ಜಪ್ಪಿನಮೊಗರು ಮಾರ್ಗವಾಗಿ ಸಾಗುವ ಬಸ್ಸನ್ನು ಪಡೀಲುವರೆಗೆ ವಿಸ್ತರಿಸಲು ಒತ್ತಾಯ
ಮ೦ಗಳೂರು: ಸ್ಟೇಟ್ ಬ್ಯಾಂಕ್ ನಿಂದ ಜಪ್ಪಿನಮೊಗರು ಮಾರ್ಗವಾಗಿ ಬಜಾಲ್ ಜೆ.ಎಮ್ ರೋಡ್ ವರೆಗೆ ರೂಟ್ ನಂ 9 ಕುಸುಮ ಎಂಬ ಬಸ್ ಸಂಚರಿಸುತ್ತಿದ್ದು ಈ ಬಸ್ಸಿನ ಸೇವೆಯನ್ನು ಪಡೀಲುವರೆಗೆ ವಿಸ್ತರಿಸಬೇಕೆಂಬ ಕೂಗು ಜಪ್ಪಿನಮೊಗರು ಸುತ್ತಮುತ್ತಲ ಗ್ರಾಮದ ನಿವಾಸಿಗಳಲ್ಲಿ ಕೇಳಿ ಬರುತ್ತಿದೆ. ಜಿಲ್ಲಾಡಳಿತ, ಸಾರಿಗೆ ಇಲಾಖೆ ಈ ಕೂಡಲೇ ಜಪ್ಪಿನಮೊಗರು ಮಾರ್ಗವಾಗಿ ಸಂಚರಿಸುವ ಈ ಬಸ್ಸುಗಳ...
ವಿಮಾನ ದುರಂತ: ಮೇ 22 ರಂದು ಶ್ರದ್ಧಾಂಜಲಿ ಕಾರ್ಯಕ್ರಮ
ಮಂಗಳೂರು: 2010 ರ ವಿಮಾನ ದುರಂತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ಕೂಳೂರು ತಣ್ಣೀರು ಬಾವಿ ರಸ್ತೆಯ ಬಳಿ ಜರಗಲಿದೆ.2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಜರಗಿಸುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ...
ಮಹಾನಗರಪಾಲಿಕೆ ಆಸ್ತಿ ತೆರಿಗೆ: ಶೇ.5 ರಿಯಾಯಿತಿ ವಿಸ್ತರಣೆ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿತೆರಿಗೆಯನ್ನು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ (ಎಪ್ರಿಲ್ ತಿಂಗಳಲ್ಲಿ) ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್...
ಜೂ.1 ರಿಂದ ಮೀನುಗಾರಿಕೆ ನಿಷೇಧ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61...
ತಮಿಳುನಾಡಿನ ಕುಂಬಕೋಣಂನ ಗಿರಿ ಕುಟುಂಬದೊಂದಿಗೆ ಪುನರ್ಮಿಲನ
ಮ೦ಗಳೂರು: ಆರು ತಿಂಗಳ ಹಿ೦ದೆ ನಾಪತ್ತೆಯಾಗಿದ್ದ ತಮಿಳುನಾಡಿನ ಕುಂಬಕೋಣಂನ ಗಿರಿ ಮೇ15ರ೦ದು ತಮ್ಮ ಕುಟುಂಬದೊಂದಿಗೆ ಪುನರ್ಮಿಲನಗೊಂಡರು.ಕಾಸರಗೋಡಿನ ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಸಹಾಯದಿಂದ ನಡೆದ ಈ ಪುನರ್ಮಿಲನವು ಅವರ ತಂದೆ, ತಾಯಿ ಮತ್ತು ಇಬ್ಬರು ಸಹೋದರಿಯರಿಗೆ ಅಪಾರ ಆನಂದ ತಂದಿತು.
ತಂಜಾವೂರು ಜಿಲ್ಲೆಯ ಕುಂಬಕೋಣಂನ ಮೇಲಕವೇರಿ ಗ್ರಾಮದ ಪೆರುಮಂಡಿ ಉತ್ತರ ಬೀದಿಯ ನಿವಾಸಿ ಗಿರಿ ಅವರು...
ಇಂದು ವಿಜಯನಗರದಲ್ಲಿ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ
ಮಂಗಳೂರು: ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಮಾಡುವುದರೊಂದಿಗೆ ನೆಮ್ಮದಿ ಕಲ್ಪಿಸಲಾಗುತ್ತಿದೆ. ಎರಡು ವರ್ಷಗಳ ಸಾಧನೆಯನ್ನು ನಾಡಿನ ಜನರಿಗೆ ಸಮರ್ಪಣೆ ಮಾಡುವುದರೊಂದಿಗೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆಯನ್ನು ಈ...
ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂ. 1 ರಿಂದ ನ.1ರವರೆಗೆ ಕೆಲವು ರೈಲುಗಳ ಸಂಚಾರ ತಾತ್ಕಾಲಿಕ ರದ್ದು
ಮ೦ಗಳೂರು : ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನುಜೂ. 1 ರಿಂದ ನ.1ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.ಮೇ 31 ರಿಂದ ನವೆಂಬರ್ 1ವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರುಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2,...
ಮೇ 16: ಜಿಲ್ಲಾಧಿಕಾರಿಗಳ ನೂತನ ಕಚೇರಿ ”ಪ್ರಜಾ ಸೌಧ” ಉದ್ಘಾಟನೆ
ಮಂಗಳೂರು: ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ''ಪ್ರಜಾ ಸೌಧ" ಶುಕ್ರವಾರ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಸಂಜೆ 4:15ಕ್ಕೆ ಜಿಲ್ಲಾಧಿಕಾರಿಗಳ ನೂತನ ಕಚೇರಿ ''ಪ್ರಜಾ ಸೌಧ" ಉದ್ಘಾಟಿಸುವರು.
ಒಳಾಂಗಣ ಕ್ರೀಡಾಂಗಣ
ಮಧಾಹ್ನ 3:20 ಕ್ಕೆ ನಗರಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು...
ಐಟಿಐ ಪ್ರವೇಶ:ಅರ್ಜಿ ಆಹ್ವಾನ
ಮಂಗಳೂರು: ನಗರದ ಕೈಗಾರಿಕಾ ತರಬೇತಿ ಸಂಸ್ಥೆಗೆ ಆಗಸ್ಟ್ 2025ನೇ ಸಾಲಿಗೆÀ ಮೆರಿಟ್ ಕಂ ರಿಸರ್ವೇಶನ್ ಆಧಾರಿತ ಪ್ರವೇಶವÀನ್ನು ಪಡೆಯಲು ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಸ್ವತ: ಅಥವಾ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿರುವ ಹೆಲ್ಪ್‍ಡೆಸ್ಕ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ. ಆನ್‍ಲೈನ್...
ಇಂದು ಜಿಲ್ಲೆಗೆ ಮುಖ್ಯಮಂತ್ರಿ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಮಧ್ಯಾಹ್ನ 3:20 ಕ್ಕೆ ನಗರಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಮೊದಲು ನಗರದ ಉರ್ವಾ ಮಾರ್ಕೆಟ್‍ನಲ್ಲಿ ನಿರ್ಮಾಣಗೊಂಡಿರುವ ಒಳಾಂಗಣ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದಾರೆ.ನಂತರ ಸಂಜೆ 4:15 ಕ್ಕೆ ಪಡೀಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನೂತನ ಕಚೇರಿ "ಪ್ರಜಾಸೌಧ" ಉದ್ಘಾಟನೆ, ಐತಿಹಾಸಿಕ ದರ್ಖಾಸ್ತು ಪೋಡಿ ಅಭಿಯಾನದ...