ಬ್ರಹ್ಮಶ್ರೀ ನಾರಾಯಣ ಗುರುಗಳು ಭರತ ಖಂಡ ಕಂಡ ಮಹಾನ್ ದಾರ್ಶನಿಕರು : ವೇದವ್ಯಾಸ ಕಾಮತ್
ಮ೦ಗಳೂರು: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಪರಿವರ್ತನೆಯ ಹರಿಕಾರ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಪೂಜ್ಯ ಗುರುಗಳ ಹೆಜ್ಜೆ ಗುರುತು ಹೊಂದಿರುವ ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಭರತ ಖಂಡವು ಕಂಡ ಮಹಾನ್ ದಾರ್ಶನಿಕರಾದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರುಗಳು ಈ ಜಗದ...
ಕಾಂಗ್ರೆಸ್ ಗೂಂಡಾ ರಾಜಕಾರಣ ಹೊಸದೇನೂ ಅಲ್ಲ:ಡಾ.ವೈ.ಭರತ್ ಶೆಟ್ಟಿ
ಮಂಗಳೂರು: ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಅದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಸ್ಸಿಗೆ ಕಲ್ಲು ತೂರಾಟ ಮಾಡುವುದು, ಟೈರ್ ಗೆ ಬೆಂಕಿ ಹಚ್ಚುವುದು ಮಾಡಿದ್ದಾರೆ. ಇದು ರಾಜ್ಯದಲ್ಲಿ ಪಶ್ಚಿಮ ಬಂಗಾಲ ಮಾದರಿಯಲ್ಲಿ ಹಿಂಸಾಕೃತ್ಯ ನಡೆಸುವುದರ ಪೂರ್ವಸೂಚನೆಯಾಗಿದೆ“ ಎಂದು ಮಂಗಳೂರು...
ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ
ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.”ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ...
ಸುರ್ ಸೊಭಾಣ್ ಮಕ್ಕಳ ಗಾಯನ ತರಬೇತಿಉದ್ಘಾಟನೆ
ಮ೦ಗಳೂರು``ಮಾಂಡ್ ಸೊಭಾಣ್ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತದೆ. ವೇದಿಕೆ ನೀಡುತ್ತದೆ. ನಾನು ಕೂಡಾ ಗಾಯನ ಕ್ಞೇತ್ರದಲ್ಲಿ ಏನಾದರೂ ಹೆಸರು ಮಾಡಿದ್ದರೆ ಅದರಲ್ಲಿ ಈ ಸಂಸ್ಥೆಯ ತರಬೇತಿಯ ಕೊಡುಗೆ ಬಹಳಷ್ಟಿದೆ. ನಾವು ದಿನಂಪ್ರತಿ ಕಲಿಯಬೇಕು. ಲಭ್ಯ ಅವಕಾಶಗಳನ್ನು ಬಳಸಿಕೊಳ್ಳಬೇಕು. ಇಲ್ಲಿಂದ ಚೆನ್ನಾಗಿ ಕಲಿತು ಹೋದರೆ, ಗೆದ್ದು ಬಂದರೆ ಇಡೀ ಪ್ರಪಂಚ ನಿಮ್ಮನ್ನು ಗಮನಿಸುತ್ತದೆ. ಸುರ್ ಸೊಭಾಣ್ (ಸ್ವರ...
ಆ.19ರಂದು ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆ.19ರಂದು ನಗರದಲ್ಲಿ ಪಾದಯಾತ್ರೆ, ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ..ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಲೇಡಿಹಿಲ್...
ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ
ಮಂಗಳೂರು: 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗು ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗಸ್ಟ್ 22 ರಿಂದ ಅಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿದ್ದಾರೆ.
ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ಶಿವಮೊಗ್ಗ, ದಾವಣಗೆರೆ,...
ಪ್ರಾಕೃತಿಕ ವಿಕೋಪ; ಕಂದಾಯ ಸಚಿವರಿಂದ ಸಭೆ
ಮಂಗಳೂರು.: ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಸಭೆಯು ನಡೆಯಿತು.
ಸಚಿವರು ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಹಲವಾರು ಹಾನಿಗಳು ಉಂಟಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಯನ್ನು...
ಗಿರಿಶಿಖರಗಳ ಚಾರಣ ನಿಷೇಧ: ಆದೇಶ ವಾಪಾಸ್
ಮಂಗಳೂರು: ಗಿರಿಶಿಖರಗಳ ಚಾರಣ ನಿಷೇಧ ಆದೇಶವನ್ನು ಹಿಂಪಡೆಯಲಾಗಿದೆ .2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ, ಮರ ಬೀಳುವಂತಹ ದುರ್ಘಟನೆಗಳು ನಡೆಯುವ ಸಂಬಂಧವಿದ್ದ ಕಾರಣ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಜಿಲ್ಲೆಯಲ್ಲಿ ಗಿರಿತಾಣ/ಶಿಖರಗಳ ಚಾರಣವನ್ನು (ಟ್ರೆಕ್ಕಿಂಗ್) ಮತ್ತು ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ...
ಪಿಓಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ
ಮಂಗಳೂರು: ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಸೂಚನೆ ತಿಳಿಸಿರುವಂತೆ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗಣೇಶ ಚತುರ್ಥಿ ಹಬ್ಬದಂದು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ...
ವಿಕೆ ಫರ್ನಿಚರ್ ,ಇಲೆಕ್ಟ್ರಾನಿಕ್ಸ್ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ರಾಧಾ ಕೃಷ್ಣ ಫೋಟೋ ಸ್ಪಧೆ೯
ಮ೦ಗಳೂರು: ವಿಕೆ ಫರ್ನಿಚರ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ 3ನೇ ವರ್ಷದ ರಾಧಾ ಕೃಷ್ಣ ಆನ್‌ಲೈನ್ ಫೋಟೋ ಸ್ಪರ್ಧೆಯನ್ನು ಏರ್ಪಡಿಸಿದೆ. ಪೋಷಕರು ತಮ್ಮ ಮಕ್ಕಳನ್ನು ಕೃಷ್ಣ ಅಥವಾ ರಾಧೆಯಂತೆ ಅಲಂಕರಿಸಿದ ಇತ್ತೀಚಿಗೆ ತೆಗೆದ ಫೋಟೋಗಳನ್ನು ಮಾತ್ರ ಕಳುಹಿಸಬೇಕು.ಸ್ಪರ್ಧೆಯ ವಿವರಗಳು::ವರ್ಗಗಳು: ವಯಸ್ಸು 0-1, 1-3, 3-5 ವರ್ಷಗಳು. ಸಲ್ಲಿಕೆ ಗಡುವು: 28ನೇ ಆಗಸ್ಟ್ 2024.ಸಲ್ಲಿಕೆ ಅಗತ್ಯತೆಗಳು:...





