ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು:"ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, "ಕೇಂದ್ರ ಸರ್ಕಾರ ಸಂಸತ್...
ಬಿಜೆಪಿ ವತಿಯಿಂದ ಸುಧಾಕರ್ ಜೋಶಿಯವರಿಗೆ ಸನ್ಮಾನ
ಮ೦ಗಳೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಸೆಂಟ್ರಲ್ ವಾರ್ಡ್ ನಿವಾಸಿಯಾದ ಶ್ರೀ ಸುಧಾಕರ್ ಜೋಶಿ ಯವರನ್ನು...
ದಿಗಂತ್ ನಾಪತ್ತೆ ಪ್ರಕರಣ: ಫರಂಗಿಪೇಟೆಯಲ್ಲಿ ಪ್ರತಿಭಟನೆ
ಮಂಗಳೂರು : ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಪುತ್ರ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರು ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಫರಂಗಿಪೇಟೆಯಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಿ ಬೃಹತ್ ಪ್ರತಿಭಟನೆ...
ಹಿರಿಯ ಪತ್ರಕರ್ತ ದಿ.ಮನೋಹರ ಪ್ರಸಾದ್ ಸಂಸ್ಮರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಹಾಗೂ ಉದಯವಾಣಿ ಪತ್ರಿಕೆ ಸಹ ಸಂಪಾದಕ ದಿ.ಮನೋಹರ ಪ್ರಸಾದ್ ಅವರ ಸಂಸ್ಮರಣಾ ಕಾರ್ಯಕ್ರಮ ಶನಿವಾರ ಬೆಳಗ್ಗೆ ಪತ್ರಿಕಾ ಭವನದಲ್ಲಿ ನಡೆಯಿತು.ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದರು. “ಮನೋಹರ್ ಪ್ರಸಾದ್...
ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
"ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೇಸಿಗೆಯಲ್ಲಿ ರೈತರ ಕೃಷಿ...
ವಿದ್ಯಾರ್ಥಿಗಳಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಿ”
ಮಂಗಳೂರು : ವಿದ್ಯಾರ್ಥಿ ಯುವಜನತೆಯಲ್ಲಿ ತುಳು ಸಾಹಿತ್ಯ ಓದಿನ ಬಗ್ಗೆ ಅಭಿರುಚಿ ಮೂಡಿಸುವ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಬೇಕಾಗಿದೆ. ಮೌಖಿಕ ಪರಂಪರೆಗೆ ಒಗ್ಗಿಕೊಂಡಿರುವ ತುಳುವನ್ನು ಸಾಹಿತ್ಯ ಓದಿನ ನೆಲೆಯಲ್ಲಿ ಜನಪ್ರಿಯಗೊಳಿಸಲು ಪರಿಶ್ರಮ ಅಗತ್ಯ. ಈ ನಿಟ್ಟಿನಲ್ಲಿ ತುಳು ಅಕಾಡೆಮಿಯು ಹಮ್ಮಿಕೊಂಡಿರುವ ಬಲೆ ತುಳು ಓದುಗ ಅಭಿಯಾನ ಶ್ಲಾಘನೀಯ ಎಂದು ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಷನ್...
ದ್ವಿತೀಯ ಪಿ.ಯು.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ
ಮಂಗಳೂರು : ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮಾರ್ಚ್ 1 ರಿಂದ 20 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ...
ಮಾ.2 : ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಉದ್ಘಾಟನೆ
ಮ೦ಗಳೂರು: ರೂ.1200 ಕೋಟಿ ವ್ಯವಹಾರದ, 113 ವರ್ಷಗಳ ಇತಿಹಾಸವಿರುವ ಎಂ.ಸಿ.ಸಿ. ಬ್ಯಾಂಕಿನ 19ನೇ ಶಾಖೆ ಬೆಳ್ಮಣ್‌ನಲ್ಲಿ ಮಾ.2 ರ೦ದು ಉದ್ಘಾಟನೆಗೊಳ್ಳಲಿದೆ.
ಶಾಖೆಯ ಉದ್ಘಾಟನೆಯ ಕಾರ್ಯಕ್ರಮವು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆಸಿಯಲಿದೆ. ಶಾಖೆಯ ಉದ್ಘಾಟನೆಯನ್ನುಕರ್ನಾಟಕ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಅವರು ನಡೆಸಿಕೊಡಲಿರುವರು. ಸಂತ ಜೋಸೆಪ್ಸ್ ಚರ್ಚ್, ಬೆಳ್ಮಣ್...
ಈಶಾ ಫೌಂಡೇಶನ್ ಮಹಾಶಿವರಾತ್ರಿಯ ಕಾರ್ಯಕ್ರಮದಲ್ಲಿ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ಭಾಗಿ
ಕೊಯಮತ್ತೂರು: ಮಹಾಶಿವರಾತ್ರಿ ಪ್ರಯುಕ್ತ ಈಶಾ ಫೌಂಡೇಶನ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪಾಲ್ಗೊಂಡಿದ್ದಾರೆ.
ಈಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ನೇತೃತ್ವದಲ್ಲಿ ದಕ್ಷಿಣದ ಕೈಲಾಸ ಎಂದು ಕರೆಯಲ್ಪಡುವ ವೆಳ್ಳಿಯಂಗಿರಿ ತಪ್ಪಲಿನಲ್ಲಿರುವ ಈಶ ಯೋಗ ಕೇಂದ್ರದಲ್ಲಿ...
ಕುಡಿಯುವ ನೀರಿನ ಸಮಸ್ಯೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ ಪಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ ನೀರು ಸರಬರಾಜು ಮಾಡುವ ಬಂಟ್ವಾಳದ...