ಮಂಗಳೂರು ಪ್ರೆಸ್ ಕ್ಲಬ್ ನಿ೦ದ ಉಚಿತ ಕೃತಕ ಕಾಲು ವಿತರಣೆ
ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ .ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್‌ನಲ್ಲಿ ಕೊಣಾಜೆಯ ಅಬ್ದುಲ್ ರವೂಫ್ ಅವರಿಗೆ ಉಚಿತ ಕೃತಕ ಕಾಲು...
ಅಕ್ರಮ ಮದ್ಯ ಬಳಕೆ ತಡೆಗಟ್ಟಲು ಅಬಕಾರಿ ಇಲಾಖೆ ಕಾರ್ಯಾಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋವಾಮದ್ಯ/ಹೊರರಾಜ್ಯದ ಮದ್ಯ/ಡಿಫೆನ್ಸ್ ಮದ್ಯ/ತೆರಿಗೆ ರಹಿತ ವಿದೇಶೀ ಮದ್ಯದ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುತ್ತಿದ್ದು, ಜುಲೈ-2024 ರಿಂದ ಇಲ್ಲಿಯವರೆಗೆ ಒಟ್ಟು 31...
ಜ.22ರಂದು ಕೃಷ್ಣ.ಜೆ.ಪಾಲೆಮಾರ್ ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜ.22ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಲ್ಯಾಂಡ್‌ಲಿಂಕ್ಸ್ ಸಂಸ್ಥೆಯ ಚೇರ್ಮನ್ ಮತ್ತು ಸಿಇಒ ಕೃಷ್ಣ.ಜೆ.ಪಾಲೆಮಾರ್
ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಸಾಹಿತಿ, ಕಲಾವಿದ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...
ಉರ್ವ ಮಾರ್ಕೆಟ್ : ರಿಕ್ಷಾ ಪಾರ್ಕ್ ನ ಮೇಲ್ಛಾವಣಿ ಉದ್ಘಾಟನೆ
ಮ೦ಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಬಳಿಯ ರಿಕ್ಷಾ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಶಾಸಕರ ವಿಶೇಷ ಅನುದಾನದಿಂದ ಅಳವಡಿಸಲಾದ ಈ ಮೇಲ್ಛಾವಣಿಯಿಂದ ಮಳೆ-ಬಿಸಿಲು ಯಾವುದನ್ನೂ ಲೆಕ್ಕಿಸದೇ ತಮ್ಮ ಕುಟುಂಬಗಳನ್ನು ಸಲಹಲು ದಿನನಿತ್ಯ ದುಡಿಯುವ ರಿಕ್ಷಾ ಚಾಲಕರುಗಳಿಗೆ ಬಿಡುವಿನ ವೇಳೆಯಲ್ಲಿ...
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ: ಸಿಂಟ್ಯಾಕ್ಸಿಯಾ 2025 ಉದ್ಘಾಟನೆ
ಬೆ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ಸೈನ್ಸ್ ವಿಭಾಗವು ಜನವರಿ 16, 2025 ರಂದು ಅಂತರ-ಕಾಲೇಜು ಉತ್ಸವವಾದ ಸಿಂಟ್ಯಾಕ್ಸಿಯಾ-2025ರ ಭವ್ಯ ಉದ್ಘಾಟನೆಯನ್ನು ಆಯೋಜಿಸಿತು. ಈ ಕಾರ್ಯಕ್ರಮವು ನವೀನತೆ, ಸಹಯೋಗ ಮತ್ತು ಪ್ರತಿಭೆಯ ಆಚರಣೆಗೆ ಒಂದು ವೇದಿಕೆಯಾಯಿತು.ಮುಖ್ಯ ಅತಿಥಿಯಾಗಿ ಗಣ್ಯ ತಂತ್ರಜ್ಞರಾದ ಅಶೋಕ್ ಪಿರೇರಾ ಅವರು ಭಾಗವಹಿಸಿದರು. ಇದರೊಂದಿಗೆ ಫಾದರ್ ಡೆನ್ಸಿಲ್...
ತುಳುಚಲನ ಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ
ಮಂಗಳೂರು: ತುಳು ಚಲನ ಚಿತ್ರಗಳಿಗೆ ಸಬ್ಸಿಡಿ, ಪ್ರಾದೇಶಿಕ ಭಾಷಾ ಸಿನಿಮಾಗಳಿಗೆ ಪ್ರಶಸ್ತಿ, ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳಿಗೆ ನೀಡುವಂತೆ ಶೇಕಡಾವಾರು ಷೇರು, ತುಳುಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಾಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ನೇತೃತ್ವದಲ್ಲಿ ಮನವಿ...
ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ತುಳು ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಆರಂಭದಲ್ಲಿ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ...
ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ
ಮಂಗಳೂರು: ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ ಜಿಸಿ-ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಚಾಲನೆ ನೀಡಿದರು.ಬಳಿಕ ಮಾತಾಡಿದ ಅವರು, “ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜನೆ ಮಾಡಿರುವುದು ಖುಷಿ ತಂದಿದೆ....
ಕೋಟೆಕಾರ್ ಸಹಕಾರಿ ಬ್ಯಾಂಕ್‌ನಲ್ಲಿ ಹಾಡಹಗಲೇ ಬಂದೂಕು ತೋರಿಸಿ ಚಿನ್ನಾಭರಣ, ನಗದು ದರೋಡೆ
ಮ೦ಗಳೂರು: ಉಳ್ಳಾಲ ತಾಲೂಕಿನ ಕೆ.ಸಿ ರೋಡ್ನ ಕೋಟೆಕಾರು ಸಹಕಾರಿ ಬ್ಯಾಂಕ್‌ನಲ್ಲಿ ಹಾಡಹಗಲೇ ಬಂದೂಕು ತೋರಿಸಿ ಚಿನ್ನಾಭರಣ, ನಗದು ದರೋಡೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಫಿಯೆಟ್ ಕಾರಿನಲ್ಲಿ ಬಂದ ಐವರು ಮುಸುಕುಧಾರಿ ದರೋಡೆಕೋರರು ಬ್ಯಾಂಕ್ಗೆ ನುಗ್ಗಿ ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ದರೋಡೆಕೋರರ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ...
ಸರಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾಕೋಟಾ ನಿಗದಿ :ಮುಖ್ಯಮಂತ್ರಿ ಸಿದ್ದರಾಮಯ್ಯ
ಮ೦ಗಳೂರು: ರಾಜ್ಯದಲ್ಲಿ ಸರಕಾರಿ ಇಲಾಖೆಗಳಲ್ಲಿ ಸಮವಸ್ತ್ರ ಇಲಾಖೆಗಳಲ್ಲಿ ಶೇ. 3 ಹಾಗೂ ಇತರ ಇಲಾಖೆಗಳಲ್ಲಿ ಶೇ.2 ಕ್ರೀಡಾಕೋಟಾ ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟಕ್ಕೆ ಜನವರಿ 17 ರಂದು ನಗರದ...







