ತೋಟದ ಬೆಳೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ
ಮಂಗಳೂರು: 2024-25 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದುಬಾಳೆ, ಅಂಗಾಂಶ ಬಾಳೆ, ಅನಾನಸು, ರಾಂಬುಟಾನ್, ಮ್ಯಾಂಗೋಸ್ಟೀನ್, ಬೆಣ್ಣೆ ಹಣ್ಣು, ಮಲ್ಲಿಗೆ, ಕಾಳುಮೆಣಸು, ಜಾಯಿಕಾಯಿ, ಗೇರು, ಕೊಕೊ ಇತ್ಯಾದಿ ತೋಟಗಾರಿಕೆ ಬೆಳೆಗಳ ಹೊಸ ತೋಟ ಸ್ಥಾಪನೆಗೆ, ಹಳೆ ಕಾಳುಮೆಣಸು ತೋಟಗಳ ಪುನಶ್ಚೇತನ ಕೈಗೊಳ್ಳಲು, ನೀರು ಸಂಗ್ರಹಣಾ ಘಟಕ, ಪ್ಯಾಕ್ಹೌಸ್, ಪಾಲಿಮನೆ, ಅಣಬೆ ಉತ್ಪಾದನಾ...
ಕುದ್ರೋಳಿ ಗಣೇಶ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಫೆ.21ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ನಮ್ಮಟಿ.ವಿ.ಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ...
ಬಡ ಕುಟುಂಬದ ಮನೆ ಕನಸು ನನಸಾಗಿಸಿದ ಮಂಗಳೂರಿನ ಪತ್ರಕರ್ತ; ಮೈಂದಾಳದಲ್ಲಿ ಮೈದಳೆದ ಸುಂದರ ಮನೆ!
ಮಂಗಳೂರು: ಸಮಾಜಮುಖಿ ಕಾರ್ಯಗಳನ್ನು ಈ ರೀತಿಯೂ ಮಾಡುವ ಮೂಲಕ ಮಾದರಿಯಾಗಬಹುದು ಎಂಬುದಕ್ಕೆ ಮಂಗಳೂರಿನ ಪತ್ರಕರ್ತರೊಬ್ಬರು ಸಾಕ್ಷಿಯಾಗಿ ನಿಲ್ಲುತ್ತಾರೆ. ಈ ಮೂಲಕ ಹೊಸ ಬದಲಾವಣೆಯೊಂದಕ್ಕೆ ನಾಂದಿ ಹಾಡಿದ್ದಾರೆ.ಕಡು ಕಷ್ಟದಲ್ಲಿರುವ ಮಂದಿಗೆ ದಾನಿಗಳ ನೆರವಿನಿಂದ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಮುಂದಾಳತ್ವ ವಹಿಸಿರುವ ಪತ್ರಕರ್ತ ಮೋಹನ್‌ದಾಸ್ ಮರಕಡ ಅವರು ಈಗಾಗಲೇ ನಾಲ್ಕು ಕುಟುಂಬದ ಸ್ವಂತ ಸೂರಿನ ಕನಸನ್ನು ನನಸಾಗಿಸಿದ್ದಾರೆ.‘ಶ್ರದ್ಧಾಶ್ರಯ’ ಯೋಜನೆ...
ಜೆಬಿಎಫ್ ಉದ್ಯೋಗಿಗಳಿಗೆ ಜಿಎಂಪಿಎಲ್ ನಲ್ಲಿ ಖಾಯಂ ಉದ್ಯೋಗ: ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ
ಮ೦ಗಳೂರು: ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ಅವರು ಶನಿವಾರ ಭೇಟಿಯಾಗಿ ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಮಾನ್ಯ ಸಚಿವರಿಗೆ ವಿವರವಾಗಿ ಮನವರಿಕೆ ಮಾಡಿದರು....
ಮಂಗಳೂರಿನ ಜನ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು:“ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್...
ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಯಾವುದೇ ತಾರತಮ್ಯವಿಲ್ಲದ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರುಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ,...
ಮುಖ್ಯಮಂತ್ರಿಗಳ ಆಗಮನ : ಡ್ರೋನ್ ನಿಷೇಧ
ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ...
ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ: ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ
ಮಂಗಳೂರು : ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಫೆ. 174 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರರಾಜ್ಯ ಮಟ್ಟದ ಸಮಾವೇಶ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73 ರ ರಸ್ತೆಯಲ್ಲಿಸಂಚರಿಸುವ ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಹಾಗೂ ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ:-
ಉಡುಪಿ ಕಡೆಯಿಂದ ಮಂಗಳೂರು...
ನಕಲಿ ಮಂಗಳಮುಖಿಯರ ಹಾವಳಿ: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವರು ಮಂಗಳಮುಖಿಯರ ವೇಷ ಧರಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ(ಟ್ರಾನ್ಸ್‍ಜೆಂಡರ್) ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಮಂಗಳಮುಖಿಯರ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ,...
ಮಂಗಳೂರಿಗೆ ಸರಕಾರಿ ವಿಶೇಷ ದತ್ತು ಕೇಂದ್ರ
ಮಂಗಳೂರು: ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ವಿಶೇಷ ದತ್ತು ಕೇಂದ್ರವನ್ನು ಮಂಜೂರು ಮಾಡಿದ್ದು, ಮಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ಬಾಲಕರ ಬಾಲಮಂದಿರದ ಕಟ್ಟಡದಲ್ಲಿ ಈ...







