ಮೂಡನಂಬಿಕೆಗಳ ವಿರುದ್ಧ ಹೋರಾಡಿದ ಸಂತ ಸೇವಾಲಾಲ್”
ಮಂಗಳೂರು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ )ಸಂಘದ ಸಹಕಾರದೊಂದಿಗೆ ಫೆಬ್ರವರಿ 16 ರಂದು ಶ್ರೀ ಸಂತ ಸೇವಾಲಾಲ್ ಜಯಂತಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಉದ್ಘಾಟಿಸಿ...
ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ 10 ಲಕ್ಷ ರೂ ಫ್ರೋತ್ಸಾಹಧನ ವಿತರಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಿಂದ ಯಕ್ಷಧ್ರುವ ಪಟ್ಲ ಫೌಂಡೇಶನಿಗೆ 10 ಲಕ್ಷ ರೂ ಫ್ರೋತ್ಸಾಹಧನ ನೀಡಲಾಯಿತು.ಪಾಲಿಕೆಯ ವತಿಯಿಂದ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮದಡಿ ಕರಾವಳಿಯ ಗಂಡುಕಲೆ ಯಕ್ಷಗಾನವನ್ನು ಸರಕಾರಿ ಶಾಲೆಗಳಲ್ಲಿ ಉಚಿತವಾಗಿ ಕಲಿಸುವ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ತರಗತಿಗಳನ್ನು ರಾಜ್ಯಾದ್ಯಂತ ನಡೆಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಡೇಶನಿನ ಯಕ್ಷಗಾನಂ ವಿಶ್ವಗಾನಂ ಯೋಜನೆಯಡಿ 2024-25ನೇ...
ಫೆ.17 ರಂದು ಜಿಲ್ಲಾ ಕೇಂದ್ರ ಗ್ರಂಥಾಲಯ ನೂತನ ಕಟ್ಟಡದ ಉದ್ಘಾಟನೆ
ಮಂಗಳೂರು : ಸಾರ್ವಜನಿಕ ಗ್ರಂಥಾಲಯ ಇಲಾಖೆ, ದ.ಕ ಜಿಲ್ಲಾ ಕೇಂದ್ರ ಗ್ರಂಥಾಲಯ ಇದರ ಕೇಂದ್ರ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆಬ್ರವರಿ 17 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ನಡೆಯಲಿದೆ.ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ...
ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಅಳಪೆ ಕರ್ಮಾರ್ ಆದರ್ಶ ಮಹಿಳಾ ಮಂಡಲದ ಕಟ್ಟಡದ ಮೇಲ್ಛಾವಣಿ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಆದರ್ಶ ಮಹಿಳಾ ಮಂಡಲದ ಸದಸ್ಯರು ಅತ್ಯಂತ ಕ್ರಿಯಾಶೀಲ ತಂಡವಾಗಿದ್ದು ಉತ್ತಮ ಕಾರ್ಯ...
ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ: ಕಂಬೆರ್ಲಕಲ ಜೀರ್ಣೋದ್ಧಾರ
ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ ಕಾವೂರು ಇದರ ಕಂಬೆರ್ಲಕಲ ಜೀರ್ಣೋದ್ಧಾರಗೊಂಡು ಪುನಃ ಪ್ರತಿಷ್ಠೆ, ಧಾರ್ಮಿಕ ಸಭಾ ಕಾರ್ಯಕ್ರಮ ಗಿರಿಜಾತೆ ಆರ್.ಭಂಡಾರಿ ದೆಪ್ಪುಣಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ದೈವಸ್ಥಾನದ ವಠಾರದಲ್ಲಿ ಜರಗಿತು.ಉರ್ವಾಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಹಿರಿಯರು - ಕಿರಿಯರ ಸಂಪೂರ್ಣ ಸಹಕಾರದಿಂದ ದೈವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು...
