26 C
Karnataka
Monday, May 4, 2026

ಸುದ್ದಿ

ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974 ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981 ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ...

ವಿಧಾನ ಪರಿಷತ್ ಚುನಾವಣೆ : 392 ಮತಗಟ್ಟೆ, 6, 032 ಮತದಾರರು

0
ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು...

ವಾಲ್ಮೀಕಿ ಜಯಂತಿ ಆಚರಣೆ

0
ಮಂಗಳೂರು,: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಮಹಷಿ೯ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಿ ಗೌರವ ಸಲ್ಲಿಸಿದರು.ಈ ಸಂದಭ೯ದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ...

‘ಸೇವ್ ಅವರ್ ಸೋಲ್ ‘ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

0
ಮಂಗಳೂರು : ಅತ್ಯಾಚಾರ, ಅಪಘಾತದಂತಹ ಘಟನೆ ಸಂಭವಿಸಿದಾಗ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎನ್ನುವ ಮಹತ್ವದ ಸಂದೇಶವನ್ನು ಎಸ್‌ಒಎಸ್ (ಸೇವ್ ಅವರ್ ಸೋಲ್ ) ಕಿರುಚಿತ್ರದಲ್ಲಿ ಮನೋಜ್ಞವಾಗಿ ತೋರಿಸಲಾಗಿದೆ. ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸಲು ಕೂಡಾ ಈ ಕಿರುಚಿತ್ರದಲ್ಲಿ ಪ್ರಯತ್ನಿಸಲಾಗಿದೆ ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್. ಹೇಳಿದರು.ಮಂಗಳೂರಿನ...

ಮಂಜಲಕಟ್ಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಕಂಬೆರ್ಲಕಲ ಜೀರ್ಣೋದ್ಧಾರದ ಶಿಲಾನ್ಯಾಸ

0
ಮ೦ಗಳೂರು: ಮಂಜಲಕಟ್ಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಕಂಬೆರ್ಲಕಲ ಜೀರ್ಣೋದ್ಧಾರದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆಯಿತು.ಶಾಸಕ ಡಾವೈ.ಭರತ್ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಬರಲು ಸಾಧ್ಯ. ಧರ್ಮ ಕಾರ್ಯವು ನಡೆಯುತ್ತಿದ್ದರೆ ಸಮಾಜದಲ್ಲಿ ಸನ್ಮಂಗಲ ಉಂಟಾಗುತ್ತದೆ. ಹಿಂದೂ ಸಮಾಜ ಸದೃಢ ಸಮಾಜ ಎಂದರು.ದೆಪ್ಪುಣಿಗುತ್ತು ಗಿರಿಜಾತೆ ಆರ್.ಭಂಡಾರಿ ಕಾವೂರುಗುತ್ತು ಅಧ್ಯಕ್ಷತೆ ವಹಿಸಿದ್ದರು....

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವ ಕವಿಗೋಷ್ಠಿ

0
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ - 50 ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ 'ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು....

ವಿ.ಟಿ.ರೋಡ್ ಬಾಲಕ ವೃಂದ:ಶಾರದಾ ಮಹೋತ್ಸವ

0
ಮ೦ಗಳೂರು: ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ ( ರಿ) ಇದರ 26 ನೇ ವರ್ಷದ ಶಾರದಾ ಪೂಜಾ ಮಹೋತ್ಸವ ವಿ.ಟಿ.ರಸ್ತೆಯಲ್ಲಿರುವ ಶ್ರೀ ಕೃಷ್ಣಮಂದಿರದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಪೂರ್ವಕವಾಗಿ ನಡೆಯಿತು.ಒಟ್ಟು 3 ದಿನ ನಡೆದ ಕಾರ್ಯಕ್ರಮದಲ್ಲಿ ಅಕ್ಟೋಬರ್ 12 ರಂದು ಸಂಪೂರ್ಣ ಅಲಂಕೃತಗೊಂಡ ಶಾರದಾ ಮಾತೆಯ ಮೂರ್ತಿಯನ್ನು ಶೋಭಾಯಾತ್ರೆಯ ಮೂಲಕ ತೆರಳಿ ಮಹಮಾಯಾ ಕೆರೆಯಲ್ಲಿ ಜಲಸ್ತಂಭನಗೊಳಿಸಲಾಯಿತು.ಈ...

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ

0
ಮಂಗಳೂರು: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯು ಬಡವರಿಗೆ ಉಪಯೋಗಕಾರಿಯಾಗಿದ್ದು ಈ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ ಜಾಗೃತಿಯನ್ನು ಮೂಡಿಸುವ ಕೆಲಸವಾಗಬೇಕು. ಜನರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ತಾಲೂಕು ಸಹಾಯಕ ಆಯುಕ್ತ ಹರ್ಷವರ್ಧನ್ ತಿಳಿಸಿದ್ದಾರೆ. ಅವರು ಸೋಮವಾರ ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಯ ಅಧ್ಯಕ್ಷತೆ ವಹಿಸಿ...

ಉಳಿಯ ದ್ವೀಪ : ಮರಳುಗಾರಿಕೆ ನಿಷೇಧ

0
ಮಂಗಳೂರು:ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ. ನಿμÉೀಧಿತ ಪ್ರದೇಶದ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ...

ವಿಧಾನ ಪರಿಷತ್ ಉಪಚುನಾವಣೆ : ನಿಷೇದಾಜ್ಞೆ

0
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ...