17.5 C
Karnataka
Friday, November 22, 2024

ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯ: ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ದೇಶ ವಿದೇಶಗಳಲ್ಲಿ ಬಂಟರ ಕೊಡುಗೆ ಅನನ್ಯವಾಗಿದೆ. ಕೃಷಿ ಪರಂಪರೆಯಿಂದ ಬಂದ ಬಂಟ ಸಮುದಾಯ ಪವಿತ್ರವಾದ ದೀಪಾವಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಈ ನಿಟ್ಟಿನಲ್ಲಿ ಬಂಟ್ವಾಳ ಬಂಟರ ಸಂಘ ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ ಇವರ ನೇತೃತ್ವದಲ್ಲಿ ದೀಪಾವಳಿ ಹಬ್ಬವನ್ನು ಉತ್ತಮವಾಗಿ ನಡೆಸಿದ್ದಾರೆ ಎಂದು ಎಂಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ ಪ್ರಕಾಶ್ ಶೆಟ್ಟಿ ತಿಳಿಸಿದರು.
ಬಂಟರ ಸಂಘ ಬಂಟವಾಳ ತಾಲೂಕು (ರಿ) ಯುವ ವಿಭಾಗದ ಆಶ್ರಯದಲ್ಲಿ ಬಂಟ್ವಾಳ ಬಂಟರ ಭವನದಲ್ಲಿ ನಡೆದ ಬೆಳ್ಳಿಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಪ್ರಯುಕ್ತ ಬೊಲ್ಪುದ ಐಸಿರಿ- 2 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೆ ಪ್ರಕಾಶ್ ಶೆಟ್ಟಿ ಮಾತನಾಡಿದರು.
ಬಂಟ್ವಾಳ ಬಂಟರ ಯುವ ವಿಭಾಗ ನಮ್ಮ ಸಂಸ್ಕೃತಿಯನ್ನು ಬಿಂಬಿಸಿ, ಸಂಪ್ರದಾಯದಂತೆ ಕಾರ್ಯಕ್ರಮವನ್ನು ನಡೆಸಿದ್ದಾರೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಶ್ಲಾಘಿಸಿದರು.ಸಮುದಾಯದ ವಿಚಾರಕ್ಕೆ ಬಂದಾಗ ಎಲ್ಲರೂ ಒಟ್ಟಾಗಿ ಸಮುದಾಯದ ಏಳಿಗೆಗಾಗಿ ಕೈ ಜೋಡಿಸಿ ಕೆಲಸ ಮಾಡಬೇಕೆಂದು ಮುಂಬಯಿ ಹೇರಂಬ ಇಂಡಸ್ಟ್ರೀಸ್ ನ ಆಡಳಿತ ನಿರ್ದೇಶಕ ಸದಾಶಿವ ಶೆಟ್ಟಿ ಕನ್ಯಾನ ತಿಳಿಸಿದರು.


ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಎ ಸದಾನಂದ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಉದಯ ಶೆಟ್ಟಿ ಮುನಿಯಾಲು, ಮಾಜಿ ಸಚಿವ ಬಿ ರಮಾನಾಥ ರೈ, ನಗ್ರಿಗುತ್ತು ವಿವೇಕ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ,ಶಾಸಕ ಅಶೋಕ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪ್ರವೀಣ್ ಚಂದ್ರ ಆಳ್ವ, ಜಗನ್ನಾಥ ಚೌಟ, ಡಾ. ಪ್ರಶಾಂತ್ ಮಾರ್ಲ, ಲೋಕೇಶ್ ಶೆಟ್ಟಿ ಕುಳ, ರಂಜನ್ ಶೆಟ್ಟಿ ಅರಳ, ಪ್ರತಿಭಾ ರೈ, ರಮಾ ಭಂಡರಿ, ಗೋಕುಲ್ ಭಂಡಾರಿ, ಕರುಣ್ ಶೆಟ್ಟಿ, ದೀಪಕ್ ರೈ, ಶುಭಕರ್ ಶೆಟ್ಟಿ, ವಿಕ್ರಮ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಡಾ ಎ ಸದಾನಂದ ಶೆಟ್ಟಿ, ಸದಾಶಿವ ಶೆಟ್ಟಿ ಕನ್ಯಾನ, ಕೆ ಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ ಸ್ವಾಗತಿಸಿದರು. ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಬಂಟವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ರಂಗೋಲಿ ಅಧ್ಯಕ್ಷತೆ ವಹಿಸಿದ್ದರು. ಕೆ. ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ವಿತರಿಸಿದರು. ಭವಿಷ್ ಶೆಟ್ಟಿ ಕೊಡಿಬೆಟ್ಟು ಸನ್ಮಾನ‌ಪತ್ರ ವಾಚಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ‌ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಹಾಸ್ಯ ಸಂಗೀತ ನೃತ್ಯ ಪ್ರದರ್ಶನ ನಡೆಯಿತು. ಸಾಮೂಹಿಕ ಬಲೀಂದ್ರ ಪೂಜೆ, ಗೋಪೂಜೆ ಬಳಿಕ ಸುಡುಮದ್ದು ಪ್ರದರ್ಶನ ನಡೆಯಿತು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles