28.6 C
Karnataka
Sunday, May 3, 2026

ಸುದ್ದಿ

“ರಾಷ್ಟ್ರೀಯ ಭಾವೈಕ್ಯತಾ ಶಿಬಿರ”

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಭಾಗಿತ್ವದಲ್ಲಿ “ರಾಷ್ಟ್ರೀಯ ಭಾವೈಕ್ಯತಾ ಶಿಬಿರ” ಆಗಸ್ಟ್ 6ರಿಂದ 12 ರವರೆಗೆ ಮೂಡಬಿದ್ರೆಯ ಮಹಾವೀರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನೆ ಅಗಸ್ಟ್ 6ರಂದು ಸಂಜೆ 4 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ...

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವೇಗ ನಿರ್ಬಂಧ

0
ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಗಳ ಕೆಲವು ವಿಭಾಗಳು ಹಾನಿಗೊಂಡಿದ್ದು ಹೆಚ್ಚಿನ ವೇಗದ ಸಂಚಾರ ಅಸುರಕ್ಷಿತವಾಗಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ, ರಾಷ್ಟ್ರೀಯ ಹೆದ್ದಾರಿ ಆಡಳಿತವು ಜಿಲ್ಲೆಯ ಎನ್‍ಎಚ್-66ನಲ್ಲಿ ಸುರತ್ಕಲ್ ನಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ ಮತ್ತು ಬಿ.ಸಿ ರೋಡ್ ನಿಂದ ನಂತೂರು ಜಂಕ್ಷನ್ ವರೆಗೆ ಎನ್‍ಎಚ್-75ರಲ್ಲಿ...

ಎಸ್ ಸಿಡಿಸಿಸಿ ಬ್ಯಾಂಕ್ : “ಸಹಕಾರಿ ಪಿತಾಮಹ” ಮೊಳಹಳ್ಳಿ ಶಿವರಾಯರ 144ನೇ ಜನ್ಮ ದಿನಾಚರಣೆ

0
ಮಂಗಳೂರು: “ಸಹಕಾರಿ ಪಿತಾಮಹ” ದಿ.ಮೊಳಹಳ್ಳಿ ಶಿವರಾಯರ 144ನೇ ಜನ್ಮ ದಿನಾಚರಣೆಯು ಆದಿತ್ಯವಾರ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಜರುಗಿತು.“ಸಹಕಾರ ರತ್ನ“ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...

ಆಗಸ್ಟ್ 6: ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ

0
ಮಂಗಳೂರು: ದಕ್ಷಿಣ ಕನ್ನಡ ಖಾಸಗಿ ಬಸ್ಸು ಮಾಲಕರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಭಾಗಿ ತ್ವದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.ಮಂಗಳೂರು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ದಿನೇಶ್ ಹಾಗೂ...

ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚನೆ:ಈಶ್ವರ ಖಂಡ್ರೆ

0
ಬೆಂಗಳೂರು, ಆ.4: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಸೇರಿದಂತೆ ಎಲ್ಲ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...

ಆ.10ರಂದು ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿ ಪ್ರದಾನ

0
ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10ರಂದು ನಗರದ ಮೋತಿ ಮಹಲ್ ಹೋಟೆಲ್‌ನಲ್ಲಿ ನಡೆಯಲಿದೆ. ಬೆಳಗ್ಗೆ 11ಕ್ಕೆ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಮೇಜರ್ ಜನರಲ್ ಸತೀಶ್ ಭಂಡಾರಿ ಅವರಿಗೆ ‘ಎಮಿನೆಂಟ್...

ತುಳು ಭವನದಲ್ಲಿ ಆಟಿದ ಗೇನ

0
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಹಭಾಗಿತ್ವದಲ್ಲಿ ಆಟಿದ ಗೇನ ಕಾರ್ಯಕ್ರಮ ಆ. 4 ರಂದು ಬೆಳಿಗ್ಗೆ 11.30ಕ್ಕೆ ಉರ್ವಾಸ್ಟೋರ್‍ನ ತುಳು ಭವನದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಉರ್ವಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಭಾರತಿ ಜಿ. ಉದ್ಘಾಟಿಸುವರು. ಹಿರಿಯ ಸಂಶೋಧಕಿ, ತುಳು ವಿದ್ವಾಂಸರಾದ ಡಾ. ಇಂದಿರಾ ಹೆಗ್ಡೆ...

ದಕ್ಷಿಣ ಕನ್ನಡ: 300 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಘೋಷಣೆಗೆ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸುರಿದ ಭಾರೀ ಮಳೆಯಿಂದಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರವೂ ಸೇರಿದಂತೆ ಅಪಾರ ಪ್ರಮಾಣದ ಹಾನಿಯಾಗಿದ್ದು ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ 300 ಕೋಟಿ ರೂಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸರ್ಕಾರವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ...

ಬಿಜೆಪಿಯಿಂದ ಬೃಹತ್ ಪಾದಯಾತ್ರೆಗೆ ನಾಳೆ ಚಾಲನೆ

0
ಮಂಗಳೂರು: ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನಾಳೆ (ಆ.3) ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ ಕುಮಾರಸ್ವಾಮಿ ಅವರ ಸಹಯೋಗದಲ್ಲಿ ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆ ಪ್ರಾರಂಭವಾಗಲಿದೆ. ಆ.7ರಂದು ಮೈಸೂರು ತಲುಪಲಿರುವ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ 5,000ಕ್ಕೂ ಹೆಚ್ಚು ಕಾರ್ಯಕರ್ತರು...

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ : ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

0
ಮಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್,ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್‌ಇನ್ ಫೋರ್‌ಮೇಶನ್ ಸೈನ್ಸ್ ಕೋರ್ಸ್ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ...