ಮಾ. 9 : ಕಂದಾಯ ಸಚಿವರ, ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಮಂಗಳೂರು: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಾರ್ಚ್ 9 ರಂದು ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಧ್ಯಾಹ್ನ 2.10ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30 ಗಂಟೆಗೆ...
ಮಂಗಳೂರು ತಾಲೂಕು ಗ್ಯಾರಂಟಿ ಫಲಾನುಭವಿಗಳ ಸಮಾವೇಶ
ಮಂಗಳೂರು: ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.7ರ ಗುರುವಾರ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನುವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಅವರು ಉದ್ಘಾಟಿಸಿದರು.ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್,ಮೂಡದ ನೂತನ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಮೆಸ್ಕಾಂ ಎಂಡಿ ಪದ್ಮಾವತಿ, ಮಂಗಳೂರು ಮಹಾನಗರ ಪಾಲಿಕೆ...
ಕದ್ರಿ: ಮಳೆನೀರು ಚರಂಡಿ ಹಾಗೂ ಫುಟ್ಬಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಐ. ಆರ್. ನಿಧಿಯಿಂದ 2 ಕೋಟಿ ವೆಚ್ಚದ ಕದ್ರಿ ಗ್ರೌಂಡಿನಿಂದ ಕದ್ರಿ ಕಂಬಳ ರಸ್ತೆವರೆಗೆ ಮಳೆನೀರು ಚರಂಡಿ ಹಾಗೂ ಫುಟ್ಬಾತ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು
ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಇಲ್ಲಿನ ಸ್ಥಳೀಯರಿಗೆ ಅತೀವ ತೊಂದರೆಯಾಗುತ್ತಿದ್ದ ಬಗ್ಗೆ ಮ.ನ.ಪಾ...
ರೋಹನ್ ಸಿಟಿ ಸ್ಮರಣೀಯ ಸಾಧನೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು
ಮ೦ಗಳೂರು: ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ ಮಾ.6 ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು, ಸುರಕ್ಷತೆ ಮತ್ತು ಯೋಗಕ್ಷೇಮದ ಸಂಸ್ಕೃತಿಯನ್ನು ಬೆಳೆಸುವಲ್ಲಿ ರೋಹನ್ ಕಾರ್ಪೊರೇಶನ್ ಬದ್ಧವಾಗಿದೆ.
ಈ ಐತಿಹಾಸಿಕ ಕ್ಷಣವನ್ನು ಕಾರ್ಮಿಕರು, ಉದ್ಯೋಗಿಗಳು...
ಬಜರಂಗದಳದ ಮುರಳಿಕೃಷ್ಣ ಹಸಂತಡ್ಕ ಬಂಧನ; ಜಿಲ್ಲಾ ಬಿಜೆಪಿ ಖಂಡನೆ
ಮ೦ಗಳೂರು: ಕರ್ನಾಟಕದಲ್ಲಿ ನಡೆದ ಬಾಂಬ್ ದಾಳಿ ,ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿ೦ದ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕರವರನ್ನು ಕುಣಿಗಲ್ ನಲ್ಲಿ ಪೊಲೀಸರು ಬಂಧಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆದಿದ್ದು ಸರಕಾರದ ಈ ನಡೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ...
ಜನಜಾಗೃತಿ ರಥಕ್ಕೆ ಚಾಲನೆ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಬಾಲಕಾರ್ಮಿಕ ಯೋಜನಾ ಸಂಘದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಮಾನವ ಕಳ್ಳ ಸಾಗಣಿಕೆ ತಡೆ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಾ.6 ರಂದು...
ಮಾ. 7 ರಂದು ಗ್ಯಾರಂಟಿ ಸಮಾವೇಶ
ಮಂಗಳೂರು: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ಜಿಲ್ಲೆಯ ಪ್ರತಿ ಅರ್ಹ ಪಲಾನುಭವಿಗೆ ಈ ಯೋಜನೆಗಳ ಸೌಲಭ್ಯವನ್ನು ಪರಿಣಾಮಕಾರಿಯಾಗಿ ತಲುಪಿಸಲು ಪ್ರತಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿದೆ.
ಮಂಗಳೂರು ತಾಲೂಕಿನಲ್ಲಿ ಮಾ. 7 ರಂದು ಗುರುವಾರ ಸಂಜೆ 4.30ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು...
ರಾಷ್ಟ್ರೀಯ ಲೋಕ ಅದಾಲತ್ ಮುಂದೂಡಿಕೆ
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇದೇ ಮಾರ್ಚ್ 9 ರಂದು ಶನಿವಾರ ನಡೆಯಬೇಕಿದ್ದ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾರ್ಚ್ 16 ರ ಶನಿವಾರಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳಿಂದ ಚೆಕ್ ಪೋಸ್ಟ್ ಪರಿಶೀಲನೆ
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಂಗಳೂರು ನಗರ ಪೆÇಲೀಸ್ ಆಯುಕ್ತ ಅನುಪಮ ಅಗರ್ವಾಲ್ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾ.6ರ೦ದು ತಲಪಾಡಿ, ದೇವಿನಗರ, ಮುಡಿಪುಗಳಲ್ಲಿ ರಚಿಸಲಾದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯವನ್ನು ಪರಿಶೀಲಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ
ಮಂಗಳೂರು,: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 2024ನೇ ಸಾಲಿನ ಬೇಸಿಗೆಯಲ್ಲಿ ಸಂಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಅನ್ವಯವಾಗುವಂತೆ ಸಹಾಯವಾಣಿ ತೆರೆಯಲಾಗಿದೆ.
ಸಾರ್ವಜನಿಕರು ದೂರವಾಣಿ ಸಂಖ್ಯೆ: 0824-2951583 ಅಥವಾ ಮೊಬೈಲ್ ಸಂಖ್ಯೆ: 7204653395 ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





