ಸುರತ್ಕಲ್ ನಲ್ಲಿ ಜೆಸಿಐ ಸ್ಥಾಪನಾ ದಿನಾಚರಣೆ
ಮ೦ಗಳೂರು: ಶ್ರದ್ಧೆಯಿಂದ ಸೇವೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ದುಡಿದಾಗ ಜನರ ಗೌರವ ಸಿಗುವುದಲ್ಲದೆ ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ಹೊಸಬೆಟ್ಟು ನುಡಿದರು.ಅವರು ಜೆಸಿಐ ಸುರತ್ಕಲ್ ವತಿಯಿಂದ ಗೋವಿಂದದಾಸ ಕಾಲೇಜು ಸುರತ್ಕಲ್ ಇಲ್ಲಿ ನಡೆದ ಜೆಸಿಐ ಸ್ಥಾಪನಾ ದಿನಾಚರಣೆ ಮತ್ತು ವಿದ್ಯಾರ್ಥಿ...
ಕ್ಯಾಪ್ಟನ್ ಸುಧೀರ್ .ಜಿ. ಅಮೀನ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.30ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್. ಜಿ.ಅಮೀನ್ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ...
ಕರಾವಳಿಯ ಟೆಂಪಲ್ ಟೂರಿಸಂಗೆ ಆದ್ಯತೆ ನೀಡಿ: ಶಾಸಕ ಕಾಮತ್ ಮನವಿ
ಬೆ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಟೆಂಪಲ್ ಟೂರಿಸಂ ಬಗ್ಗೆಯೂ ವಿಶೇಷ ಗಮನ ಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿವೇಶನದ ವೇಳೆ ಸರ್ಕಾರದ ಗಮನ ಸೆಳೆದರು.
ದೇಶದ ಪ್ರಸಿದ್ಧ ತೀರ್ಥಕ್ಷೇತ್ರಗಳಂತೆ ಕರಾವಳಿಯಲ್ಲೂ ಸುಪ್ರಸಿದ್ಧ ತೀರ್ಥಕ್ಷೇತ್ರಗಳಿವೆ. ಇಲ್ಲಿನ ದೈವ-ದೇವರುಗಳಿಗೆ ದೇಶ, ವಿದೇಶಗಳಲ್ಲೂ ಭಕ್ತರಿದ್ದಾರೆ. ಹೀಗಾಗಿ ಪ್ರತಿವರ್ಷ ಸಾವಿರಾರು ಭಕ್ತರು ರಸ್ತೆ, ಜಲ,...
ಐಟಿಐ, ಜಿಟಿಟಿಸಿ ಕೋರ್ಸುಗಳಿಗೆ ವಿದ್ಯಾರ್ಥಿಗಳನ್ನುಆಕರ್ಷಿಸಲು ಜಿ.ಪಂ. ಸಿಇಓ ಸೂಚನೆ
ಮಂಗಳೂರು: ಐಟಿಐ ಮತ್ತು ಜಿಟಿಟಿಸಿ ಕೋರ್ಸುಗಳನ್ನು ಕಲಿತವರಿಗೆ ಉದ್ಯೋಗದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಇದರತ್ತ ಆಕರ್ಷಿಸಲು ಒತ್ತು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್ ಸೂಚಿಸಿದ್ದಾರೆ.
ಅವರು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು....
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಓರಿಯಂಟೇಶನ್ ಕಾರ್ಯಕ್ರಮ
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಜುಲೈ 8 ರಂದು ನಡೆಯಿತು.ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು...
ಶಿರೂರು ದುರಂತ: ಮಾನವೀಯ ನೆರವು ನೀಡಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ
ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ...
ಅಗಲಿದ ಪತ್ರಕರ್ತರಿಗೆ ಶ್ರದ್ಧಾಂಜಲಿ ಸಭೆ
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಪ್ಪ್ರೆಡ್ ಡಿಸೋಜ ಮತ್ತು ಖಾಸಗಿ ಟಿ.ವಿ.ಯ ಕ್ಯಾಮರಾಮನ್ ವೀರೇಶ್ ಕಡ್ಲಿಕೊಪ್ಪ ಅವರಿಗೆ ಶ್ರದ್ಧಾಂಜಲಿ ಸಭೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆಯಿತು. ಅಗಲಿದ ಪತ್ರಕರ್ತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಜುಲೈ 28 ರಂದು ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು, ಅಭಿನಂದನಾ ಕಾರ್ಯಕ್ರಮ
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ ಜುಲೈ 28 ರಂದು ಭಾನುವಾರ ಬೆಳಿಗ್ಗೆ 9.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ "ಆಟಿದ ಪೊರ್ಲು ಮತ್ತು ಅಭಿನಂದನಾ ಸಮಾರಂಭ" ನಡೆಯಲಿದೆ.ಕಾರ್ಯಕ್ರಮವನ್ನು ಸುರತ್ಕಲ್ ಬಂಟರ ಸಂಘದ ಕಟ್ಟಡ ಸಮಿತಿಯ ಚೇರ್ ಮ್ಯಾನ್ ಕರುಣಾಕರ ಎಂ ಶೆಟ್ಟಿ...
ಲಯನ್ಸ್ ಕ್ಲಬ್ : ನೂತನ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಲ್ ಬೈಲ್ ಕ್ಲಬ್ ನ 2024-2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.
ಒಂದನೇ ರಾಜ್ಯಪಾಲರು ಮತ್ತು ಪದಗ್ರಹಣ ಅಧಿಕಾರಿ ಕುಡ್ಲಿ ಅರವಿಂದ ಶೆಣೈ pmjf ಇವರು ನೂತನ ಅಧ್ಯಕ್ಷ ಸೂರಜ್ ಆಚಾರ್ಯ ಕದ್ರಿ, ಕಾರ್ಯದರ್ಶಿ ಕಿಶೋರ್ ಡಿ ಶೆಟ್ಟಿ, ಕೋಶಾಧಿಕಾರಿ ಸತ್ಯೇಂದ್ರ ಭಟ್...
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಕಾರ್ಮಿಕಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು...






