ಜಿಲ್ಲಾ ಚುನಾವಣಾಧಿಕಾರಿಗಳಿಂದ ಪರಿಶೀಲನೆ
ಮಂಗಳೂರು: ಚುನಾವಣಾ ಪ್ರಕ್ರಿಯೆಯಲ್ಲಿ ಮನೆಮನೆಗೆ ಹಂಚುವ ವೋಟರ್ ಸ್ಲೀಪ್‍ಗಳ ವಿತರಣೆಗೆ ಸಂಬಂಧಿಸಿದಂತೆ 202 ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ 203 ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ವೋಟರ್ ಸ್ಲಿಪ್ ವಿತರಣೆಗೆ ಸಂಬಂಧಿಸಿದಂತೆಬುಧವಾರ ನಗರದ ಸಂತ ಅಲೋಶಿಯಸ್ ಕಾಲೇಜು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಡೆದ ಸಭೆಗೆ ಜಿಲ್ಲಾ ಚುನಾವಣಾಧಿಕಾರಿಗಳೂ...
ಪುತ್ತೂರು ಜಾತ್ರೆ :ರಸ್ತೆ ಸಂಚಾರದಲ್ಲಿ ಬದಲಾವಣೆ
ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಏ.16ರಂದು ಸಂಜೆ 4 ಗಂಟೆಯಿಂದ ಏ.18ರಂದು ಪೂರ್ವಾಹ್ನ 6 ಗಂಟೆಯವರೆಗೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
ಸಾರಿಗೆ ಬಸ್ ಸಂಚರಿಸುವ ಮಾರ್ಗಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‍ಗಳು ಎಂ.ಟಿ ರಸ್ತೆಯ ಮೂಲಕ ತೆರಳಿ, ಮುಂದೆ ಎಡಕ್ಕೆ ತಿರುಗಿ, ಪರ್ಲಡ್ಕ...
1,42,442 ಲೀಟರ್ ಮದ್ಯ ವಶ
ಮಂಗಳೂರು" ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.17ರವರೆಗೆ ಜಿಲ್ಲೆಯಲ್ಲಿ 5,65,56,146 ರೂಪಾಯಿ ಮೌಲ್ಯದ 1,42,442 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 971 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ...
ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ
ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ ಚಟುವಟಿಕೆ ಅಹಿತಕರ ಘಟನೆಗಳು ನಡೆಯದಂತೆ, ಮೌಲ್ಯಮಾಪನ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
...
85 ವರ್ಷ ಮೇಲ್ಪಟ್ಟ, ವಿಕಲಚೇತನ ಮತದಾರರ ಮತದಾನ: ಜಿಲ್ಲೆಯಲ್ಲಿ ಈವರೆಗೆ 6,658 ಮಂದಿಯಿಂದ ಹಕ್ಕು ಚಲಾವಣೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ಶೇ. 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯ ಹೊಂದಿರುವ ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಒಟ್ಟು 8,010 ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿರುತ್ತಾರೆ. ಈ ಪೈಕಿ 5,011 ಹಿರಿಯ ನಾಗರಿಕರು ಹಾಗೂ...
ಏ. 18ರಿಂದ 20ರ ವರೆಗೆ ಸಿಇಟಿ:ಪರೀಕ್ಷೆ: ಜಿಲ್ಲೆಯಲ್ಲಿ 23,823 ವಿದ್ಯಾರ್ಥಿಗಳು
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಏಪ್ರಿಲ್ 18ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದ್ದು, ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಲ್ಲಾಳ, ಮುಲ್ಕಿ ಹಾಗೂ ಬಂಟ್ವಾಳ ಸೇರಿದಂತೆ ಒಟ್ಟು ಏಳು ತಾಲೂಕುಗಳಲ್ಲಿ 23,823 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಮಂಗಳೂರು ತಾಲೂಕಿನಲ್ಲಿ ಒಟ್ಟು 23 ಪರೀಕ್ಷಾ ಕೇಂದ್ರಗಳಿದ್ದು 10,909 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 2 ಕೇಂದ್ರಗಳಲ್ಲಿ 840 ವಿದ್ಯಾರ್ಥಿಗಳು,...
ಮ೦ಗಳೂರಿನಲ್ಲಿ ಪ್ರಧಾನಿ ನರೆಂದ್ರ ಮೋದಿ ಅವರಿ೦ದ ಭಜ೯ರಿ ರೋಡ್ ಶೋ;ಜನಸಾಗರ
ಮ೦ಗಳೂರು: ಮ೦ಗಳೂರಿನಲ್ಲಿ ಪ್ರಧಾನಿ ನರೆಂದ್ರ ಮೋದಿ ಅವರು ರವಿವಾರ ಜನಸಾಗರದ ನಡುವೆ ಅಬ್ಬರದ ರೋಡ್ ಶೋ ನಡೆಸಿದರು. ಕೇಸರಿ ಅಲೆಗಳು, ಕಾರ್ಯಕರ್ತರ ಮೋದಿ ಮೋದಿ ಘೋಷಣೆಗಳ ನಡುವೆ ಮ೦ಗಳೂರಿನ ಹೃದಯ ಭಾಗದ ಲೇಡಿಹಿಲ್ ನ ನಾರಾಯಣ ಗುರು ವೃತ್ತದಿ೦ದ ನವಭಾರತ ಪ೦ಜೆ ಮ೦ಗೇಶ್ ರಾವ್ ವೃತ್ತದವರೆಗೆ ಸುಮಾರು ೨ ಕಿ.ಮೀ. ದೂರದವರೆಗೆ ನರೆಂದ್ರ ಮೋದಿ...
5.64 ಕೋಟಿ ರೂ. ಮೌಲ್ಯದ ಮದ್ಯ ವಶ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪಿಲ್ 5ರವರೆಗೆ ಜಿಲ್ಲೆಯಲ್ಲಿ 5,64,80,734 ರೂಪಾಯಿ ಮೌಲ್ಯದ 1,42,160 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 816 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ...
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಮಂಗಳೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಾನುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಅಂಬೇಡ್ಕರ್ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗವಾಲ್, ಜಿಲ್ಲಾ...
ಮನೆಮನೆ ಭೇಟಿ ಮೂಲಕ ಹಿರಿಯ ನಾಗರಿಕರು ಮತ್ತು ದಿವ್ಯಾಂಗ ಮತದಾರರಿಗೆ ಮತದಾನ ಸೌಲಭ್ಯ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಎಂ.ಪಿ ತಿಳಿಸಿದರು.
ಬಾನುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ...




