾತ್ರ. ಪುಸ್ತಕಕ್ಕಾಗಿ ಮಾಂಡ್ ಸೊಭಾಣ್ ಕಛೇರಿ ಅಥವಾ ಲೇಖಕರನ್ನು ಸಂಪರ್ಕಿಸಬಹುದು ಎ೦ದು ಪ್ರಕಟನೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles