ಮಂಗಳೂರು: ಗಣಪತಿಯು ಭಕ್ತರ ಇಷ್ಟಾರ್ಥ ಈಡೇರಿಸುವ ದೇವರು ಎಂದು ಮಾಜಿ ಸಚಿವ ಬಿ.ನಾಗರಾಜ್ ಶೆಟ್ಟಿ ಅವರು ಹೇಳಿದರು.
ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು. ಯುವ ರಾಜಕೀಯ ಮುಂದಾಳು, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರು ಮಾತನಾಡಿ, ಅಪೂರ್ವ ನಾಯಕತ್ವದ ವ್ಯಕ್ತಿತ್ವ ಹೊಂದಿರುವ ಬಂಟರು ಸ್ವಾಭಿಮಾನಿಗಳಾಗಿದ್ದು, ಸಮಾಜದ ಎಲ್ಲ ವರ್ಗಗಳೊಂದಿಗೆ ಬೆರೆತು ಬಾಳುವವರು ಎಂದರು.
ಶಾಸಕ ವೇದವ್ಯಾಸ್ ಕಾಮತ್, ಖ್ಯಾತ ವೈದ್ಯ ಡಾ. ಹನ್ಸರಾಜ್ಆಳ್ವ, ಸಿಎ ಪ್ರಭಾಕರ್ ಶೆಟ್ಟಿ ಅತಿಥಿಗಳಾಗಿ ಪಾಲ್ಗೊಂಡು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮ.ನ.ಪಾ.ದ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಉಪಾಧ್ಯಕ್ಷ ಹೇಮಾನಾಥ್ ಶೆಟ್ಟಿ ಕಾವು, ಕೋಶಾಧಿಕಾರಿ ಸಿ ಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ್ ಭಂಡಾರಿ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣ ಪ್ರಸಾದ್ ರೈ, ಗಣೇಶೋತ್ಸವ ಸಮಿತಿಯ ಸಂಚಾಲಕರುಗಳಾದ ದಿವಾಕರ ಸಾಮಾನಿ ಚೇಳಾರ್ ಗುತ್ತು, ಅಶ್ವತ್ತಾಮ ಹೆಗ್ಡೆ, ಮನೀಶ್ ರೈ ಹಾಗೂ ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಅವರು ಸ್ವಾಗತಿಸಿದರು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಟಾನದ ಟ್ರಸ್ಟಿ ಡಾ. ಆಶಾಜ್ಯೋತಿ ರೈ ವಂದಿಸಿದರು. ಪುರುಷೋತ್ತಮ್ ಭಂಡಾರಿ ಅಡ್ಯಾರ್ ಹಾಗೂ ಭಾಗ್ಯರಾಜ್ ಶೆಟ್ಟಿ ನಿರೂಪಿಸಿದರು.ಬಳಿಕ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಸುಮಾರು 65 ಭಜನಾ ತಂಡಗಳೊಂದಿಗೆ ಶ್ರೀ ಗಣೇಶನ ಶೋಭಾಯಾತ್ರೆ ನಡೆದು ರಥ ಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಗ್ರಹ ವಿಸರ್ಜಿಸಲಾಯಿತು.