ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್: : ರವಿಶಂಕರ ಮಿಜಾರು
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ.
ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ...
ಡಾ.ಎಂ.ಮೋಹನ ಆಳ್ವ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾ.26 ರಂದು ಬೆಳಗ್ಗೆ 11.00ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ಹಿರಿಯ ಪತ್ರಕರ್ತ ಯು.ವಿ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ...
ನಂತೂರು: ಡಿವೈಡರ್ ಗೆ ಢಿಕ್ಕಿಯಾದ ಕಾರು : ಯುವಕ ಸಾವು
ಮಂಗಳೂರು: ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ತೊಕ್ಕೊಟ್ಟಿನ ಶಮಿತ್ ಶೆಟ್ಟಿ ಯಾನೆ ಬಂಟಿ (29) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ ರ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಶಮಿತ್ ಶೆಟ್ಟಿಯವರು ಸ್ನೇಹಿತನ ಮನೆಯಲ್ಲಿ ದೈವದ ಕೋಲ ಕಾಯ೯ಕ್ರಮದಲ್ಲಿ ಭಾಗವಹಿಸಿ ತೊಕ್ಕೊಟ್ಟಿನಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ...
ಹಿರಿಯ, ವಿಕಲಚೇತನ ಮತದಾರರು ಹಕ್ಕು ಚಲಾಯಿಸಲು ಮತಗಟ್ಟೆಗಳಲ್ಲಿಯೇ ಅಗತ್ಯ ಸೌಲಭ್ಯ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಕರೆ
ಮಂಗಳೂರು: ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಗಳಲ್ಲಿ ಅರ್ಹ ಮತದಾರರೆಲ್ಲರೂ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತಿಬಾರಿ ವಿವಿಧ ರೀತಿಯ ಸೌಕರ್ಯ ಕಲ್ಪಿಸಿಕೊಡುವ ಚುನಾವಣಾ ಆಯೋಗವು ಈ ಬಾರಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ವಿಕಲಚೇತನರಿಗೆ ಅಂಚೆ ಮತದ ಮೂಲಕ ಮನೆಯಿಂದಲೇ ಮತ ಚಲಾಯಿಸುವ ಅವಕಾಶÀ ಕಲ್ಪಿಸಿಕೊಟ್ಟಿದೆ.ಕೇಂದ್ರ ಚುನಾವಣಾ...
642 ಲೀಟರ್ ಮದ್ಯ ವಶಕ್ಕೆ
ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ 3,75,022 ರೂಪಾಯಿ ಮೌಲ್ಯದ 642 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 5,43,500 ರೂ. ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ದೂರವಾಣಿ ಮೂಲಕ (1950) 97 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ.ಸಿ-ವಿಸಿಲ್ ಆಪ್...
ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ
ಮಂಗಳೂರು: ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು.ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಮಾ.22ರ೦ದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವದ...
ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ
ಮಂಗಳೂರು:ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು...
ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿ: ಅಂತರರಾಷ್ಟ್ರೀಯ ಸಮ್ಮೇಳನ
ಬೆಂಗಳೂರು: ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತಾದ 5 ನೇ ಅಂತರರಾಷ್ಟ್ರೀಯ ಸಮ್ಮೇಳನವು ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಬ್ಯುಸಿನೆಸ್ ವತಿಯಿ೦ದ ಆಯೋಜಿಸಲಾಗಿತ್ತು. ಈ ಸಮ್ಮೇಳನವನ್ನು ಮೈಲ್ಸ್ ಎಜುಕೇಶನ್, ಟೈಟಾನ್, ಎಲ್.ಟಿ.ಐ.,ಮೈಂಡ್ ಟ್ರೀ ಮತ್ತು ವರ್ಟೆಕ್ಸ್ ವೆಂಚರ್ಸ್ ಪ್ರಾಯೋಜಿಸಿದೆ. ವಿವಿಧ ಸಂಸ್ಥೆಗಳ ಒಟ್ಟು 60 ಸಂಶೋಧನಾ ಪ್ರಬಂಧ ನಿರೂಪಕರು, ಶಿಕ್ಷಣ...
ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ
ಮ೦ಗಳೂರು: ಶೈಕ್ಷಣಿಕ ವರ್ಷದ ಪರೀಕ್ಷೆಗಳು ಮುಕ್ತಾಯಗೊಂಡು ಬೇಸಿಗೆ ರಜಾ ದಿನಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಸಮತೋಲನ ಹಾಗೂ ಸಮಯದ ಸದುಪಯೋಗದೊಂದಿಗೆ ಕ್ರಿಯಾಶೀಲ ಚಟುವಟಿಕಗಳಲ್ಲಿತೊಡಗಿಸಿಕೊಳ್ಳುವ ಸಲುವಾಗಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ತನ್ನ ಕೆನರಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ 'ವಿಕಸನ ಬೇಸಿಗೆ ಶಿಬಿರ-2024 ನ್ನು ಕೆನರಾ ಸಿಬಿಎಸ್ಇ ಶಾಲೆಯಲ್ಲಿಆಯೋಜಿಸುತ್ತಿದೆ.ದಿನಾಂಕ 3-4-2024 ರಿಂದ 12-04-2024ರವರೆಗೆ ಬೆಳಿಗ್ಗೆ 9ಗಂಟೆಯಿಂದ ಸಂಜೆ...
ಬಿಜೆಪಿ ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಬಿಕರ್ನಕಟ್ಟೆಯ ಶ್ರೀ ಹರಿಹರ ಪಾಂಡುರಂಗ ಭವನದಲ್ಲಿ ನಡೆಸಲಾಯಿತು
ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಮತ್ತೊಮ್ಮೆ ಪ್ರಧಾನ ಸೇವಕರಾಗಲಿರುವ ಸಂದರ್ಭದಲ್ಲಿ...





