ನ.30ರಿಂದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ಪಾರಂಪರಿಕ ಸಪ್ತಾಹ
ಮಂಗಳೂರು: ಹಲವಾರು ವರ್ಷಗಳ ಇತಿಹಾಸವುಳ್ಳ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಹಿಂದಿನ ಕೆನರಾ ಜಿಲ್ಲೆಯ ಆಡಳಿತ ಕೇಂದ್ರಸ್ಥಾನವಾಗಿತ್ತು....
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಆಚರಣಾ ಕಾರ್ಯಕ್ರಮ
ಮಂಗಳೂರು: ಭಾರತದ ಸಂವಿಧಾನ ಅಂಗೀಕರಣದ 75ನೇ ವಾರ್ಷಿಕೋತ್ಸವ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಆಚರಣಾ ಕಾರ್ಯಕ್ರಮ ಮಂಗಳವಾರಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಬಹುತ್ವಭಾರತದ ಬುನಾದಿಯಾಗಿದೆ. ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ...
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ
ಮಂಗಳೂರು: ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ಜರಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಹಿತ್ಯಾಸಕ್ತರು, ಕನ್ನಡ ಪರ ಸಂಘಟನೆಗಳು ಭಾಗವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷÀ ಡಾ.ಎಂ. ಪಿ. ಶ್ರೀನಾಥ್ ಕರೆ ನೀಡಿದ್ದಾರೆ.
ಅವರು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ...
ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕಾಮತ್
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ನಡೆಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು.
ರಾಜ್ಯ ಸರ್ಕಾರ ಅನುದಾನ ತಡೆ ಹಿಡಿದ ಪರಿಣಾಮ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ,...
ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆ...
ರಾಜ್ಯ ಮಟ್ಟದ ಪ್ರೌಢಶಾಲಾ ವಿಜ್ಞಾನ ವಸ್ತುಪ್ರದರ್ಶನ
ಮಂಗಳೂರು: "ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ. ವಿ ರಾವ್ ಹೇಳಿದರು.
ಅವರು ಶಿಕ್ಷಣ ಇಲಾಖೆ ವತಿಯಿಂದ, ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆ ಇದರ ಸಹಯೋಗದಲ್ಲಿ ನಡೆದ 2024-25ನೇ...
ಪಿ .ಯು. ವಿದ್ಯಾರ್ಥಿಗಳಿಗೆ ಆಪ್ತ-ಸಮಾಲೋಚನೆ ಅತ್ಯಗತ್ಯ : ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್
ಮ೦ಗಳೂರು: ಯಶಸ್ಸಿನ ಹಿಂದೆ ಓಡಬೇಕೆಂಬ ಛಲವಿರುವ ಈಗಿನ ಪಿ ಯು ವಿದ್ಯಾರ್ಥಿಗಳಿಗೆ ಸರಿಯಾದ ಹಂತದಲ್ಲಿ ಸಮರ್ಥವಾದ ಆಪ್ತ- ಸಮಾಲೋಚನಾ ಮಾರ್ಗದರ್ಶನ ಬೇಕೇ-ಬೇಕು ಎಂದು ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಸಂಸ್ಥೆಯ ಮಾಜೀ ಹಿರಿಯ ಮನೋವೈದ್ಯ, ಪದ್ಮಶ್ರೀ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದ್ದಾರೆ.ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಏರ್ಪಡಿಸಿದ್ದ“ಮಾನಸ ಮಾರ್ಗದರ್ಶನ ಹಾಗೂ ಸಂವಾದ”...
ಬೆಳ್ತಂಗಡಿ: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಉದ್ಘಾಟನೆ
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಬಳಿಯ ವೈಬವ್ ಅರ್ಕೆಡ್‌ನ ನೆಲಮಹಡಿಯಲ್ಲಿ ನ. 24 ರಂದು ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ಲೋಬೊ ಉದ್ಘಾಟಿಸಿದರು. ಶಾಖೆಯನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್‌ನ ಧರ್ಮಗುರು ಅತೀ ವಂ. ಫಾ ವಾಲ್ಟರ್ ಡಿಮೆಲ್ಲೊ ಆಶೀವರ್ಚಿಸಿದರು.ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ...
ಉಚಿತ ಹೊಲಿಗೆ ಯಂತ್ರ ವಿತರಣೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು.
ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ...
‘ರೋಟರಿ ಚಿಣ್ಣರ ಉತ್ಸವ’
ಮ೦ಗಳೂರು:ರೋಟರ್ ಕ್ಲಬ್ ಮಂಗಳೂರು ಸೆಂಟ್ರಲ್, ರೋಟರಿ ಮಂಗಳೂರು ಸೆಂಟ್ರಲ್ -ಂಡೇಶನ್ ಮತ್ತು ರೋಟರ್‍ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಇದರ ಸಂಯುಕ್ತಾಶ್ರಯದಲ್ಲಿ ೨೪ನೇ ವಾರ್ಷಿಕ ‘ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕೂಟ ಉರ್ವ ಕೆನರಾ ಹೈಸ್ಕೂಲ್ ಆವರಣದಲ್ಲಿ ರವಿವಾರ ದಿನವಿಡೀ ನಡೆಯಿಯು.ಕಾರ್ಯಕ್ರಮ ಉದ್ಘಾಟಿಸಿದ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ,...










