ಪಕ್ಷಿಗಳಿಗೆ ನೀರಿಡುವ ಕಾರ್ಯ ಶ್ಲಾಘನೀಯ: ಪ್ರೊ. ಗಣಪತಿ ಗೌಡ
ಮಂಗಳೂರು: ಪರಿಸರ ನಾಶ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಜಾಗತಿಕ ತಾಪಮಾನ ಏರಿಕೆಯಾಗಿದೆ.ಇದು ಪ್ರಾಣಿಪಕ್ಷಿಗಳ ಅಸ್ಥಿತ್ವದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಪಕ್ಷಿಗಳಿಗೆ ನೀರಿಡುವ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು. ನೀರು ಎಲ್ಲರ ಅಗತ್ಯಗಳಲ್ಲಿ ಒಂದಾಗಿದೆ. ಮನುಷ್ಯನಾದರೆ ನೀರಿರುವ ಕಡೆಹುಡುಕಿಕೊಂಡು...
ಶುಕ್ರವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು
ಮಂಗಳೂರು : ಪ್ರಸಕ್ತ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಶುಕ್ರವಾರ ಆರಂಭವಾಗಲಿದ್ದು, ಜಿಲ್ಲೆಯಲ್ಲಿ 29760 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 92 ಪರೀಕ್ಷಾ ಕೇಂದ್ರಗಳ, 1332 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಈ ಪರೀಕ್ಷೆ ದಕ್ಷಿಣ ಕನ್ನಡ ಜಿಲ್ಲೆಯ 521 ಶಾಲೆಗಳ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು...
ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ತರ : ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು,...
ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣ: ಮುಲ್ಲೈ ಮುಗಿಲನ್
ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬ೦ಧಿಸಿ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ನಡೆದಿದ್ದ ಮತದಾನದ ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸುರತ್ಕಲ್ನ ಎನ್ಐಟಿಕೆಯ ಸ್ಟ್ರಾಂಗ್ ರೂಂನಲ್ಲಿ ಬಿಗಿ ಭದ್ರತೆ, ಸಿಸಿ ಕಣ್ಗಾವಲಿನಲ್ಲಿ ಇರಿಸಲಾಗಿರುವ ಇವಿಎಂ ಹಾಗೂ ಅಂಚೆ ಮತಪತ್ರಗಳ ಎಣಿಕೆಯ ಸಂದರ್ಭ ಎಣಿಕೆ ಕೇಂದ್ರಕ್ಕೆ ಚುನಾವಣಾ ಆಯೋಗದ ಅಧಿಕೃತ ಗುರುತಿನ ಚೀಟಿಯವರಿಗೆ 3...
ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು...
ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ:ನಳಿನ್ಕುಮಾರ್ ಕಟೀಲ್
ಮಂಗಳೂರು : ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್ಕುಮಾರ್ ಕಟೀಲ್ ಖಂಡಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಎದುರಾಗಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಗೂಂಡಾಗಿರಿ ನಡೆಸಲು ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಶಾಸಕರ ದರ್ಪಕ್ಕೆ ಬಿಜೆಪಿ...
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣ
ಮಂಗಳೂರು : ಸಮಾಜದ ಅಭಿವೃದ್ಧಿಗೆ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ಶ್ರೇಯಸ್ಸು ಲಭಿಸುತ್ತದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.ನಗರದ ಓಶಿಯನ್ಪರ್ಲ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಲೋಗೋ ಅನಾವರಣಗೊಳಿಸಿ ಮಾತನಾಡಿದ ಅವರು...
ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.ಉದ್ಘಾಟನೆಯನ್ನು ನೆರವೇರಿಸಿ...
ಶಿಕ್ಷಕ, ಉದ್ಯಮಿ ಬೆಂಜಮಿನ್ ಡಿಸೊಜಾ ನಿಧನ
ಮ೦ಗಳೂರು: ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್ನ ಬೆಂಜಮಿನ್ ಡಿ ಸೊಜಾ( 75 ) ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಅವರು ಪತ್ನಿ,ಸುರತ್ಕಲ್ ಗೋವಿಂದಾಸ ಕಾಲೇಜಿನ ವಿಶ್ರಾಂತ ಸಹಾಯಕ ಪ್ರಾಧ್ಯಾಪಕಿ ವಾಯ್ಲೆಟ್ ಡಿ ಸೊಜಾ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್...
ಪೆರಿಯಶಾಂತಿ-ಪೈಚಾರ್, ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ : ಸಚಿವ ಗಡ್ಕರಿಗೆ ಕ್ಯಾ. ಬ್ರಿಜೇಶ್ ಚೌಟ ಮನವಿ
ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ...