ಕಲ್ಲಡ್ಕ : ಜಿಲ್ಲಾಧಿಕಾರಿಗಳಿ೦ದ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ
ಮ೦ಗಳೂರು : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕ ಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ...
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ
ಮಂಗಳೂರು: ಮಕ್ಕಳು ಶಿಕ್ಷಣ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಸಮಾಜದ ಮೇಲೆ ಇದೆ. ಇದರಿಂದ ಮಕ್ಕಳು ಬಾಲಕಾರ್ಮಿಕರಾಗುವುದನ್ನು ತಪ್ಪಿಸಿ ಸಮಾಜದಲ್ಲಿ ಗೌರವಯುತವಾಗಿ ಜೀವಿಸಲು ಅವಕಾಶ ಸಿಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ. ಅವರು ಹೇಳಿದರು
ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ...
ಸುರತ್ಕಲ್ ಬಂಟರ ಸಂಘ: ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ
ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ.
ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು...
ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ ಆಳ್ವ
ಮಂಗಳೂರು: ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿಪ್ರಾಯಿಸಿದ್ದಾರೆ.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 12ರಿಂದ 24ರವರೆಗೆ ಪತ್ರಕರ್ತರು ಹಾಗೂ ಅವರು ಕುಟುಂಬ...
ದೇರಳಕಟ್ಟೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ
ಮಂಗಳೂರು: ನಮಗೆ ಉಚಿತವಾಗಿ ದೊರೆಯುವ ನೈಸರ್ಗಿಕ ಸಂಪನ್ಮೂಲದ ಸಂರಕ್ಷಣೆ ಯೂ ನಮ್ಮೆಲ್ಲರ ಹೊಣೆಗಾರಿಕೆ ಯಾಗಬೇಕು ಎಂದು ಅರಣ್ಯ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ಅರಣ್ಯಸಂರಕ್ಷಣಾಧಿಕಾರಿ ಶ್ರೀಧರ್ ತಿಳಿಸಿದ್ದಾರೆ.ಅವರು ಇಂದು ದೇರಳಕಟ್ಟೆಯ ರತ್ನ ಎಜುಜೇಶನ್ ಟ್ರಸ್ಟ್ ನ ವತಿಯಿಂದ ನಡೆಯುತ್ತಿರುವ ವಿದ್ಯಾರತ್ನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ದಕ್ಷಿಣ ಕನ್ನಡ ಅರಣ್ಯ ಇಲಾಖೆ,ನೆಲ್ಲಿಗುಡ್ಡೆ ಪರಿಸರ ಅಧ್ಯಯನ...
ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್: ಅರ್ಜಿ ಆಹ್ವಾನ
ಮಂಗಳೂರು: 2024-2025ನೇ ಸಾಲಿನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ವಿವಿಧ ಡಿಪ್ಲೋಮಾ ಕೋರ್ಸು ಸೇರಲು ಅರ್ಹ ಅಭ್ಯರ್ಥಿಗಳಿಂದ ಆಫ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್...
ಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆ
ಮಂಗಳೂರು: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪೆನಿಯನ್ನು ನಿಗದಿಪಡಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ, ಭತ್ತವು ನೊಂದಾಯಿತ ಬೆಳೆಯಾಗಿದ್ದು ಭತ್ತ ಬೆಳೆಯುವ...
ಸುರತ್ಕಲ್ ಬಂಟರ ಸಂಘದಿ೦ದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ
ಸುರತ್ಕಲ್: ಬಂಟರ ಸಂಘ ಸುರತ್ಕಲ್ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಂಟರ ಸಂಘದಲ್ಲಿ ನೆರವೇರಿತು.ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಯ ಮೆನೇಜಿಂಗ್ ಡೈರೆಕ್ಟರ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, "ಸುರತ್ಕಲ್ ಬಂಟರ ಸಂಘವನ್ನು ಹಿರಿಯರು ಉತ್ಸಾಹದಿಂದ ಕಟ್ಟಿದ್ದಾರೆ....
ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ : ವಾರದೊಳಗೆ ದುರಸ್ತಿ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಮಳೆಗಾಲದಲ್ಲಿ ಸಿದ್ಧತೆಗಳ ಬಗ್ಗೆ...
ವಿವಿ ಕಾಲೇಜು: ನಿವೃತ್ತ ಪ್ರಾಂಶುಪಾಲರು, ಪ್ರಾಧ್ಯಾಪಕರಿಗೆ ಸನ್ಮಾನ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದಇತ್ತೀಚೆಗೆ ವಯೋನಿವೃತ್ತಿ ಹೊಂದಿದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮತ್ತು ರಾಜ್ಯಶಾಸ್ತ್ರವಿಭಾಗದ ಮುಖ್ಯಸ್ಥೆಯಾಗಿದ್ದ ಪ್ರೊ. ಲತಾ ಎ. ಪಂಡಿತ್ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಕರ್ನಲ್‌ಎನ್. ಶರತ್ ಭಂಡಾರಿ, ಡಾ. ಅನಸೂಯ ರೈ...







