ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ
ನವೆಂಬರ್ 21 ಗುರುವಾರ ಬೆಳಿಗ್ಗೆ 10.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ಬೆಳಿಗ್ಗೆ 10:55 ಕ್ಕೆ ನಗರದ ಫಾದರ್ ಮುಲ್ಲರ್ ಕನ್ವೆನ್‍ಷನ್ ಸೆಂಟರ್‍ನಲ್ಲಿ ನಡೆಯಲಿರುವ ರೂಬಿಕಾಮ್ 2024, ರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ....
ತ್ವರಿತ ಗತಿಯಲ್ಲಿ ಸರಕಾರಿ ಸೇವೆ ಒದಗಿಸಲು ಇಲಾಖೆಗಳಿಗೆ ಉಪಲೋಕಾಯುಕ್ತರ ಸೂಚನೆ
ಮಂಗಳೂರು: ವಿವಿಧ ಸರಕಾರಿ ಇಲಾಖೆಗಳು ಸಾರ್ವಜನಿಕರ ವಿವಿಧ ಅರ್ಜಿ ಮತ್ತು ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕೆಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಸೂಚಿಸಿದ್ದಾರೆ.
ಡಿಸೆಂಬರ್ 1ರಿಂದ 3ರವರೆಗೆ ಉಪಲೋಕಾಯುಕ್ತರು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಮಂಗಳವಾರ ಆನ್‍ಲೈನ್ ಮೂಲಕ ಸಭೆ ನಡೆಸಿದರು.
ಪ್ರಮುಖವಾಗಿ ಕಂದಾಯ, ಅರಣ್ಯ, ಆರೋಗ್ಯ, ನಗರಾಡಳಿತ ಮತ್ತು ಪಂಚಾಯತ್‍ರಾಜ್...
ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ
ಧರ್ಮ ಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ,ದಕ್ಷಿಣ ಕನ್ನಡ...
ಅಂತರ್ ಕಾಲೇಜು ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶಾ ಸ್ಪರ್ಧೆ
ಮಂಗಳೂರು : ಮಂಗಳೂರು: ಸಾಹಿತ್ಯ ಸಮಾಜಕ್ಕೆ ಹೊಸ ಬೆಳಕನ್ನು ಚೆಲ್ಲಬಲ್ಲುದು, ವಿಭಿನ್ನವಾಗಿ ಯೋಚನೆ ಮಾಡುವಂತೆ ಮಾಡಬಲ್ಲುದು. ನಮ್ಮ ಮಣ್ಣಿನ ಸಾಹಿತ್ಯ, ಸಂಸ್ಕೃತಿ, ಉದಾತ್ತತೆಯನ್ನು ಯುವಜನರಿಗೆ ತಲುಪಿಸುವಉದ್ದೇಶವನ್ನು ಜನವರಿ 11 ಮತ್ತು 12 ರಂದು ನಡೆಯಲಿರುವ ಮಂಗಳೂರು ಲಿಟ್ ಫೆಸ್ಟ್ ಹೊಂದಿದೆ, ಎಂದು ಭಾರತ್ ಫೌಂಡೇಶನ್‌ನ ಟ್ರಸ್ಟಿ ಸುನಿಲ್ ಕುಲಕರ್ಣಿ ಹೇಳಿದರು.ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ...
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ
ಮಂಗಳೂರು * ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ...
ದೇಶದ ಆರ್ಥಿಕಾಭಿವೃದ್ಧಿಗೆ ಮುನ್ನುಡಿ ಬರೆದ ಇಂದಿರಾ ಗಾಂಧಿ: ಬಿ.ರಮಾನಾಥ ರೈ
ಮಂಗಳೂರು: ಇಂದಿರಾ ಗಾಂಧಿ ಅವರು ಜನಪರ ಹಾಗೂ ರಾಷ್ಟ್ರ ಕೇಂದ್ರೀಕೃತ ನೀತಿಗಳಿಂದ ಜನಪ್ರಿಯವಾಗಿದ್ದರು. ಬ್ಯಾಂಕುಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿಯ ಮೂಲಕ ದೇಶದ ಆರ್ಥಿಕಾಭಿವೃದ್ಧಿಗೆ ಮುನ್ನುಡಿ ಬರೆದರು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನ ಪ್ರಯುಕ್ತ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಭಾವಚಿತ್ರಕ್ಕೆ...
ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇವರ ಸಹಯೋಗದೊಂದಿಗೆ ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಜಾಥಾ ಮೂಲಕ ಚಾಲನೆ ನೀಡಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣಕೋಶ, ಜಿಲ್ಲಾ ಕಾರ್ಯಕ್ರಮಾಧಿಕಾರಿ, ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ಕ್ಯಾನ್ಸರ್ ರೋಗಕ್ಕೆ ಪ್ರಮುಖ ಕಾರಣಗಳಲ್ಲಿ...
ವಿಶ್ವ ಶೌಚಾಲಯ ದಿನಾಚರಣೆ – ವಿಶೇಷ ಆಂದೋಲನ
ಮಂಗಳೂರು ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ, ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ನವೆಂಬರ್ 19ರಿಂದ ಡಿಸೆಂಬರ್ 10ರವರೆಗೆ ವಿಶ್ವ ಶೌಚಾಲಯ ದಿನದ ಅಂಗವಾಗಿ ವಿಶೇಷ ಆಂದೋಲನ ನಡೆಸಲಾಗುತ್ತಿದೆ.
ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಈ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವ ಶೌಚಾಲಯ ದಿನಾಚರಣೆಯ ಪ್ರಯುಕ್ತ...
ರಾಷ್ಟ್ರೀಯ ಪತ್ರಿಕಾ ದಿನಾಚರಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡಿ ‘ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಪತ್ರಕರ್ತರು ಸಮಾಜವನ್ನು ಕಾಲಕಾಲಕ್ಕೆ ಎಚ್ಚರಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ದಿನ ನಿತ್ಯದ ಆಗುಹೋಗುಗಳನ್ನು...
“ಭಕ್ತಿ ಪರಂಪರೆ ಬೆಳಗಿಸಿದ ಧೀಮಂತ ವ್ಯಕ್ತಿ ಕನಕದಾಸರು”
ಮ೦ಗಳೂರು: ದಾಸ ಪರಂಪರೆಗೆ ವಿಶೇಷ ಕೊಡುಗೆಯನ್ನು ಕೊಟ್ಟು ಇಂದು ಭಕ್ತಿ ಪಂಥದ ಪರಂಪರೆಯನ್ನು ಬೆಳಗಿಸಲು ಶ್ರಮಿಸಿದ ಧೀಮಂತ ವ್ಯಕ್ತಿ ಕನಕದಾಸರು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯೋಜನೆಯಲ್ಲಿ ಮಂಗಳೂರು ಸರಕಾರಿ ನೌಕರರ ಸಂಘದ ನಂದಿನಿ ಸಭಾಭವನದಲ್ಲಿ...