ಮಂಗಳೂರು : ಪರಸ್ಪರ ಬಾಂಧವ್ಯ ಬೆಸೆದು ಸೌಹಾರ್ದತೆ ನೆಲೆಸಲು ಕ್ರೀಡೆ ಸಹಕಾರಿಯಾಗಿದ್ದು, ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಇದಕ್ಕೆ ಪೂರಕವಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ. ಹೇಳಿದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ದ.ಕ.ಜಿಲ್ಲಾ ಪೊಲಿಸ್, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ರೋಹನ್ ಕಾರ್ಪೋರೇಶನ್ ನೇತೃತ್ವದಲ್ಲಿ ಬುಧವಾರ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಬ್ರಾೃಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ
ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾತನಾಡಿ ‘ಜನರನ್ನು ಒಗ್ಗೂಡಿಸುವ ಬ್ರಾೃಂಡ್ ಮಂಗಳೂರು ಪರಿಕಲ್ಪನೆಯ ವಿವಿಧ ಕಾರ್ಯಕ್ರಮಗಳು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನ ಎಂದರು.ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ .ಎನ್., ದ.ಕ.ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ ಕೆ ಶುಭ ಹಾರೈಸಿದರು. ರೋಹನ್ ಕಾರ್ಪೊರೇಷನ್‌ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಪಂದ್ಯಾಟ ಟ್ರೋಫಿ ಅನಾವರಣಗೊಳಿಸಿದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ ಇಂದಾಜೆ ಅಧ್ಯಕ್ಷ ತೆ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಸಹಾಯಕ ಕಮಿಷನರ್
ಹರ್ಷವರ್ಧನ್ ,ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಟ್ರಸ್ಟಿ ದೇವದಾಸ್ ಹೆಗ್ಡೆ ,ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಂಶುಪಾಲ ಸುಧೀರ್, ಡೀನ್ ರಮೇಶ್, ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ, ಸಹಾಯಕ ಪ್ರಾಧ್ಯಾಪಕರಾದ ವರುಣ್, ಪದ್ಮನಾಭ , ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಕಾರ್ಯಕ್ರಮ ನಿರ್ದೇಶಕ ವಿಲ್ಫ್ರೆಡ್
ಡಿಸೋಜ,ರಾಜೇಶ್ ಪೂಜಾರಿ ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕಾರ್ಯದರ್ಶಿ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.
ದ.ಕ.ಜಿಲ್ಲಾಧಿಕಾರಿ ತಂಡ, ಮಂಗಳೂರು ನಗರ ಪೊಲೀಸ್ ಆಯುಕ್ತರ ತಂಡ, ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಂಡ, ದ..ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಂಡ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು