ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್: ವಾಹನ ಸಂಚಾರ ನಿಷೇಧ, ಮಾರ್ಪಾಡು
ಮಂಗಳೂರು : ನ.1 ರಂದು ಸಂಜೆ 4 ಗಂಟೆಗೆ 68 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023 ಮೆರವಣಿಗೆಯಲ್ಲಿ 120 ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 5000 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ಸರೆ. ವಾಕಥಾನ್ ಪುರಭವನದಿಂದ ಹೊರಟು ಹಂಪನಕಟ್ಟೆ, ಕೆ.ಎಸ್.ರಾವ್...
ಸಾಹಿತಿ, ಲೇಖಕ ಶೇಖರ್ ಅಜೆಕಾರ್ ನಿಧನ
ಕಾಕ೯ಳ: ಸಾಹಿತಿ, ಲೇಖಕ ಶೇಖರ್ ಅಜೆಕಾರ್ ಹೃದಯಘಾತದಿಂದ ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.ಶೇಖರ್ ಅಜೆಕಾರ್ ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತಿದ್ದರು.
ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ...
ಮಿಜಾರುಗುತ್ತು ಆನಂದ ಆಳ್ವ ನಿಧನ
ಮೂಡಬಿದಿರೆ: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ ಅವರು ಮ೦ಗಳವಾರ ನಿಧನರಾದರು.106 ವರ್ಷ ಪ್ರಾಯದ ಆನಂದ ಆಳ್ವ ಅವರು ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲರಾಗಿ ಗುರುತಿಸಿಕೊಂಡಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.ಪ್ರಗತಿಪರ ರೈತರೂ ಆಗಿದ್ದ...
ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ
ಮ೦ಗಳೂರು : ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ಯುವಕನೋವ೯ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ..ಚಿಕ್ಕಮಗಳೂರು ಗ್ರಾಮಾ೦ತರದ ಬೈರಪುರ ಕಾತಿ೯ಕೆರೆ ನಿವಾಸಿ ಶಂಕರಗೌಡ ಎಂಬವರ ಪುತ್ರ ಪ್ರಸನ್ನ ಕುಮಾರ್ (36) ಆತ್ಮಹತ್ಯೆ ಮಾಡಿಕೊ೦ಡಿರುವ ಯುವಕ.ಮಧ್ಯಾಹ್ನ ಒ೦ದು ಗ೦ಟೆಯ ವೇಳೆಗೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66...
ವರದಕ್ಷಿಣೆ ಕಿರುಕುಳ :ನವ ವಿವಾಹಿತೆ ಆತ್ಮಹತ್ಯೆ
ಬಂಟ್ವಾಳ: ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ೦ಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸ೦ಭವಿಸಿದೆಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಎ೦ಬಾತನನ್ನು ಪ್ರೇಮಿಸಿ ಮೂರು ತಿಂಗಳ...
ಅ.30: ಶಾಸಕ ಅಶೋಕ್‌ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ.
ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್...
ರಾಷ್ಟ್ರೀಯ ಮತದಾರರ ಪಟ್ಟಿಗಳ 2024ರ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ವೇಳಾಪಟ್ಟಿ ಪ್ರಕಟ
ಮಂಗಳೂರು,: ಭಾರತ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಕರಡು ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟಿಗಳಲ್ಲಿ, ಮತದಾರರ ನೋಂದಾಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಾಣಾಧಿಕಾರಿ ಕಚೇರಿಯಲ್ಲಿ ಅ.27ರಂದು ಪ್ರಕಟಿಸಿದೆ.ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದೆ ಇದ್ದಲ್ಲಿ ಸೇರಿಸಲು ಅಥವಾ ಮೃತದಾರರನ್ನು ಮತದಾರರ ಪಟ್ಟಿಯಿಂದ ತೆಗೆಯಲು ಅವರ ಕುಟುಂಬದವರು ನಮೂನೆ 7ರ ಮೂಲಕ...
ಚಂದ್ರಗ್ರಹಣ : ಪಿಲಿಕುಳದಲ್ಲಿ ವೀಕ್ಷಣೆಗೆ ಅವಕಾಶ
ಮಂಗಳೂರು: ಅಕ್ಟೋಬರ್ 28 ಮತ್ತು 29ರ ನಡುವಿನ ರಾತ್ರಿಯಲ್ಲಿ ಸುಮಾರು 1.05 ಗಂಟೆಯಿಂದ 2.20 ಗಂಟೆಯವರೆಗೆ ಭಾಗಶಃ/ ಪಾಶ್ರ್ವ ಚಂದ್ರಗ್ರಹಣ ಸಂಭವಿಸುವುದು. ಇದು ಮಂಗಳೂರು ಸೇರಿದಂತೆ ರಾಜ್ಯದೆಲ್ಲಡೆಯೂ ಗೋಚರಿಸಲಿದೆ.
ಚಂದ್ರಗ್ರಹಣ ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಂಜೆ 7.30ರಿಂದ ಆಕಾಶ ವೀಕ್ಷಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ದೂರದರ್ಶಕದ ಮೂಲಕ ಗುರು ಗ್ರಹ, ಶನಿ ಗ್ರಹ ಮತ್ತು...
ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿಯಾಗಬೇಕು: ಜಯಪ್ರಕಾಶ್ ರಾವ್ ಕೆ.
ಮಂಗಳೂರು: ದೇಶ ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ. ಯುವಕರು ವಿಜ್ಞಾನದ ಹಾದಿಯಲ್ಲಿ ಸಾಕಷ್ಟು ದೂರ ಪ್ರಯಾಣ ಮಾಡಬೇಕಿದೆ. ಸ್ವಾವಲಂಬನೆ ಸಾಧಿಸಲು ಯುವ ಜನಾಂಗದ ಕ್ರೋಢೀಕರಣವಾಗಬೇಕು. ಆಗ ಮಾತ್ರ ಬಲಿಷ್ಠ ರಾಷ್ಟ್ರವಾಗುವುದರಲ್ಲಿಯಾವುದೇ ಸಂದೇಹವಿಲ್ಲ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶ್ ರಾವ್ ಕೆ. ಅಭಿಪ್ರಾಯಪಟ್ಟರು.ನಗರದ...
ಪುತ್ತೂರು : ಮೇಲ್ಚಾವಣೆ ಕುಸಿದು ಸೆಂಟ್ರಿಂಗ್ ಕೆಲಸದಾಳು ಸಾವು
ಪುತ್ತೂರು : : ಮನೆಯ ಸಿಟೌಟ್ ನ ಮೇಲ್ಚಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿರುವಾಗ ಮೇಲ್ಚಾವಣೆ ಕುಸಿದು ಬಿದ್ದುಸೆಂಟ್ರಿಂಗ್ ಕೆಲಸದಾಳು ಮೃತಪಟ್ಟ ಘಟನೆ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ, ಪಾದಲಾಡಿ ಎಂಬಲ್ಲಿ ಬುಧವಾರ ಸ೦ಭವಿಸಿದೆ.ಪುತ್ತೂರು ಅರಿಯಡ್ಕ ನಿವಾಸಿ ಶೇಖರ್ ಕುಲಾಲ್ (45) ಮೃತಪಟ್ಟವರು.ಶೇಖರ್ ಕುಲಾಲ್ ಅವರು ಬುಧವಾರ ಬೆಳಿಗ್ಗೆ ಪುತ್ತೂರು ತಾಲೂಕು, ಅರಿಯಡ್ಕ ಗ್ರಾಮದ, ಪಾದಲಾಡಿ...






