34 C
Karnataka
Sunday, May 3, 2026

ಸುದ್ದಿ

ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪ:ಅಧಿಕಾರಿಗಳ ಸಭೆ

0
ಮಂಗಳೂರು : 2024-25 ನೇ ಸಾಲಿನ ಮುಂಗಾರು ಮಳೆ ಹಾಗೂ ಪ್ರಾಕೃತಿಕ ವಿಕೋಪದಿಂದ ಜೀವಹಾನಿ, ನೆರೆಹಾವಳಿ, ಜಾನುವಾರು, ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ನೇತೃತ್ವದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಯಿತು.ಶಾಸಕ ವೇದವ್ಯಾಸ ಕಾಮತ್...

ಮಿಥುನ ಕೊಡೆತ್ತೂರ್‌ಗೆ‘ ಬ್ರಾ೦ಡ್ ಮಂಗಳೂರು” ಪ್ರಶಸ್ತಿ

0
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ "ಬ್ರಾ೦ಡ್ ಮಂಗಳೂರು" ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ.‌ ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್‌ 7ರಂದು ಪ್ರಕಟವಾದ ಮಿಥುನ್‌ ಅವರ "‌ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ' ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು.,...

ಜೂನ್ 28: ಮೇಯರ್ ಪೋನ್-ಇನ್ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಪೋನ್-ಇನ್ ಕಾರ್ಯಕ್ರಮ ಜೂನ್ 28ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆಯಲ್ಲಿರುವ ಮಹಾಪೌರರ ಕೊಠಡಿಯಲ್ಲಿ ನಡೆಯಲಿದೆ.ಸಾರ್ವಜನಿಕರು ಪೋನ್-ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301, 0824-2220318 ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.

ಗ್ರಂಥಾಲಯ ವಿಜ್ಞಾನ ತರಬೇತಿ: ಅರ್ಜಿ ಆಹ್ವಾನ

0
ಮಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು, ಬೆಂಗಳೂರು, ಧಾರವಾಡ, ಕಲುಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಜೂನ್ 19 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಪರೀಕ್ಷೆಯಲ್ಲಿ ಶೇಕಡ 40%ರಷ್ಟು, ಎಸ್.ಸಿ/ಎಸ್.ಟಿ ಶೇಕಡ 35% ರಷ್ಟು ಅಂಕ ಪಡೆದ ಅಭ್ಯರ್ಥಿಗಳು...

ಡಿಪ್ಲೋಮಾ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ನಲ್ಲಿ 2024-25ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 17ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ...

ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ತ್ವರಿತ ಸಾಲ ಮಂಜೂರು : ಬ್ಯಾಂಕ್‍ಗಳಿಗೆ ಜಿ.ಪಂ ಸಿಇಓ ಸೂಚನೆ

0
ಮಂಗಳೂರು: ಸರಕಾರದ ವಿವಿಧ ಸಾಲ ಆಧಾರಿತ ಫಲಾನುಭವಿಗಳ ಯೋಜನೆಗಳ ಫಲಾನುಭವಿಗಳಿಗೆ ಬ್ಯಾಂಕುಗಳು ಸಾಲವನ್ನು ವಿಳಂಬವಿಲ್ಲದೆ ಮಂಜೂರು ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್.ಕೆ ಅವರು ಸೂಚಿಸಿದರು. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕುಗಳ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಯಂ ಉದ್ಯೋಗ, ಟ್ಯಾಕ್ಸಿ ಖರೀದಿ...

ಬಹರೈನ್ ಕನ್ನಡ ಸಂಘ : ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ

0
ಮಂಗಳೂರು: ಕರ್ನಾಟಕ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಶನಿಪೂಜೆಯು ಶ್ರೀ ಕ್ಷೇತ್ರ ಕದ್ರಿಯ ಅರ್ಚಕ ವೇ.ಮೂ. ಕೃಷ್ಣ ಅಡಿಗರ ಪೌರೋಹಿತ್ಯದಲ್ಲಿ ನೆರವೇರಿತು.ಇದೇ ಸಂದರ್ಭದಲ್ಲಿ ಅತಿಥಿ ಕಲಾವಿದರು ಹಾಗೂ ಸಂಘದ ಕಲಾವಿದರ ‌ಕೂಡುವಿಕೆಯಲ್ಲಿ "ಶ್ರೀ ಶನೀಶ್ವರ ಮಹಾತ್ಮೆ" ಯಕ್ಷಗಾನ ಪ್ರದರ್ಶಿಸಲ್ಪಟ್ಟಿತು.ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ನಿರ್ದೇಶನದಲ್ಲಿ...

ಕೆನರಾ ಹೈಸ್ಕೂಲ್ ಸಿ ಬಿಎಸ್‌ಸಿ ಶಾಲೆ: ಮಂತ್ರಿಮಂಡಲ ಹಾಗೂ ವಿವಿಧ ಸಂಘಗಳ ಪದಗ್ರಹಣ ಸಮಾರಂಭ

0
ಮಂಗಳೂರು : ನಗರದ ಕೆನರಾ ಹೈಸ್ಕೂಲ್ ಸಿ ಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಮಂತ್ರಿ ಮಂಡಲದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವು ಜೂ. 22 ರಂದು ಟಿ ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಸಮೂಹ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಸಿಎ ಗಿರಿಧರ್ ಕಾಮತ್ ಅವರು, ಕಾರ್ಯಕ್ರಮವನ್ನು ಉದ್ದೇಶಿಸಿ...

ಔಷಧೀಯ ಗಿಡಗಳ ಸಂರಕ್ಷಣೆ ನಮ್ಮ ಹೊಣೆ:ಶೀನ ಶೆಟ್ಟಿ

0
ಮಂಗಳೂರು : ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯನ್ನು ಗುಣ ಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಮಂಗಳೂರು ತಾಲೂಕು ಘಟಕದ ವತಿಯಿಂದ...

ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನ

0
ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣದ ವತಿಯಿಂದ ನಗರದ ಅಟಲ್ ಸೇವಾ ಕೇಂದ್ರದಲ್ಲಿ ಜನಸಂಘದ ಸ್ಥಾಪಕಾಧ್ಯಕ್ಷ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸಂಸ್ಮರಣಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ರಾಷ್ಟ್ರೀಯ ವಿಚಾರಧಾರೆ ಹೊಂದಿರುವ ಭಾರತೀಯ ಜನಸಂಘವನ್ನು ಸ್ಥಾಪಿಸಿ ರಾಷ್ಟ್ರಾದ್ಯಂತ ಸಂಚರಿಸಿ ನಮ್ಮೆಲ್ಲರನ್ನೂ ಒಂದು ತತ್ವಸಿದ್ಧಾಂತದಡಿ...