ಅಬಕಾರಿ ಕಾರ್ಯಾಚರಣೆ : ಮದ್ಯ, ಗಾಂಜಾ ವಶ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟುಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಜಪ್ತುಪಡಿಸಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅಕ್ಟೋಬರ್ 18ರಂದು ಬೈಕಂಪಾಡಿಯ, ಕೆ.ಎಸ್.ಬಿ.ಸಿ.ಎಲ್ ಡಿಪೊ-2ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ ಪತ್ರದೊಂದಿಗೆ ಲಾರಿಯ ಮೂಲಕ...
ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ : ಜಿ.ಪಂ ಸಿಇಓ ಡಾ. ಆನಂದ್
ಮಂಗಳೂರು: ರಾಜ್ಯ ವಿಪತ್ತು ತಗ್ಗಿಸುವಿಕೆ ಅನುದಾನದಿಂದ ಜಿಲ್ಲೆಯಲ್ಲಿ ಪದೇ ಪದೇ ಸಂಭವಿಸುವ ಪ್ರಾಕೃತಿಕ ವಿಕೋಪ ಅನಾಹುತಗಳನ್ನು ಗುರುತಿಸಿ ಅವುಗಳ ಅಪಾಯ ತಗ್ಗಿಸಲು ಅಗತ್ಯ ಯೋಜನೆಗಳನ್ನು ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ತಿಳಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಿಟಿಗೇಶನ್ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಹಾಗೂ...
ನ.9-10ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಟಿ ಸಮಾವೇಶ
ಮಂಗಳೂರು: “ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಟಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್.ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು ನಮ್ಮ ಈ ಸಮಾವೇಶವು ಮುಖ್ಯವಾಗಿ ಶಿಕ್ಷಣ,...
ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ
ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದ್ದಾರೆ.
ಅವರು ಕಾರ್ಯಕ್ರಮದ ಜಿಲ್ಲಾ ಮಟ್ಟದ...
ಮಾತಾ ಅಮೃತಾನಂದಮಯಿ ಮಠ: ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ
ಮಂಗಳೂರು : ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರ ನಿರ್ದೇಶನದಂತೆ ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ಜರುಗಿದ ಈ ವಿಶೇಷ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು...
ಅರವಿಂದ ಬೋಳಾರ್: ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.23ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಜನಪ್ರಿಯ ನಟ ಅರವಿಂದ ಬೋಳಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ...
ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲಗಳ ಸಂಚಾರ
ಮ೦ಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನುಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ.
ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06597 ಅಕ್ಟೋಬರ್ 30ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್...
ಅ.21 : ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಪದುವಾ ಪ್ರೌಢಶಾಲೆ ನಂತೂರು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪದುವಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು...
ವಿಧಾನ ಪರಿಷತ್ ಚುನಾವಣೆ : 53 ಸೂಕ್ಷ್ಮ ಮತಗಟ್ಟೆಗಳು – ಜಿಲ್ಲಾಧಿಕಾರಿ
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ. ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.
ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ...
ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ
ಮಂಗಳೂರು: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ...




