28.1 C
Karnataka
Saturday, May 2, 2026

ಸುದ್ದಿ

ಮೇ 11ರಿಂದ 13: ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

0
ಮಂಗಳೂರು: ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ ತಿರುವೈಲು, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಸಾವಯವ ಕೃಷಿಕ ಗ್ರಾಹಕ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ನವೋದಯ ಸ್ವ ಸಹಾಯ ಸಂಘ...

ಮಾಜಿ ಶಾಸಕ,ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ನಿಧನ

0
ಬೆಳ್ತಂಗಡಿ :ದ.ಕ. ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ ಬಂಗೇರ (79) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ...

ಮಿಸೆಸ್ ಯುಎಇ ಇ೦ಟರ್ ನೇಶನಲ್‌ 2024 : ಮಂಗಳೂರಿನ ಗ್ವಿನ್ ಶಿಬೋನಿ ಡಿಸೋಜಗೆ ಪ್ರಶಸ್ತಿ

0
ಮ೦ಗಳೂರು: ದುಬೈಯ ಡೌನ್‌ಟೌನ್ ನಲ್ಲಿ ಇತ್ತೀಚೆಗೆ ನಡೆದ ಮಿಸೆಸ್ ಯುಎಇ ಅಂತಾರಾಷ್ಟ್ರೀಯ 2024 – ಸೀಸನ್ 5ರಲ್ಲಿ ಮಂಗಳೂರಿನ ಗ್ವಿನ್ ಶಿಬೋನಿ ಡಿಸೋಜ ಅವರು ಸ್ವರ್ಣ ವಿಭಾಗದಲ್ಲಿ 2ನೇ ರನ್ನರ್ ಅಪ್ ಗೆದ್ದಿದ್ದಾರೆ ಮತ್ತು ಮಿಸೆಸ್ ಬೆಸ್ಟ್ ಪರ್ಸನಾಲಿಟಿ 2024ರ ಉಪ ಶೀರ್ಷಿಕೆಯನ್ನು ಗೆದ್ದಿದ್ದಾರೆ.ಮುಸ್ಕಾನ್ ಈವೆಂಟ್‌ ಪ್ರಾಯೋಜಿಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಾಪಕರಾದ ಮೀನಾ ಅಸ್ರಾಣಿ,ಶೇಖಾ...

ಮೇ 9 ರಿಂದ ಮಾವು, ಹಲಸು ಮೇಳ

0
ಮಂಗಳೂರು:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮತ್ತು ಹಲಸು ಮೇಳ ಇದೇ ಮೇ9 ರಿಂದ 13ರ ವರೆಗೆ ನಡೆಯಲಿದ್ದು, ಮೇ 9ರಂದು ಮಧ್ಯಾಹ್ನ 12 ಗಂಟೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ...

ಕನ್ನಡ ಸಂಘ ಅಲ್ ಐನ್‌ನ 21ನೇ ವಾರ್ಷಿಕೋತ್ಸವ

0
ಮಂಗಳೂರು : ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಅಲ್ ಐನ್‌ನ ಬುಲರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಿತು. ಉದ್ಯಮಿಗಳಾದ ಜೋಸೆಫ್ ಮಥಾಯಸ್, ಹರೀಶ್ ಶೇರಿಗಾರ್, ಮಹಮ್ಮದ್ ಇಬ್ರಾಹಿಂ, ಜಾನ್ ಲ್ಯಾನ್ಸಿ ಡಿಸೋಜಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ಸಂಘ ಶಾರ್ಜಾ ಪೂರ್ವಾಧ್ಯಕ್ಷ ಬಿ. ಕೆ.ಗಣೇಶ್, ಅಬುದಾಬಿ ಕರ್ನಾಟಕ ಸಂಘದ ಪ್ರಧಾನ...

ಮುಖ್ಯಮ೦ತ್ರಿಯವರಿಗೆ ದ.ಕ ಯುವ ಜೆಡಿಎಸ್ ಮನವಿ

0
ಮ೦ಗಳೂರು: ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಎನ್ನಲಾದ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಸೂಕ್ತ ತನಿಖೆ ಮಾಡುವಲ್ಲಿ ರಾಜ್ಯ ಸರ್ಕಾರ ಹಾಗೂ ಎಸ್ಐ ಟಿ ಸಂಪೂರ್ಣ ವಿಫಲವಾಗಿದ್ದು ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎ೦ದು ದ.ಕ ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಮುಖ್ಯಮ೦ತ್ರಿಯವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ಮನವಿ...

ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

0
ಮ೦ಗಳೂರು: ಸಾಹಿತಿ, ಲೇಖಕ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ.ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ಹೃದಯಾಘಾತದಿಂದ ಮ೦ಗಳವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಈರ್ವರು ಪುತ್ರಿಯರು, ಓರ್ವ ಪುತ್ರ ಮೊಮ್ಮಕ್ಕಳು, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ದಾಖಲಾತಿ: ಅರ್ಜಿ ಅಹ್ವಾನ

0
ಮಂಗಳೂರು: 2024-25ನೇ ಸಾಲಿಗೆ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.in ಮೂಲಕ ದಾಖಲಾತಿ ಅರ್ಜಿ ಮುದ್ರಿಸಿಕೊಂಡು...

ವಿಚಾರಣಾಧೀನ ಕೈದಿ ಆತ್ಮಹತ್ಯೆ

0
ಮ೦ಗಳೂರು:ವಿಚಾರಣಾಧೀನ ಕೈದಿ ವೆನ್ಲಾಕ್ ಆಸ್ಪತ್ರೆಯ ಜೈಲು ವಾರ್ಡ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಸೋಮವಾರ ನಡೆದಿದೆ.ಕೇರಳದ ಕಡುರುಗೋಡು ನಿವಾಸಿ ಮುಹಮ್ಮದ್ ನೌಫಲ್ (26) ಆತ್ಮಹತ್ಯೆ ಮಾಡಿಕೊ೦ಡಿರುವ ಕೈದಿ. ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 109/2022 ರ ಅಡಿಯಲ್ಲಿ 2022 ರ ಡಿಸೆಂಬರ್ 26 ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುಹಮ್ಮದ್ ನೌಫಲ್ ಮಾನಸಿಕ ಖಿನ್ನತೆಯ...

ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

0
ಮಂಗಳೂರು.: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ...