24.5 C
Karnataka
Thursday, April 30, 2026

ಆರೋಪಿಗಳು ತಲೆಮರೆಸಿಕೊಂಡಿರುವ ಪ್ರಕರಣಗಳು: ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದ ಆಸ್ತಿ ಮುಟ್ಟುಗೊಲು ಮತ್ತು ದಂಡ ಪ್ರಕ್ರಿಯೆ

ಮ೦ಗಳೂರು: ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಪರಿಶೀಲಿಸಿ, ಆರೋಪಿಗಳ ಜಾಮೀನು ಸ್ಯೂರಿಟಿದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು ನ್ಯಾಯಾಲಯದಲ್ಲಿ ಸ್ಯೂರಿಟಿಗಾಗಿ ನೀಡಿದ ಆಸ್ತಿಗಳನ್ನು ಮುಟ್ಟುಗೊಲು ಹಾಕುವ ಮತ್ತು ದಂಡ ವಿಧಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ.
ಕಳೆದ ಒಂದು ತಿಂಗಳಿನಿಂದ 5 ಅಪರಾಧ ಪ್ರಕರಣಗಳಲ್ಲಿ ಸ್ಯೂರಿಟಿಗಾಗಿ ಇರಿಸಲಾಗಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದು, 2 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡ ವಿಧಿಸಲಾಗಿದೆ. 4 ಪ್ರಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಕಾರ್ಯಾಚರಣೆ ಆರಂಭವಾದ ಬಳಿಕ 2 ಪ್ರಕರಣಗಳಲ್ಲಿ ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣಾಗಿರುತ್ತಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿರುವ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪಿಗಳ ಬಿಡುಗಡೆ ಸಮಯದಲ್ಲಿ ಸ್ಯೂರಿಟಿದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. ನ್ಯಾಯಾಲಯದಿಂದ ಆದೇಶವನ್ನು ಪಡೆದು ಸ್ಯೂರಿಟಿದಾರರಿಗೆ ಸಂಬಂಧಿಸಿದ ಸೊತ್ತುಗಳನ್ನು ಮುಟ್ಟುಗೋಲು ಹಾಕಲು, ಸ್ಯೂರಿಟಿದಾರರಿಂದ ಆಧಾರವಾಗಿಟ್ಟಿದ್ದ ದಂಡವನ್ನು ವಸೂಲಿ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಬಗ್ಗೆ ಸಂಬಂಧಪಟ್ಟ ಮುಟ್ಟುಗೋಲು ಮಾಡಲಾಗಿರುವ ಆಸ್ತಿಯ ಆರ್.ಟಿ.ಸಿ. ಯಲ್ಲಿ ವಿವರಗಳನ್ನು ನಮೂದಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆಗಳು ಚಾಲ್ತಿಯಲ್ಲಿರುತ್ತದೆ.
ಈ ಕಾರ್ಯಾಚರಣೆಯು ಮುಂದುವರಿದಿದ್ದು, ಈ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದೇನೆಂದರೆ ಆರೋಪಿಗಳ ಪರ ಜಾಮೀನು ಕೊಡುವಾಗ ಆರೋಪಿಯ ಪೂರ್ವಾಪರ ತಿಳಿದುಕೊಂಡು ಎಚ್ಚರ ವಹಿಸಬೇಕಾಗಿದೆ ಎ೦ದು
ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles