ಪಣಂಬೂರು ಪೋಲಿಸ್ ಜನಸಂಪರ್ಕ ಸಭೆ
ಪಣಂಬೂರು : ಪಣಂಬೂರು ಪೋಲೀಸ್ ಠಾಣೆ ವತಿಯಿಂದ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮತ್ತು ವಾಹನ ಸವಾರರು ಪಾಲಿಸಬೇಕಾದ ನಿಯಮಗಳ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಬೆಂಗರೆ ಕಸಬಾ ಮದ್ರಸ ಸಭಾಂಗಣದಲ್ಲಿ ನಡೆಯಿತು.ಪಣಂಬೂರು ಪೋಲಿಸ್ ನಿರೀಕ್ಷಕರಾದ ಮುಹಮ್ಮದ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ಪಣಂಬೂರು ಪೊಲೀಸರು ಕಸಬಾ ಬೆಂಗ್ರೆಯಲ್ಲಿ ಜನ ಸಂಪರ್ಕ ಸಭೆ ನಡೆಸಿದರು....
ಕೊಲ್ಲಮೊಗ್ರು: ಪತ್ರಕರ್ತರ ಗ್ರಾಮ ವಾಸ್ತವ್ಯ:ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಗ್ರಾಮಸ್ಥರಿಂದ ಸಂವಾದ
ಸುಳ್ಯ:ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಷಃ ಅರಣ್ಯ ಸಮಸ್ಯೆ ಸೇರಿ ಅರಣ್ಯ - ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ...
ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ:ಸಮಿತಿ ಸಭೆ
ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಮಾವೇಶದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಐವನ್ ಡಿಸೋಜ ಅಧ್ಯಕ್ಷತೆಯಲ್ಲಿ ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಮಿತಿಯ ಸಭೆ ನಡೆಯಿತು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ...
ಶಿಕ್ಷಣ ಪಡೆದ ಶಾಲೆಗೆ ಪ್ರಶಸ್ತಿ ಮೊತ್ತ 1 ಲಕ್ಷ ರೂ.ದಾನ ನೀಡಿದ ಪ್ರೊ. ಬಿ.ಎ.ವಿವೇಕ ರೈ
ಮ೦ಗಳೂರು: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡಲಾಗುವ ಟಿ.ವಿಮಲಾ ಪೈ ಪ್ರಾಯೋಜಿತ 2022ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಯ 1 ಲಕ್ಷ ರೂ. ಮೊತ್ತ ಪಡೆದ ಹಂಪಿ ವಿವಿಯ ವಿಶ್ರಾಂತ ಕುಲಪತಿ ಪ್ರೊಬಿ.ಎ.ವಿವೇಕ ರೈ ಅವರು ತಾನು ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ ವಿಟ್ಲ ಸಮೀಪದ ಪುಣಚಾ ಪರಿಯಾಲ್ತಡ್ಕ ಅನುದಾನಿತ...
ಅಯೋಧ್ಯೆಯ ಬಾಲರಾಮನಿಗೆ ಕಾಶಿಮಠ ಸಂಸ್ಥಾನದ ವತಿಯಿಂದ ಸ್ವರ್ಣ ಪೀಠ ಪ್ರಭಾವಳಿ ಸಮಪ೯ಣೆ
ಮ೦ಗಳೂರು: ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು.ಈ ಸ್ವರ್ಣ ಪೀಠ ಪ್ರಭಾವಳಿಗೆ ಕೋಟದ ಕಾಶಿಮಠದಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕಾಶೀಮಠಾಧೀಶರಾದ...
ಹರಿಹರ ಕೊಲ್ಲಮೊಗರು: ಪತ್ರಕರ್ತರ ಗ್ರಾಮ ವಾಸ್ತವ್ಯ
ಸುಳ್ಯ: ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲಾ ಅಧಿಕಾರಿಗಳು ಕುಳಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ...
ಮಾರ್ಚ್ 9ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 9 ರಂದು ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ...
ಜನಪ್ರತಿನಿಧಿಗಳು, ಅಧಿಕಾರಿಗಳೊ೦ದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ
ಮ೦ಗಳೂರು: ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಸರ್ಕಿಟ್ ಹೌಸ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಜಾರಿಯಾಗಿರುವ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಜಿಲ್ಲೆಯ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ನೀಡಿರುವ ಅನುದಾನಗಳನ್ನು ಬಳಸಿಕೊಂಡು...
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರ
ಮಂಗಳೂರು:ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ “ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವನ್ನು ಓದಿಸಿ” ಯೋಜನೆಯಡಿ ತಾಲೂಕು ಮಟ್ಟದ ಹಾಗೂ ಕ್ಷೇತ್ರಮಟ್ಟದ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧ...
ಫೆ.12ರಂದು ಮೆಸ್ಕಾಂ ಸಾರ್ವಜನಿಕ ವಿಚಾರಣೆ
ಮಂಗಳೂರು: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ, ವಿದ್ಯುಚ್ಛಕ್ತಿ ದರ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ವಿಚಾರಣೆ ಫೆ.12ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಿಜೈ ನ ಮೆಸ್ಕಾಂ ಭವನದಲ್ಲಿರುವ, ಮೆಸ್ಕಾಂ ಕಾಪೊ೯ರೇಟ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಆಯೋಗದ ಅಧ್ಯಕ್ಷ ಪಿ. ರವಿಕುಮಾರ್ ಹಾಗೂ ಸದಸ್ಯ ಎಮ್.ಡಿ. ರವಿ ಭಾಗವಹಿಸುವರು ಎಂದು ಮೆಸ್ಕಾಂ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.