ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ
ಸುರತ್ಕಲ್: ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು.ಸುರತ್ಕಲ್ ಗೋವಿಂದದಾಸ ಕಾಲೇಜ್ ನಲ್ಲಿ ಯಕ್ಷ ದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು...
ಹಿಂದೂ ಟೂರಿಸಂ ಅಸೋಸಿಯೇಶನ್ : ಆಮಂತ್ರಣ ಪತ್ರಿಕೆ ಬಿಡುಗಡೆ
ಮ೦ಗಳೂರು: ಹಿಂದೂ ಟೂರಿಸಂ ಅಸೋಸಿಯೇಶನ್ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶಾಸಕ ಕಾಮತ್:-
ದ.ಕ. ಜಿಲ್ಲಾ ಹಿಂದೂ ಟೂರಿಸಂ ಅಸೋಸಿಯೇಶನ್ (ರಿ.) ಇದರ ಸರ್ವ ಸದಸ್ಯರ ಸಮಾವೇಶ ಸಹಿತ ಸಭಾ ಕಾರ್ಯಕ್ರಮವು ಫೆ. 20ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು,...
ಅಡ್ಯಾರ್ ಗಾರ್ಡನ್ ನಲ್ಲಿ ರೋಟರಿ ಜಿಲ್ಲಾ ಸಮ್ಮೇಳನ ” ನವ ವೈಭವ ” .
ಮ೦ಗಳೂರು: ಮಡಿಕೇರಿ, ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ, 3181ರ ಜಿಲ್ಲಾ ಸಮಾವೇಶ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ರವರ ನೇತೃತ್ವದಲ್ಲಿ ಜನವರಿ 24, 25 ಮತ್ತು 26ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ ಎ೦ದು ಕಾನ್ಫರೆನ್ಸ್ ಛೇರ್ಮನ್ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಪತ್ರಿಕಾ...
ಸೋಲು, ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು: ಕೃಷ್ಣ ಜೆ. ಪಾಲೆಮಾರ್
ಮಂಗಳೂರು : ನನ್ನ ಉದ್ದಿಮೆಯಲ್ಲಿ ಮೂರು ಬಾರಿ ಸಂಪೂರ್ಣವಾಗಿ ಸೋತಿದ್ದೇನೆ. ಆದರೆ ಊರು ಬಿಟ್ಟಿಲ್ಲ, ಆದರೆ ಮುಂದೆ ಇದರಿಂದ ಹೊರಬರಲಿದ್ದೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸವಾಲನ್ನು ಸ್ವೀಕರಿಸಿ ಮುಂದೆ ಬಂದಿದ್ದೇನೆ. ಹಾಗಾಗಿ ಜೀವನದಲ್ಲಿ ಎದುರಾಗುವ ಸೋಲು ಹಾಗೂ ಕಷ್ಟಗಳನ್ನು ಸ್ವೀಕರಿಸುವ ಎದೆಗಾರಿಕೆ ನಮ್ಮಲ್ಲಿ ಇದ್ದಾಗ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ,ಲ್ಯಾಂಡ್‌ಲಿಂಕ್ಸ್ ಸಂಸ್ಥೆಯ ಸಿಇಒ...
ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ ನಡೆಯುವ ಜಾನುವಾರುಗಳಲ್ಲಿ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.
ತಾಲ್ಲೂಕಿನ ಆಸಕ್ತ ರೈತ ಭಾಂದವರು ಅತಿ ಹೆಚ್ಚು ಹಾಲು ಹಿಂಡುವ (ಪ್ರತಿ ದಿನಕ್ಕೆ 15 ಲೀ ಹಾಲು...
ಮಾತಾ ಅಮೃತಾನಂದಮಯಿ ಮಠ: ಮಕ್ಕಳಿಗಾಗಿ ಬೃಹತ್ ಉಚಿತ ಆರೋಗ್ಯ ಮೇಳ
ಮ೦ಗಳೂರು: ಅಮೃತಾ ಆಸ್ಪತ್ರೆ ,ಕೊಚ್ಚಿ ಇವರಿಂದ ಮಂಗಳೂರಿನಲ್ಲಿ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಕರಾವಳಿ ಕರ್ನಾಟಕದ ಅಮ್ಮನವರ ಭಕ್ತರು ಮತ್ತು ಸೇವಾಸಮಿತಿಗಳ ಸಹಯೋಗದೊಂದಿಗೆ ಜರುಗಿದ ಈ ಬೃಹತ್ ಆರೋಗ್ಯ ಮೇಳದಲ್ಲಿ ಕರ್ನಾಟಕದಾದ್ಯಂತ ಹಾಗೂ ಹೊರರಾಜ್ಯಗಳ ಜನರು ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬಂದು...
ಐವರು ಹಿರಿಯ ಪತ್ರಕರ್ತರಿಗೆ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನ
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ ( ಸುದ್ದಿ ಬಿಡುಗಡೆ) , ರಘರಾಮ ನಾಯಕ್ (ಹೊಸದಿಗಂತ) ಮತ್ತು ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ( ಉದಯವಾಣಿ...
ದಿ.ಲೋಕಯ್ಯ ಶೆಟ್ಟಿಯವರ ದೇಶಪ್ರೇಮ ಸದಾ ಪ್ರೇರಣೆ:ಸತೀಶ್ ಪೈ
ಮಂಗಳೂರು : ಹದಿ ಹರೆಯದಲ್ಲೇ ಕೆಚ್ಚೆದೆಯಿಂದ ಸ್ವಾತಂತ್ರೃ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ ದಿ.ಲೋಕಯ್ಯ ಶೆಟ್ಟಿ ಅವರ ದೇಶಪ್ರೇಮ ಸಮಾಜಕ್ಕೆ ಪ್ರೇರಣೆಯಾಗಿದೆ. ಶಾಸಕರಾಗಿ, ಕಾರ್ಮಿಕ ನಾಯಕರಾಗಿ, ಕ್ರೀಡಾಸಂಘಟಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಲೋಕಯ್ಯ ಶೆಟ್ಟಿ ಅವರ ಮೇರು ವ್ಯಕ್ತಿತ್ವ ಸದಾ ಸ್ಮರಣೀಯ ಎಂದು ಭಾರತ್ ಬೀಡಿ ವರ್ಕ್ಸ್ ಸಮೂಹ ಸಂಸ್ಥೆಯ...
ಮಂಗಳೂರು ಪ್ರೆಸ್ ಕ್ಲಬ್ ನಿ೦ದ ಉಚಿತ ಕೃತಕ ಕಾಲು ವಿತರಣೆ
ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ .ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್‌ನಲ್ಲಿ ಕೊಣಾಜೆಯ ಅಬ್ದುಲ್ ರವೂಫ್ ಅವರಿಗೆ ಉಚಿತ ಕೃತಕ ಕಾಲು...
ಅಕ್ರಮ ಮದ್ಯ ಬಳಕೆ ತಡೆಗಟ್ಟಲು ಅಬಕಾರಿ ಇಲಾಖೆ ಕಾರ್ಯಾಚರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋವಾಮದ್ಯ/ಹೊರರಾಜ್ಯದ ಮದ್ಯ/ಡಿಫೆನ್ಸ್ ಮದ್ಯ/ತೆರಿಗೆ ರಹಿತ ವಿದೇಶೀ ಮದ್ಯದ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುತ್ತಿದ್ದು, ಜುಲೈ-2024 ರಿಂದ ಇಲ್ಲಿಯವರೆಗೆ ಒಟ್ಟು 31...