ಬಿಜೆಪಿ ಯುವ ಮೋರ್ಚಾ : ಪ್ರತಿಭಟನೆ ಹಾಗೂ ಪೋಸ್ಟರ್ ಅಭಿಯಾನ
ಮ೦ಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಿನಿ ವಿಧಾನ ಸೌಧದ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ...
ಮ೦ಗಳೂರು: ತನಿಶ್ಕ್ ನಲ್ಲಿ ಆಭರಣ ಪ್ರದರ್ಶನ ಮತ್ತು ಮಾರಾಟ ಆಯೋಜನೆ
ಮ೦ಗಳೂರು: ತನಿಶ್ಕ್, ಟಾಟಾ ಹೌಸ್‌ನಿಂದ ಹೊರಹೊಮ್ಮಿದ ಭಾರತದ ಅತಿದೊಡ್ಡ ಆಭರಣ ಬ್ರ್ಯಾಂಡ್, ಇದೀಗ ಮಂಗಳೂರಿನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ. ಇದು ಪ್ರತಿಯೊಬ್ಬ ಮಹಿಳೆಯ ಆಭರಣ ಸಂಗ್ರಹವನ್ನು ಸಂಪೂರ್ಣಗೊಳಿಸುವ ಅತ್ಯುತ್ತಮ ಆಯ್ಕೆಯಾಗಿದೆ. ಈ ಪ್ರದರ್ಶನದಲ್ಲಿ ತನಿಶ್ಕ್ 20% ವರೆಗೆ ಡೈಮಂಡ್ ಆಭರಣಗಳ ಮೇಲೆ ರಿಯಾಯಿತಿಯನ್ನು ನೀಡುತ್ತದೆ.
ಈ ಪ್ರದರ್ಶನವು ಕರ್ನಾಟಕ ವಿಧಾನಸಭೆಯ...
ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ) ಸೂಚಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು...
ಮುಂದಿನ ವರ್ಷ ಅಂತರಾಷ್ಟ್ರೀಯ ಚಲನಚಿತ್ರೋತ್ಸವ – ಜಿಲ್ಲಾಧಿಕಾರಿ
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.
ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವವನ್ನು ನಡೆಸಲಾಗಿದೆ. ಇದನ್ನು ಇನ್ನಷ್ಟು...
ಜನವರಿ 5: ಕಲಾಂಗಣದಲ್ಲಿ ಆಲನಿ ಮೆಲೊಡಿ ನೈಟ್
ಮ೦ಗಳೂರು: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277 ನೇ ಕಾರ್ಯಕ್ರಮವು ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ 6.30 ಗಂಟೆಗೆ ನಡೆಯಲಿದೆ. ಒಂಬತ್ತು ವರ್ಷ ಪ್ರಾಯದ ಮೂಡಬಿದ್ರೆ ತಾಕೊಡೆಯ ಆಲನಿ ಲಿಯೊರಾ ಡಿಸೋಜ ಈ ಕಾರ್ಯಕ್ರಮ ನೀಡಲಿದ್ದು, ಆಕೆ ತಿಂಗಳ ವೇದಿಕೆ ಮುನ್ನಡೆಸುವ ಅತೀ ಚಿಕ್ಕ ವಯಸ್ಸಿನ ಕಲಾವಿದೆಯಾಗಲಿದ್ದಾಳೆ ಎ೦ದು ಮಾಂಡ್ ಸೊಭಾಣ್...
ಬಾಲಯೇಸುವಿನ ಪುಣ್ಯಕ್ಷೇತ್ರ, ಬಿಕರ್ನಕಟ್ಟೆ : ವಾರ್ಷಿಕ ಮಹೋತ್ಸವ
ಮ೦ಗಳೂರು: ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ - ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ15 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎ೦ದು ಬಾಲಯೇಸುವಿನ ಪುಣ್ಯಕ್ಷೇತ್ರದ ಗುರುಮಠದ ಮುಖ್ಯಸ್ಥರಾದ ಫಾ. ಮೆಲ್ವಿನ್ ಡಿಕುನ್ಹಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಜನವರಿ 14ರಂದು ಸಂಜೆ 6 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಝಾನ್ಸಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ...
ಇಂದು ಪ್ರಧಾನಮಂತ್ರಿ ‘‘ಸೂರ್ಯ ಘರ್’’ ಮಾಹಿತಿ ಕಾರ್ಯಾಗಾರ
*ಮಂಗಳೂರು : ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಮತ್ತು ಮಂಗಳೂರು ಮಹಾನಗರಪಾಲಿಕೆ ಸಹಯೋಗದೊಂದಿಗೆ ಪ್ರಧಾನಮಂತ್ರಿ ‘‘ಸೂರ್ಯ ಘರ್’’ ಮುಫ್ತ್ ಬಿಜ್ಲಿ ಯೋಜನೆಯ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಜ.2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ...
ಹಾಲು ಉತ್ಪಾದಕರ ಪ್ರೋತ್ಸಾಹ ಧನ 1.50 ರೂ.ಗೆ ಹೆಚ್ಚಳ“: ಸುಚರಿತ ಶೆಟ್ಟಿ
ಮಂಗಳೂರು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಮೇವಿನ ಕೊರತೆ, ವಾತಾವರಣದ ಅಧಿಕ ಉಷ್ಣತೆ, ಪಶು ಆಹಾರದ ಕೊರತೆ ಮತ್ತು ಕೂಲಿ ಕಾರ್ಮಿಕರ ತೀವ್ರ ಅಭಾವದಿಂದ ಹೈನುಗಾರಿಕೆಯು ಕಷ್ಟ ಸಾಧ್ಯವಾಗಿದ್ದು, ಸಂಘಗಳ ಮುಖಾಂತರ ಹಾಲು ಶೇಖರಣೆಯು ಅಪೇಕ್ಷಿಸಿದಷ್ಟು ಅಭಿವೃದ್ಧಿಯಾಗದೆ ಇರುತ್ತದೆ. ಇದರಿಂದಾಗಿ ಸಂಘಗಳಲ್ಲಿ ಹಾಲು ಶೇಖರಣೆ ಕಡಿಮೆಯಾಗಿ ಸಂಘಗಳ ಲಾಭಾಂಶಕಡಿಮೆಯಾಗುತ್ತಿದೆ. ಇದನ್ನು ಮನಗಂಡು ವಿಶೇಷ...
ʻಪಯಣ್ʼಕೊಂಕಣಿ ಚಲನಚಿತ್ರದ ಶತದಿನೋತ್ಸವ ಸಂಭ್ರಮಾಚರಣೆ
ಮ೦ಗಳೂರು:ಇಡೀ ವಿಶ್ವಾಧ್ಯಂತ ಚಲನ ಚಿತ್ರೋಧ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ. ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು,...
ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ:ಅಹ್ವಾನ ಪತ್ರ ಬಿಡುಗಡೆ
ಮ೦ಗಳೂರು: ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4 ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ ಮುನ್ನೂರು ಕೊಂಕಣಿ ವಿದ್ಯಾರ್ಥಿಗಳು ಭಾಗವಹಿಸಲು ನೊಂದಣಿ ಮಾಡಿದ್ದಾರೆ.ಈ ಸಮ್ಮೇಳನದ ಅಹ್ವಾನ ಪತ್ರ ಬಿಡುಗಡೆ...









