ಎಸ್ ಎಸ್ ಎಲ್ ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಭೇಟಿ ನೀಡಿ ಪರಿಶೀಲಿಸಿದರು.ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು 432 ವಿದ್ಯಾರ್ಥಿಗಳು 19 ಕೊಠಡಿಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಹಲವು ಕೊಠಡಿಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಯವರು, ನಂತರ...
ಲೋಕಸಭಾ ಚುನಾವಣೆ:ಗುರುವಾರದಿ೦ದ ನಾಮಪತ್ರ ಸಲ್ಲಿಕೆ ಆರ೦ಭ
ಮ೦ಗಳೂರು:ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. .ಎ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎ೦ದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಪಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಚುನಾವಣಾ ಮತದಾನ...
ಮೌನ ದೊಳಗಿನ ಮಾತು ‘ ಕವನ ಸಂಕಲನದ ಬಿಡುಗಡೆ
ಮ೦ಗಳೂರು: ಅಮೃತ ಪ್ರಕಾಶನ ಪತ್ರಿಕೆವತಿಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ಮೌನದೊಳಗಿನ ಮಾತು ' ಕವನ ಸಂಕಲನವನ್ನು ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಗಣ್ಯರಾದ ಯುಗ ಪುರುಷ ಪತ್ರಿಕೆ ಸಂಪಾದಕ...
ಹುಚ್ಚು ಮನಸ್ಸಿನ ಸಾಹಸ ಯಶಸ್ಸಿಗೆ ಕಾರಣ :ಡಾ.ಎಂ.ಮೋಹನ ಆಳ್ವ
ಮಂಗಳೂರು : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗ ಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್‌ನ...
ಮದ್ಯ ನಿಷೇಧ
ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ...
ಎಸ್‍ಎಸ್‍ಎಲ್‍ಸಿ ಪರೀಕ್ಷೆ: 28,537 ವಿದ್ಯಾರ್ಥಿಗಳು ಹಾಜರು
ಮಂಗಳೂರು: ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.25ರಂದು ಸೋಮವಾರ ಪ್ರಥಮ ಭಾಷೆಯ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 28,866 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 28,537 ವಿದ್ಯಾಥಿಗಳು ಹಾಜರಾಗಿದ್ದು, 329 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್: : ರವಿಶಂಕರ ಮಿಜಾರು
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ.
ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ...
ಡಾ.ಎಂ.ಮೋಹನ ಆಳ್ವ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.26 ರಂದು ಬೆಳಗ್ಗೆ 11.00ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಹಿರಿಯ ಪತ್ರಕರ್ತ ಯು.ವಿ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ...
ನಂತೂರು: ಡಿವೈಡರ್ ಗೆ ಢಿಕ್ಕಿಯಾದ ಕಾರು : ಯುವಕ ಸಾವು
ಮಂಗಳೂರು: ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ತೊಕ್ಕೊಟ್ಟಿನ ಶಮಿತ್ ಶೆಟ್ಟಿ ಯಾನೆ ಬಂಟಿ (29) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ ರ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಶಮಿತ್ ಶೆಟ್ಟಿಯವರು ಸ್ನೇಹಿತನ ಮನೆಯಲ್ಲಿ ದೈವದ ಕೋಲ ಕಾಯ೯ಕ್ರಮದಲ್ಲಿ ಭಾಗವಹಿಸಿ ತೊಕ್ಕೊಟ್ಟಿನಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ...
ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಕರೆ
ಮಂಗಳೂರು: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶÀ ಕಲ್ಪಿಸಿಕೊಟ್ಟಿದೆ.ಕೇಂದ್ರ ಚುನಾವಣಾ...






