ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತ ಮುತ್ತ ನಿಷೇಧಾಜ್ಞೆ
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೆರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮಾರ್ಚ್ 28 ರಿಂದ ಏಪ್ರಿಲ್ 8ರ ಸೋಮವಾರ ಬೆಳ್ಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ...
ಅಗಲ್ಪಾಡಿ; ಗಣಪತಿಯಾಗದ ಪೂರ್ಣಾಹುತಿ, ಋಕ್ ಸಂಹಿತಾ ಯಾಗ ಪ್ರಾರಂಭ
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು.
ಮಂಗಳವಾರ ಸಂಜೆ ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆದು ಗೋಧೂಳಿ...
ಮ೦ಗಳೂರು: ಸದ್ಯ ನೀರಿನ ಅಭಾವ ಇಲ್ಲ; ಲಭ್ಯತೆ ಬಗ್ಗೆ ನಿಗಾ: ಜಿಲ್ಲಾಧಿಕಾರಿ
ಮ೦ಗಳೂರು: ಮ೦ಗಳೂರು ನಗರದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಆದರೆ ಸ೦ಭಾವ್ಯ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ತು೦ಬೆಯಲ್ಲಿ ನೀರಿನ ಪ್ರಮಾಣದ ಮೇಲೆ ನಿರ೦ತರ ನಿಗಾ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತುಂಬೆಯಲ್ಲಿ ಬುಧವಾರ ನೀರಿನ ಪ್ರಮಾಣ 5.48 ಮೀಟರ್...
12,797 ಲೀಟರ್ ಅಕ್ರಮ ಮದ್ಯ ವಶ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾ.27 ರವರೆಗೆ 41,68,815 ರೂ.ಗಳ ಮೌಲ್ಯದ 12,797 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 5,94,950 ರೂ.ಗಳ ಮೌಲ್ಯದ 1.97 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 184 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 432 ವಿದ್ಯಾರ್ಥಿಗಳು 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಹಲವು ಕೊಠಡಿಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಯವರು, ನಂತರ...
ಲೋಕಸಭಾ ಚುನಾವಣೆ:ಗುರುವಾರದಿ೦ದ ನಾಮಪತ್ರ ಸಲ್ಲಿಕೆ ಆರ೦ಭ
ಮ೦ಗಳೂರು:ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. .ಎ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎ೦ದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಪಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಚುನಾವಣಾ ಮತದಾನ...
ಮೌನ ದೊಳಗಿನ ಮಾತು ‘ ಕವನ ಸಂಕಲನದ ಬಿಡುಗಡೆ
ಮ೦ಗಳೂರು: ಅಮೃತ ಪ್ರಕಾಶನ ಪತ್ರಿಕೆವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ಮೌನದೊಳಗಿನ ಮಾತು ' ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಯುಗ ಪುರುಷ ಪತ್ರಿಕೆ ಸಂಪಾದಕ...
ಹುಚ್ಚು ಮನಸ್ಸಿನ ಸಾಹಸ ಯಶಸ್ಸಿಗೆ ಕಾರಣ :ಡಾ.ಎಂ.ಮೋಹನ ಆಳ್ವ
ಮಂಗಳೂರು : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗ ಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್ನ...
ಮದ್ಯ ನಿಷೇಧ
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ...
ಎಸ್ಎಸ್ಎಲ್ಸಿ ಪರೀಕ್ಷೆ: 28,537 ವಿದ್ಯಾರ್ಥಿಗಳು ಹಾಜರು
ಮಂಗಳೂರು: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.25ರಂದು ಸೋಮವಾರ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 28,866 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 28,537 ವಿದ್ಯಾಥಿಗಳು ಹಾಜರಾಗಿದ್ದು, 329 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





