ಸೆ25: ಉಳ್ಳಾಲದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಮಂಗಳೂರು: ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11 ಗಂಟೆಯಿಂದ ಉಳ್ಳಾಲ ನಗರಸಭೆ ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿದೆ.
ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ...
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕು.1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2)ಸಮಗ್ರ ನೀರು ನಿರ್ವಹಣೆ, 3)ಸಾವಯವ ಕೃಷಿ...
ಅಪಘಾತದಲ್ಲಿ ಡೆಲಿವರಿ ಬಾಯ್ ಸಾವು : 4ಲಕ್ಷರೂ ಪರಿಹಾರ ವಿತರಣೆ
ಮಂಗಳೂರು: ಮಂಗಳೂರಿನಲ್ಲಿ ವಾಹನ ಅಪಘಾತದಿಂದ ಸಾವನ್ನಪ್ಪಿದ ಸ್ವಿಗ್ಗಿ ಡೆಲಿವರಿ ಬಾಯ್‍ಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿ೦ದ ರೂ. 4ಲಕ್ಷ ಗಳ ವಿಮಾ ಪರಿಹಾರ ವಿತರಿಸಲಾಯಿತು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಂದಿಗುಡ್ಡ ಫಸ್ಟ್ ಕ್ರಾಸ್ ಬಳಿ ವಾಸವಾಗಿದ್ದ ಮೃತ ಅರ್ಜುನ್ ಪೂಜಾರ್ (21) ಸ್ವಿಗ್ಗಿ ಡೆಲಿವರಿ ವೃತ್ತಿ ಮಾಡಿಕೊಂಡಿದ್ದು, 2024 ಫೆಬ್ರವರಿ...
ಬಿಜೈ ಕಾಪಿಕಾಡ್ ಅಂಗನವಾಡಿ: ಪೌಷ್ಟಿಕ ಆಹಾರ ಮಾಹಿತಿ
ಮಂಗಳೂರು: ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಪೌಷ್ಟಿಕ ಆಹಾರದಲ್ಲಿ ಪೌಷ್ಟಿಕಾಂಶದ ಸಂರಕ್ಷಣೆ, ಪೌಷ್ಟಿಕ ಆಹಾರದ ತಯಾರಿಯ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.ಸಮಾರಂಭವನ್ನು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉದ್ಘಾಟಿಸಿ ಮಾತನಾಡುತ್ತಾ, ನಿರಂತರ ಚಟುವಟಿಕೆಯಿಂದ ಇರುವ ಬಿಜೈ...
ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ 2024
ಮಂಗಳೂರು:ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರ, ಚೆನೈ ಇವರ ಸೂಚನೆಯಂತೆ ನಗರದ ಮೀನುಗಾರಿಕಾ ಮಹಾವಿದ್ಯಾಲಯದ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಶನಿವಾರ ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು.
ಮೀನುಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದಿಂದ ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆ...
ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ
ಮ೦ಗಳೂರು: ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಈ ಇವೆಂಟ್‌ನಲ್ಲಿ ವಿವಿಧ ವಿಭಾಗಗಳ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.
ಪ್ರಶಸ್ತಿವಿಜೇತರುಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ:ರಂಜಿತ್ ಗಾಣಿಗ* ಮೊದಲನೇ ರನ್ನರ್-ಅಪ್: ಕೌಸ್ತುಭ...
ಪಟಾಕಿ ಮಾರಾಟ : ಅರ್ಜಿ ಆಹ್ವಾನ
ಮಂಗಳೂರು: ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದೆ. ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.
ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ದೀಪಾವಳಿ ಹಬ್ಬದ...
ಮಹಿಳೆಯರು ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ
ಮಂಗಳೂರು: ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು
ಅವರು ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ...
ಸೆ.22ರಂದು ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ
ಮಂಗಳೂರು: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಸೆ.22ರಂದು ಬೆಳಗ್ಗೆ 10.30ಕ್ಕೆ ನಗರದ ಹಂಪನಕಟ್ಟೆಯ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಝೇವಿಯರ್ ಡಿಸೋಜ ತಿಳಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ...
ಲಿಯೋ ರೊಡ್ರಿಗಸ್ ದತ್ತಿ ಕಿಟಾಳ್ ಯುವ ಪುರಸ್ಕಾರಕ್ಕೆ ಕಿರಣ್ ನಿರ್ಕಾಣ್ ಆಯ್ಕೆ
ಮ೦ಗಳೂರು: ಕಿರಣ್, ನಿರ್ಕಾಣ್ ಕಾವ್ಯನಾಮದಲ್ಲಿ ಬರೆಯುತ್ತಿರುವ ಪ್ರತಿಭಾವಂತ ಯುವ ಬರಹಗಾರ ಫ್ಲೋಯ್ಡ್ ಕಿರಣ್ ಮೊರಾಸ್ 2024 ನೇ ಸಾಲಿನ ‘ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರ’ ಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮ ಆಡಳಿತದಲ್ಲಿ ಪದವಿ ಪಡೆದು ಪ್ರಸ್ತುತ ದುಬಾಯ್‌ಯಲ್ಲಿ ಉದ್ಯೋಗದಲ್ಲಿರುವ ಕಿರಣ್ ಅವರ ’ನಕ್ತಿರಾಂ’ (ನಕ್ಷತ್ರಗಳು) ಎಂಬ ಹೆಸರಿನ ಶಿಶುಗೀತೆಗಳ ಸಂಕಲನ...




