ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ವಿದ್ಯಾಭಟ್, ಸ್ಪರ್ಧಾತ್ಮಕ ಜಗತ್ತಿಗೆ ಅಂಕಗಳ ಜೊತೆಗೆ ಉದ್ಯೋಗ
ಕೌಶಲಗಳು ಅಗತ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ವಿಶೇಷ ಉಪನ್ಯಾಸದ ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ
ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಪ್ರೊ. ಲತಾ ಪಂಡಿತ್, ವಿದ್ಯಾರ್ಥಿ ಬದುಕಿನಲ್ಲಿ ಕಲಿಕಾ ಪ್ರಕ್ರಿಯೆನಿರಂತರವಾಗಿ ಸಾಗಬೇಕೆಂದರು.ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಯೋಜಕ ಪ್ರೊ. ರಾಮಕೃಷ್ಣ ಬಿ. ಎಂ.
ಸೇರಿದಂತೆ ನಾನಾ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.