ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್
ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ತ್ವರಿತ ನ್ಯಾಯಕ್ಕಾಗಿ ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಬಹುದು.
ಇತ್ಯರ್ಥ...
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ
ಮಂಗಳೂರು: ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬೈ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಸಮಾಜ ಕಲ್ಯಾಣ ಕಾರ್ಯಕ್ರಮ ಸೋಮವಾರ ನಗರದ ಪುರಭವನದಲ್ಲಿ ಜರುಗಿತು. ಸಮಾಜ ಕಲ್ಯಾಣ ಕಾರ್ಯಕ್ರಮದಂಗವಾಗಿ 1,312 ಮಕ್ಕಳಿಗೆ ಸುಮಾರು 1 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ದೀಪ...
ನೀಟ್ ಪರೀಕ್ಷೆಯ ಅವ್ಯವಹಾರ ಖಂಡಿಸಿ ಎನ್.ಎಸ್.ಯು.ಐ ಪ್ರತಿಭಟನೆ
ಮಂಗಳೂರು: ನೀಟ್ ಪರೀಕ್ಷೆಯ ಅವ್ಯವಹಾರ ಖಂಡಿಸಿ ದ.ಕ. ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಶನಿವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ರಾಜ್ಯ ಎನ್.ಎಸ್.ಯು ಉಪಾಧ್ಯಕ್ಷ ಫಾರೂಕ್ ಬಾಯಬೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಅತ್ಯಂತ ಗಂಭೀರ ಹಗರಣವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿ...
ಪೆಟ್ರೋಲ್,ಡಿಸೇಲ್ ದರ ಏರಿಕೆ ಖಂಡನೀಯ : ಶಾಸಕ ವೇದವ್ಯಾಸ ಕಾಮತ್
ಮ೦ಗಳೂರು: ಎಲ್ಲವೂ ಉಚಿತ, ಪ್ರತಿಯೊಬ್ಬರಿಗೂ ಖಚಿತ, ಇದು ನಮ್ಮ ಗ್ಯಾರಂಟಿ" ಎನ್ನುತ್ತಾ ಕರ್ನಾಟಕದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರ ಕಳೆದ ಒಂದು ವರ್ಷದಿಂದ ನಿರಂತರವಾಗಿ "ಬೆಲೆ ಏರಿಕೆಯ ಗ್ಯಾರಂಟಿ" ನೀಡಿದ್ದರ ಪರಿಣಾಮವಾಗಿ ರಾಜ್ಯದ ಜನರು ಹೈರಾಣಾಗಿದ್ದಾರೆ. ಇದೀಗ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಸಿ ಜನತೆಯನ್ನು ಇನ್ನಷ್ಟು ಸಂಕಟಕ್ಕೆ ದೂಡಲಾಗಿರುವುದು ಖಂಡನೀಯ...
ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ (ಬಾಲಕರಿಗೆ ಮಾತ್ರ) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು,...
ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು: ಜಿಲ್ಲೆಯಾದ್ಯಂತ ಜೂನ್ 21ರಂದು ಹಮ್ಮಿಕೊಳ್ಳಲಾಗಿರುವ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ಹಾಗೂ ಅಚ್ಚುಕಟ್ಟಾಗಿ ಸಂಘಟಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ. ಅವರು ಅದಿಕಾರಿಗಳಿಗೆ ಸೂಚನೆ ನೀಡಿದರು.ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಶನಿವಾರ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲಾಡಳಿತ, ಆಯುಷ್ ಇಲಾಖೆ,...
ಶಾಲಾ ಸಮವಸ್ತ್ರ, ಮತ್ತು ಪುಸ್ತಕ ವಿತರಣೆ
ಮ೦ಗಳೂರು: ಕೆನರಾ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ, ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಶನಿವಾರ ಜರಗಿತು.ಕೆನರಾ ಆಡಳಿತ ಮಂಡಳಿ, ಶಾರದಾ ಯುವಕ ವೃಂದ ಮತ್ತು ಬುಕ್ ಮಾರ್ಕ್ ವತಿಯಿಂದ ಸಮವಸ್ತ್ರ ಮತ್ತು ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರು ಮತ್ತು ಶಾಲೆಯ ಸಂಚಾಲಕರಾದ ಕೆ.ಸುರೇಶ್ ಕಾಮತ್ ,...
ತೇಲುವ ಜಟ್ಟಿ ಕಾಮಗಾರಿ ತ್ವರಿತಗೊಳಿಸುವಂತೆ ಮೀನುಗಾರಿಕಾ ನಿಗಮ ಅಧ್ಯಕ್ಷರ ಸೂಚನೆ
ಮಂಗಳೂರು: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ. ನಾರಾಯಣ ರಾವ್ ಅವರು ನಿಗಮದ ಕೇಂದ್ರ ಕಚೇರಿಗೆ ಶನಿವಾರ ಭೇಟಿ ನೀಡಿ ನಿಗಮದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು.ಮಂಗಳೂರಿನ ಮೀನುಗಾರಿಕಾ ಬಂದರು, ಮಂಜುಗಡ್ಡೆ ಸ್ಥಾವರ ಡೀಸಿಲ್ ಬಂಕ್‍ಗಳ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ನಾಡದೋಣಿಗಳ ನಿಲುಗಡೆಗೆ ನಿಗಮದಿಂದ ಕೈಗೊಂಡಿರುವ ತೇಲುವ ಜಟ್ಟಿ...
ಜೂ.22ರಿಂದ ಪಿಲಿಕುಳದಲ್ಲಿ ಹಣ್ಣುಗಳ ಮೇಳ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.22 ಹಾಗೂ 23 ರಂದು (ಶನಿವಾರ ಮತ್ತು ಆದಿತ್ಯವಾರ) ‘ಹಣ್ಣುಗಳ ಮೇಳ’ ವನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ಪ್ರಾದೇಶಿಕವಾದ ಹಲಸು, ಮಾವು ಹಾಗೂ ಇತರ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ದಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆಯನ್ನು...
ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ: ಡಾ.ರೊನಾಲ್ಡ್ ಕೊಲಾಸೊ ಆಶಯ
ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ...