ಮಂಗಳೂರು ಅಂ. ವಿಮಾನ ನಿಲ್ದಾಣ: ಹೊಸ ಪೊಲೀಸ್ ಚೆಕ್ ಪೋಸ್ಟ್ ಮೂಲಕ ಭದ್ರತೆ ಹೆಚ್ಚಳ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೊಸ ಪೊಲೀಸ್ ಚೆಕ್ ಪೋಸ್ಟ್ (ನಾಕಾ)ಸ್ಥಾಪಿಸಲಾಗಿದೆ. ಮಂಗಳೂರು ನಗರ ಪೊಲೀಸರ ಸಹಯೋಗದೊಂದಿಗೆ ಈ ಉಪಕ್ರಮವು ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...
ಫೆ.18ರಂದು ನೆಹರು ವಿಚಾರ ವೇದಿಕೆಯಿಂದ ‘ಗಾಂಧಿ-ಅಂಬೇಡ್ಕರ್-ನೆಹರು’ ವಿಚಾರಗೋಷ್ಠಿ
ಮಂಗಳೂರು: ಮಂಗಳೂರು ನೆಹರೂ ವಿಚಾರ ವೇದಿಕೆ ವತಿಯಿಂದ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜವಾಹರಲಾಲ್ ನೆಹರು ಅವರ ಕುರಿತಾಗಿ ‘ಸ್ವಾತಂತ್ರ್ಯ-ಸಂವಿಧಾನ-ದೂರದೃಷ್ಟಿ’ ವಿಷಯದಲ್ಲಿ ವಿಚಾರಗೋಷ್ಠಿಯನ್ನು ಫೆ.18ರಂದು ಬೆಳಿಗ್ಗೆ 10ಕ್ಕೆ ನಗರದ ಉರ್ವ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ವಕ್ತಾರ...
ಫೆ.22ರಂದು ದುಬೈಯಲ್ಲಿ “ವಿಂಶತಿ ಭಜನಾಟ್ಯ ಸಂಭ್ರಮ-2025“
ಮಂಗಳೂರು: ಶ್ರೀ ರಾಜರಾಜೇಶ್ವರಿ ಭಜನಾ ವೃಂದ ದುಬೈ ವತಿಯಿ೦ದ ಫೆ.22ರಂದು ದುಬೈಯಲ್ಲಿ “ವಿಂಶತಿ ಭಜನಾಟ್ಯ ಸಂಭ್ರಮ-2025“ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖ್ಯಸ್ಥರಾದ ರಾಜೇಶ್ ಕುತ್ತಾರ್ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶ್ರೀ ರಾಜರಾಜೇಶ್ವರಿ ಭಜನಾ ವೃಂದ ದುಬೈ ಕಳೆದ 20 ವರುಷಗಳಿಂದ ಕೊಲ್ಲಿ ರಾಷ್ಟ್ರ ಯುಎಇಯಲ್ಲಿ ಸಹಸ್ರಾರು ಮನೆಗಳ ಹಾಗೂ ಸಂಘ ಸಂಸ್ಥೆಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ...
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ: ಜಿಲ್ಲಾಧಿಕಾರಿ ಅಭಿನಂದನೆ
ಮಂಗಳೂರು: ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಚಿಂತನ್ ಎಸ್. ಶೆಟ್ಟಿ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.ಫ್ರೀ ಸ್ಟೈಲ್ ರಿಲೇ ಈಜುಕೂಟದಲ್ಲಿ ಚಿಂತನ್ ಶೆಟ್ಟಿ ಅವರು ಇತರ ಮೂವರು ಕ್ರೀಡಾಪಟುಗಳೊಂದಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. 3:26:26 ನಿಮಿಷದಲ್ಲಿ...
ಉಸ್ತುವಾರಿ ಸಚಿವರು ,ಲೋಕೋಪಯೋಗಿ ಸಚಿವರ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 15 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 3 ಗಂಟೆಗೆ ಮಂಗಳಾದೇವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಮಂಗಳೂರು ಮಹಾನಗರ...







