ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿರುವ ಅರಣ್ಯ
ಮಂಗಳೂರು):-ಡಿಸೆಂಬರ್ 21 ರಿಂದ ನಗರದಲ್ಲಿ ಆರಂಭವಾಗಿರುವ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ.
ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ. ಕಾಡಿನಲ್ಲಿರುವಂತೆ ವಿವಿಧ ಮರ ಗಿಡಗಳು ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು ನೀರು ಹರಿಯುವ ಶಬ್ಧ ವೀಕ್ಷಕರ ಕಿವಿಗೆ ಮುದ ನೀಡುತ್ತಿವೆ.
ಕಾಡಿನ ಒಳಗೆ ಕಾಲಿಡುವ ಆರಂಭದಲ್ಲೇ ಹುಲಿಯ ಬಾಯೊಳಗೆ ಹೋದಂತಹ...
ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ
ಮ೦ಗಳೂರು: ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ "ರಾಷ್ಟ್ರೀಯ ವೀರ ಬಾಲ ದಿನವನ್ನು" ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.
ವೀರ ಬಾಲಕರ...
ಮಂಗಳೂರು-ಬೆಂಗಳೂರು : ಸ್ಲೀಪರ್ ಅಂಬಾರಿ ಉತ್ಸವ ಬಸ್‍ಗಳ ಚಾಲನೆ
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ 4 ಹೊಸ ಎಸಿ ಸ್ಲೀಪರ್ ಅಂಬಾರಿ ಉತ್ಸವ ಪ್ರತಿಷ್ಠಿತ ವಾಹನಗಳು ಸೇರ್ಪಡೆಗೊಂಡಿವೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕುಂದಾಪುರ-ಮಂಗಳೂರು-ಹಾಸನ ಬೆಂಗಳೂರು ಹಾಗೂ ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಹೊಸ ಎಸಿ ಸ್ಲೀಪರ್ ಅಂಬಾರಿ ಉತ್ಸವ ಬಸ್‍ಗಳು ಸಂಚರಿಸಲಿವೆ.
ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 10:15ಕ್ಕೆ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಜರುಗಿತು.ಸಭೆಯನ್ನು ಉದ್ದೇಶಿಸಿ ಮಾತಾಡಿದ ಎಂ.ಆರ್.ಜಿ. ಗ್ರೂಫ್ ಚೇರ್ ಮೆನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಯಕ್ಷಗಾನದ ಕಂಪನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿಯವರದ್ದಾಗಿದೆ....
ಡಿ.28-29ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಬೀಚ್ ಉತ್ಸವ
ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಬೀಚ್‌ನಲ್ಲಿ ಡಿ. 28 ಮತ್ತು 29ರಂದು ಆಯೋಜಿಸಲಾಗಿರುವ ಬೀಚ್ ಉತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯ ಕಲಾವಿದರ ಕಲಾ ಪ್ರದರ್ಶನದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 28ರಂದು 6.30ಕ್ಕೆ ವಿಧಾನಸಭೆ ಸ್ಪೀಕರ್...
ಡಿ.28ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ”
ಮಂಗಳೂರು: ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿಯವರ ಗೌರವ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಮಂಗಳೂರು ಕಂಬಳವುಡಿಸೆಂಬರ್ 28ರ ಶನಿವಾರ ಬೆಳಗ್ಗೆ 8.30ಕ್ಕೆ ಪ್ರಾರಂಭಗೊಂಡು ಅದೇ ದಿನ ಸಂಜೆ 6.00ಕ್ಕೆ ಸಭಾ ಕಾರ್ಯಕ್ರಮ ಹಾಗೂ ಮರುದಿನ ಡಿಸೆಂಬರ್ 29ರ ಭಾನುವಾರ ಬೆಳಗ್ಗೆ 08.00ಕ್ಕೆ ಬಹುಮಾನ ವಿತರಣಾ ಸಮಾರಂಭದ...
ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ
ಮ೦ಗಳೂರು: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು.ಈ ಸಂಧರ್ಭದಲ್ಲಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಾಜಪೇಯಿ ಅವರ ಜೀವನ ಸಂಸ್ಕರಣೆಯನ್ನು ನೆನೆಯುತ್ತಾ ಅಟಲ್ ಜಿ ಅವರು ಪ್ರಧಾನಿ ಆಗಿದ್ದ ಸಂಧರ್ಭದಲ್ಲಿ ತಾನು ಎನ್.ಸಿ.ಸಿ ಯ ಕೆಡಿಟ್ ಆಗಿದ್ದಾಗ...
ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ”: ಡಾ.ಕೆ. ಪ್ರಕಾಶ್ ಶೆಟ್ಟಿ
ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್...
ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ
ಮ೦ಗಳೂರು: ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ಕಾಯಾ೯ಚರಣೆ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.ಹೆಲಿಕಾಪ್ಟರ್ ಪ್ರಯಾಣದ...
ಮಂಗಳೂರು : ಜನವರಿ 11 ಮತ್ತು 12 ರಂದು ಕದ್ರಿಪಾರ್ಕಿನಲ್ಲಿ ಕಲಾ ಪರ್ಬ
ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ' ಕಲಾ ಪರ್ಬ ' ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ' ಅಸ್ತ್ರ ' ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕರಾವಳಿ ಉತ್ಸವದ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಕಲಾ ಮೇಳದಲ್ಲಿ ಸುಮಾರು 150 ಕಲಾ ಮಳಿಗೆಗಳಲ್ಲಿ ಕಲಾವಿದರು ತಮ್ಮ...








