24.5 C
Karnataka
Thursday, April 30, 2026

ಲ೦ಚ: ಪುತ್ತೂರು ತಹಶೀಲ್ದಾರ್ ಕಛೇರಿ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ

ಮ೦ಗಳೂರು: ಜಮೀನನ್ನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲ೦ಚಕ್ಕೆ ಬೇಡಿಕೆ ಇಟ್ಟು ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಪ್ರಕರಣ ಪುತ್ತೂರು ತಹಶೀಲ್ದಾರ್ ಕಛೇರಿಯಲ್ಲಿ ನಡೆದಿದೆ. ತಹಶೀಲ್ದಾರ್ ಕಛೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನೀಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ‌ ಆರೋಪಿ.

ಪಿರ್ಯಾದಿದಾರರ ಚಿಕ್ಕಪ್ಪ ನವರಿಗೆ ಪುತ್ತೂರು ತಾಲೂಕು ನೆಟ್ಟಣಿಗೆ ಮುಡೂರು ಗ್ರಾಮದಲ್ಲಿ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ದರ್ಖಾಸ್ತು ಮಂಜೂರಾಗಿದ್ದು, ಪಿರ್ಯಾದಿದಾರರ ಚಿಕ್ಕಪ್ಪನವರಿಗೆ ಅನಾರೋಗ್ಯ ಇದ್ದುದರಿಂದ ಅವರು ತನ್ನ ಸ್ವ-ಇಚ್ಛೆಯಿಂದ ಉಪ ನೋಂದಣಾಧಿಕಾರಿ ಕಛೇರಿ, ಪುತ್ತೂರು ಇಲ್ಲಿ ವೀಲುನಾಮೆ ಯಾನೆ ಮರಣ ಶಾಸನ ಬರೆಸಿ ಕೊಟ್ಟಿರುತ್ತಾರೆ. ಇದರ ಪ್ರಕಾರ ಅವರ ಚಿಕ್ಕಪ್ಪನ ಮರಣ ನಂತರ ಸದ್ರಿ ಜಮೀನಿನ ಸಂಪೂರ್ಣ ಹಕ್ಕು ಫಿರ್ಯಾದಿದಾರರಿಗೆ ಸೇರಿರುತ್ತದೆ. ಸದ್ರಿ ಜಮೀನು ಫಿರ್ಯಾದಿದಾರರ ಚಿಕ್ಕಪ್ಪನವರಾಗಿ ಮಂಜೂರಾಗಿ 27 ವರ್ಷ ಆಗಿರುತ್ತದೆ. ಸದರಿ ಜಮೀನನ್ನು ಪರಭಾರೆ ಮಾಡಲು ಪುತ್ತೂರು ತಹಶೀಲ್ದಾರ್, ಅವರಿಂದ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇದ್ದುದರಿಂದ ಪಿರ್ಯಾದಿದಾರರ ಚಿಕ್ಕಪ್ಪನವರು ಕಳೆದ ಡಿಸೆಂಬರ್ ನಲ್ಲಿ ಪುತ್ತೂರು ತಾಲೂಕು ತಹಶೀಲ್ದಾರರು ಅವರಿಗೆ ಸಾಗುವಳಿ ಚೀಟಿ ಮೂಲಕ ತಹಶೀಲ್ದಾರರಿಂದ ಮಂಜೂರಾದ ಜಾಗ ಮಾರಾಟ ಮಾಡುವರೇ ನಿರಾಕ್ಷೇಪಣಾ ಪತ್ರ ಕೋರಿ ಅರ್ಜಿ ಸಲ್ಲಿಸಿರುತ್ತಾರೆ.

ಇಲ್ಲಿಯವರೆಗೆ ನಿರಾಕ್ಷೇಪಣಾ ಪತ್ರ ಸಿಕ್ಕಿರದೇ ಇದ್ದುದರಿಂದ ಸದ್ರಿ ಅರ್ಜಿಯ ಬಗ್ಗೆ ವಿಚಾರಿಸಲು ಫಿರ್ಯಾದಿದಾರರ ಚಿಕ್ಕಪ್ಪನವರು ಫಿರ್ಯಾದಿದಾರರಿಗೆ ಹೇಳಿದ್ದು, ಈ ಬಗ್ಗೆ ಪಿರ್ಯಾದಿದಾರರು ಜೂನ್ 26 ರಂದು ಪುತ್ತೂರು ತಹಶೀಲ್ದಾರ್ ಕಛೇರಿಯ ಭೂ ಸುಧಾರಣಾ ಶಾಖೆಗೆ ಹೋಗಿ ಕೇಸ್ ವರ್ಕರ್ ಸುನೀಲ್‌ರವರಲ್ಲಿ ತನ್ನ ಚಿಕ್ಕಪ್ಪ ರವರು ಸಲ್ಲಿಸಿದ ನಿರಾಕ್ಷೇಪಣಾ ಪತ್ರದ ಬಗ್ಗೆ ವಿಚಾರಿಸಿದಾಗ ಕೇಸ್ ವರ್ಕರ್ ಸುನೀಲ್‌ರವರು ತಹಶೀಲ್ದಾರ್‌ರವರ ಸಹಿಗೆ ಬಾಕಿ ಇರುತ್ತದೆ. ಅದಕ್ಕೆ ಸ್ವಲ್ಪ ಹಣ ಖರ್ಚು ಇರುತ್ತದೆ, ‘ತಹಶೀಲ್ದಾರರಿಗೆ (10,000/-) ಹತ್ತು ಸಾವಿರ ರೂಪಾಯಿ ಕೊಡಬೇಕಾಗುತ್ತದೆ. ಮತ್ತೆ ನನಗೂ ಹಣ ಕೊಡಬೇಕಾಗುತ್ತದೆ ಎಂದು ಹೇಳಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ವರ್ಕರ್ ಸುನೀಲ್ ಮತ್ತು ತಹಶೀಲ್ದಾರ್, ಪುತ್ತೂರು ತಾಲೂಕು ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

28.08.2025 ರಂದು ಸುನೀಲ್ ಅವರು ಪಿರ್ಯಾದುದಾರರಿಂದ ರೂ. 12,000/- (ಹನ್ನೆರಡು ಸಾವಿರ) ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಮುಂದುವರೆದು ಪುತ್ತೂರು ತಾಲೂಕು ತಹಶೀಲ್ದಾರರ ಪಾತ್ರದ ಕುರಿತು ತನಿಖೆ ನಡೆಸಲಾಗುವುದು. ತಹಶೀಲ್ದಾರ್, ಪುತ್ತೂರುಪ್ರಸ್ತುತ ತಲೆಮರೆಸಿಕೊಂಡಿರುತ್ತಾರೆ.

ಈ ಕಾರ್ಯಾಚರಣೆಯಲ್ಲಿ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖ‌ರ್ ಕೆ.ಎನ್, ರವಿ ಪವಾರ್ ಅವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles