ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ: ಡಾ.ಶಾಂತಾರಾಮಶೆಟ್ಟಿ
ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ಸೇರಿದಂತೆ ಕೃತಕ ಅಂಗಾಂಗ ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್‌ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು.ದಕ್ಷಿಣ...
ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ
ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದರು."ಪ್ರತಿಯೊಂದು ಕಡೆಯಲ್ಲೂ ಪಾಸಿಟಿವ್...
ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು:2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯ ಮಿತಿಯು...
ಕೆಂಪೇಗೌಡ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಮಮತಾ ಗಟ್ಟಿ
ಮಂಗಳೂರು: ಬೆಂಗಳೂರು ಅಭಿವೃದ್ಧಿಯ ರೂವಾರಿ ಕೆಂಪೇಗೌಡ ಅವರ ವ್ಯಕ್ತಿತ್ವ, ಆದರ್ಶ ಅವರ ಜಾತ್ಯತೀತ ಮನೋಭಾವ ಇಂದಿನ ಸಮಾಜದಲ್ಲಿ ಯುವ ಸಮುದಾಯಕ್ಕೆ ಮಾದರಿ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಅವರು ಹೇಳಿದರು.
ಅವರು ಗುರುವಾರ ಉರ್ವಸ್ಟೋರ್‍ನ ತುಳುಭವನದಲ್ಲಿ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ...
ಉಚಿತ ಯಕ್ಷಗಾನ ತರಬೇತಿ ಅಭಿಯಾನ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ವತಿಯಿಂದ ಉಚಿತ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷಶಿಕ್ಷಣ ತರಗತಿಯ ಉದ್ಘಾಟನಾ ಸಮಾರಂಭವನ್ನು ಮುಳ್ಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಉದ್ಘಾಟಿಸಿದರು.ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ಪಟಗಾರ ಅಧ್ಯಕ್ಷತೆ ವಹಿಸಿದ್ದರು.ಪಟ್ಲ ಫೌಂಡೇಶನ್ ಟ್ರಸ್ಟ್ ನ...
ಶಶಿರಾಜ್ ಕಾವೂರ್ ಗೆ ಸಿಜಿಕೆ ಪ್ರಶಸ್ತಿ
ಮಂಗಳೂರು: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ 'ಸಿಜಿಕೆ ರಂಗಪುರಸ್ಕಾರ' -2024 ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ, ನಟ, ಸಂಘಟಕ ಮತ್ತು ಗೀತ ರಚನೆಕಾರ.
ಏಕಾದಶಾನನ, ಬರ್ಬರೀಕ, ನೆಮ್ಮದಿ ಅಪಾರ್ಟ್‌ಮೆಂಟ್ ಫ್ಲಾಟ್...
ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿಗಳು ಸಕಾಲಕ್ಕೆ ದೊರಕಬೇಕು : ಜಿಲ್ಲಾಧಿಕಾರಿ ಸೂಚನೆ
ಮಂಗಳೂರು:ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿಗಳು ಸುಲಲಿತವಾಗಿ ಹಾಗೂ ಸಕಾಲಕ್ಕೆ ದೊರಕುವಂತೆ ಮಾಡಲು ಮತ್ತು ಔಷಧಿಗಳ ಸಮರ್ಪಕ ನಿರ್ವಹಣೆಗೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಮುಖ್ಯ ಉಗ್ರಾಣದಿಂದ ರೋಗಿಗಳಿಗೆ ತಲುಪಿಸುವವರೆಗೂ ವಿವಿಧ ಹಂತಗಳಲ್ಲಿ ಕ್ರಮಬದ್ಧವಾಗಿ ನಿರ್ವಹಿಸಲು ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಕೆಎಂಸಿ ಆಸ್ಪತ್ರೆಯ ಕಡೆಯಿಂದ ಒಂದು ಪ್ರತ್ಯೇಕ ಔಷಧ ತಂತ್ರಾಂಶವನ್ನು ಅಭಿವೃದ್ದಿ...
ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅಗತ್ಯ : ಸಿವಿಲ್ ನ್ಯಾಯಾಧೀಶರು
ಮಂಗಳೂರು: ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾದದ್ದು, ವಿದ್ಯಾರ್ಥಿಗಳಲ್ಲಿ ಆಗುವಂತಹ ಬದಲಾವಣೆ, ನಡವಳಿಕೆ, ವಿದ್ಯಾರ್ಥಿಗಳ ಚಲನವಲನಗಳ ಬಗ್ಗೆ ಹೆಚ್ಚಾಗಿ ಶಿಕ್ಷಕರಿಗೆ ತಿಳಿದಿರುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದ ದಾಸ್ಯಕ್ಕೆ ಒಳಗಾಗದಂತೆ ಶಿಕ್ಷಕರು ಅವರೊಂದಿಗೆ ಸಮಾಲೋಚನಗಳನ್ನು ನಡೆಸಿ ಅವರಿಗೆ ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು...
ಪ್ರವಾಸೋದ್ಯಮ ಆಕರ್ಷಣೆಗೆ ಕಾರ್ಯಕ್ರಮಗಳ ಕ್ಯಾಲೆಂಡರ್: ಯು.ಟಿ. ಖಾದರ್
ಮಂಗಳೂರು: ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಈಗಾಗಲೇ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳನ್ನು ಹಾಗೂ ಉತ್ಸವಗಳನ್ನು ಬಳಸಿಕೊಂಡು ಹೊಸದಾಗಿ ಇನ್ನಷ್ಟು ಕಾರ್ಯಕ್ರಮ ಏರ್ಪಡಿಸಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಬಲ...
ಕುಮಾರಸ್ವಾಮಿಗೂ ಮೊದಲು ಚನ್ನಪಟ್ಟಣ ನೋಡಿದವನು ನಾನು: ಡಿಸಿಎಂ ಡಿ.ಕೆ.ಶಿವಕುಮಾರ್
ಮಂಗಳೂರು:“ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಮಂಗಳೂರಿನ ಬಜಪೆ ವಿಮಾನ ನಿಲ್ದಾಣ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ...






