28.1 C
Karnataka
Saturday, May 2, 2026

ಸುದ್ದಿ

ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಿ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಈ ಕಾರಣ ನೀರನ್ನು ಅನಗತ್ಯವಾಗಿ...

ಮಾವು ಮತ್ತು ಹಲಸು ಮೇಳ

0
ಮಂಗಳೂರು: ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಮೇ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ. ರೈತರು ಮಾವು ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾ ಪಂಚಾಯತ್ ನಲ್ಲಿರುವ...

ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ

0
ಮಂಗಳೂರು: ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್‌ನಲ್ಲಿಏಪ್ರಿಲ್ 30 ರಂದು ಆಚರಿಸಲಾಯಿತು. ಜಿಲ್ಲಾ ವೈದ್ಯಾಧಿಕಾರಿ ಡಾ.ಜೆಸಿಂತಾ ಡಿಸೋಜಾ ಮುಖ್ಯ ಅತಿಥಿಗಳಾಗಿದ್ದರು. ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಉಷಾ ಮುಕ್ಕುಂದ್ ಭಂಡಾರಿ, ಮತ್ತು RGUHS ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಡಾ. ವೈಶಾಲಿ ಅತಿಥಿಗಳಾಗಿದ್ದರು. ಇಂದಿರಾ ಎಜುಕೇಶನಲ್ ಟ್ರಸ್ಟ್‌ನ ಪಿಆರ್‌ಒ...

ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ -ವಿಶ್ವ ಹೋಮಿಯೋಪತಿ ದಿನಾಚರಣೆ

0
ಮ೦ಗಳೂರು: ಹೋಮಿಯೋಪತಿಯನ್ನು ವೈಜ್ಞಾನಿಕ ವಿಚಾರಗಳೊಂದಿಗೆ ಜನರಿಗೆ ಪ್ರಸ್ತುತಪಡಿಸುವಲ್ಲಿ ಫಾದರ್ ಮುಲ್ಲರ್ ಸಂಸ್ಥೆ ಯಶಸ್ವಿ ಹೆಜ್ಜೆಯನ್ನಿಟ್ಟಿದ್ದು,ವಿದ್ಯಾರ್ಥೀಗಳು ಪ್ರಸ್ತುತತೆಯನ್ನು ಅಳವಡಿಸಿ ಅಧ್ಯಯನದೊಂದಿಗೆ ಸಂಶೋಧನೆ ನಡೆಸುವ ಮನೋಭಾವ ಬೆಳೆಸಿಕೊಂಡಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಸಿಎಜಿ ಇಂಡಿಯಾದ ಸೀನಿಯರ್ ಅಕೌಂಟೆಂಟ್ ಜನರಲ್ ಡಾ. ರಾಹುಲ್ ಪಿ. ಹೇಳಿದರು.ಹೋಮಿಯೋಪತಿ ಜನಕ ಡಾ. ಸ್ಯಾಮುವೆಲ್ ಹಾನ್ನಿಮನ್ 269ನೇ ಜನ್ಮದಿನದ ಸ್ಮರಣಾರ್ಥ ದೇರಳಕಟ್ಟೆಯ...

ಕಾರ್ಮಿಕ ವರ್ಗದ ಶ್ರಮವಿಲ್ಲದೆ ಜಗತ್ತು ಮುನ್ನಡೆಯಲು ಸಾಧ್ಯವಿಲ್ಲ : ಡಾ.ಕೃಷ್ಣಪ್ಪ ಕೊಂಚಾಡಿ

0
ಮ೦ಗಳೂರು: 8 ಗಂಟೆಗಳ ದುಡಿಮೆಗಾಗಿ 139 ವರ್ಷಗಳ ಹಿಂದೆ ಅಮೇರಿಕಾದ ಚಿಕಾಗೋ ನಗರದ ಕಾರ್ಮಿಕರು ನಡೆಸಿದ ಐತಿಹಾಸಿಕ ಹೋರಾಟ ಆಕಸ್ಮಿಕವೇನಲ್ಲ.ಅಂದಿನ ಬಂಡವಾಳಶಾಹಿಗಳ ಲಾಭಕೋರತನದಿಂದ ಆಕ್ರೋಶಿತಗೊಂಡ ಕಾರ್ಮಿಕರು 16 ಗಂಟೆಗಳ ದುಡಿಮೆಯ ವಿರುದ್ದ ದಶಕಗಳ ಕಾಲ ಪ್ರಬಲ ಹೋರಾಟ ನಡೆಸಿದ್ದರ ಪರಿಣಾಮವಾಗಿ ಕೊನೆಗೆ 8 ಗಂಟೆಗಳ ದುಡಿಮೆಯ ಕೂಗು ಜಗತ್ತಿನಾದ್ಯಂತ ಮಾರ್ದನಿಸಿ ಮೇ ದಿನಾಚರಣೆಯುಂಟಾಯಿತು. ವಿಶ್ವದ...

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

0
ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ ಎಂದು ಟ್ರಸ್ಟ್‌ ನ ಸ್ಥಾಪಕಾಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ...

ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

0
ಮಂಗಳೂರು: ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ...

ಇನ್‌ಲ್ಯಾಂಡ್ ಬ್ಯುಸಿನೆಸ್ ಪಾರ್ಕ್’ ಉದ್ಘಾಟನೆ

0
ಮಂಗಳೂರು, :ಇನ್ ಲ್ಯಾಂಡ್ ಬಿಲ್ಡರ್ಸ್‌ ಹಲವು ಸುಂದರ ವಿನ್ಯಾಸದ ಕಟ್ಟಡಗಳ ನಿರ್ಮಾಣ ಮಾಡುವ ಮೂಲಕ ನಗರದ ಸೊಬಗನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತೇಜಸ್ವಿನಿ ಆಸ್ಪತ್ರೆಯ ಸ್ಥಾಪಕರು ಮತ್ತು ನಿಟ್ಟೆ ವಿಶ್ವ ವಿದ್ಯಾನಿಲ ಯದ ಸಹಕುಲಾಧಿಪತಿ ಎಸ್ಎಸ್ಐಒಟಿ ಅಧ್ಯಕ್ಷ ರಾದ ಡಾ.ಶಾಂತಾರಾಮ ಶೆಟ್ಟಿ ಹೇಳಿದ್ದಾರೆ.ಅವರು ನಗರದ ಬಿಜೈ ಮುಖ್ಯ ರಸ್ತೆಯ ಬಳಿ ತಲೆಯೆತ್ತಿರುವ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಖರ ಅಪ್ರೋಚ್ ಲೈಟಿಂಗ್ ಸಿಸ್ಟಮ್ ಕಾಮಗಾರಿ ಆರಂಭ

0
ಮಂಗಳೂರು: ‌ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಖರ ಅಪ್ರೋಚ್ ಲೈಟಿಂಗ್ ಸಿಸ್ಟಮ್ ಕಾಮಗಾರಿಗೆ ಚಾಲನೆ ನೀಡಲಾಯಿತು. ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸುರಕ್ಷತೆ ಮತ್ತು ಭದ್ರತಾ ನಿಯಂತ್ರಕರ ಸುರಕ್ಷತಾಶಿಫಾರಸುಗಳಿಗೆ ಅನುಗುಣವಾಗಿ ವಿಮಾನ ನಿಲ್ದಾಣವು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ವ್ಯವಸ್ಥೆಯು 2೦ ತಿಂಗಳಅವಧಿಯಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ....

ದ.ಕನ್ನಡ : ಶೇ 77. 56 ಮತದಾನ

0
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಟ್ಟು ಶೇ.77. 56 ಮತದಾನವಾಗಿದೆ. ಬೆಳ್ತ೦ಗಡಿ ತಾಲೂಕಿನ ದುಗ೯ಮ ಪ್ರದೇಶದ ಬ೦ಜಾರುಮಲೆ ಮತಗಟ್ಟೆಯಲ್ಲಿ ಶೇ. 100 ಮತದಾನವಾಗುವ ಮೂಲಕ ಹೊಸ ಇತಿಹಾಸ ದಾಖಲಾಗಿದೆ. ಒಟ್ಟು 111 ಮತದಾರರಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದಾರೆ. ಮತದಾನದಲ್ಲಿ ಕಳೆದ ಚುನಾವಣೆಯ೦ತೆ ಈ ಬಾರಿಯೂ ಸುಳ್ಯ ಪ್ರಥಮ ಸ್ಥಾನದಲ್ಲಿದ್ದು...