ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ಚೇತನ ಕುವೆಂಪು
ಮಂಗಳೂರು: ವಿಶ್ವ ಮಾನವರಾಗಲು ವಿದ್ಯೆಯ ಕೇಂದ್ರೀಕರಣ ಮಾತ್ರವಲ್ಲ ಸಮಗ್ರವಾದ ಜ್ಞಾನವನ್ನು ಗ್ರಹಿಸುವುದು ಮುಖ್ಯ ಎಂದು ಕಾಸರಗೋಡು ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಪ್ರೋ.ಚೇತನ್ ಮುಂಡಾಜೆ ಹೇಳಿದರು.ಅವರು ಶುಕ್ರವಾರ ನಗರದ ರಥಬೀದಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಮಾನವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಕುವೆಂಪು ಅವರು ಕವಿತೆ, ವೈಚಾರಿಕ ಕಾದಂಬರಿ,...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸನಡೆಯಿತು. ವಿಮಾನ ನಿಲ್ದಾಣದ ಭದ್ರತಾ ಪ್ರತಿಕ್ರಿಯೆ ವ್ಯವಸ್ಥೆಯನ್ನು ಪರೀಕ್ಷಿಸಲು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ವಿವಿಧ ಮಧ್ಯಸ್ಥಗಾರರುಮತ್ತು ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಪರೀಕ್ಷಿಸಲು ವಿಮಾನ ನಿಲ್ದಾಣದ ಸಿಬ್ಬಂದಿ ಪಾರ್ಕಿಂಗ್ ಸ್ಥಳದಲ್ಲಿ ಈ ಅಭ್ಯಾಸವನ್ನು ನಡೆಸಲಾಯಿತು.
ಡ್ರಿಲ್ ಮಧ್ಯಾಹ್ನ ೧ ಗಂಟೆಗೆ ಪ್ರಾರಂಭವಾಯಿತು ಮತ್ತು ಮಧ್ಯಾಹ್ನ ೨...
ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗೆ ಭೂಮಿ ಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಜೋಡುಮಠ ರಸ್ತೆಯಲ್ಲಿರುವ ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗಾಗಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಮನವಿ ಮೇರೆಗೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ವಿಶೇಷ ಅನುದಾನ ಒದಗಿಸಿದ್ದು ಇದರ ಭೂಮಿ ಪೂಜೆಯು ದೇವಸ್ಥಾನದ ಆವರಣದಲ್ಲಿ...
ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ವಶಕ್ಕೆ
ಮಂಗಳೂರು: ನಿಯಮಾನುಸಾರ ನೋಂದಣಿ ಮಾಡದೆ ಖಾಸಗಿ ಆಸ್ಪತ್ರೆಯಲ್ಲಿ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಇಲಾಖೆ ವಶಪಡಿಸಿಕೊಂಡಿದೆ.ಬೆಳ್ತಂಗಡಿ ಖಾಸಗಿ ಆಸ್ಪತ್ರೆಯೊ೦ದಕ್ಕೆ ಗುರುವಾರ ಭೇಟಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೇತೃತ್ವದಲ್ಲಿ ಅಧಿಕಾರಿ ತಂಡವು ತಪಾಸನೆಯನ್ನು ನಡೆಸಿದ ವೇಳೆ ನೋಂದಣಿ ಮಾಡದೆ ಬಳಕೆ ಮಾಡುತ್ತಿದ್ದ ಸ್ಕ್ಯಾನಿಂಗ್ ಯಂತ್ರ ಕಂಡು ಬಂದಿದೆ....
ಕೆಎಸ್ ಆರ್ ಟಿಸಿ ಪರಿಹಾರ ಮೊತ್ತಹೆಚ್ಚಳ
ಬೆ೦ಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
49ಕ್ಕಿಂತ ಕಡಿಮೆ ಮುಖಬೆಲೆಯ ಟಿಕೆಟ್‌ಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. 50 ರೂ.ನಿ೦ದ 100 ರೂ. ವರೆಗಿನ...
ಕಣ್ಣೂರು: 750 ಮೆ.ಟನ್ಅನಧಿಕೃತ ಮರಳು ದಾಸ್ತಾನು ವಶ
ಮಂಗಳೂರು: ಮಂಗಳೂರು ತಾಲ್ಲೂಕು ಕಣ್ಣೂರು ಗ್ರಾಮದ ಬಡ್ಲ ಗುತ್ತು ಎಂಬಲ್ಲಿ ಅನಧಿಕೃತವಾಗಿ ಸಾಮಾನ್ಯ ಮರಳನ್ನು ದಾಸ್ತಾನು ಮಾಡಿರುತ್ತಾರೆ ಎಂಬ ಮಾಹಿತಿಯಂತೆ ಡಿ.27ರಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಾದ ಇ.ಸಿ ದ್ವಿತೀಯ, ಹಿರಿಯ ಭೂವಿಜ್ಞಾನಿ ಕೆ.ಎಂ ನಾಗಭೂಷಣ್ ಹಾಗೂ ಭೂವಿಜ್ಞಾನಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು...
ಬಂದೂಕು ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು:ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.ಈ ತರಬೇತಿ ಪಡೆದುಕೊಳ್ಳಲು ಆಸಕ್ತಿಯುಳ್ಳವರು ಉಪ ಪೊಲೀಸ್ ಆಯುಕ್ತರ ಕಚೇರಿ, ನಗರ ಸಶಸ್ತ್ರ ಮೀಸಲು ಪಡೆ ಮಂಗಳೂರು ನಗರ ಕಚೇರಿಯಲ್ಲಿ ನಿಗದಿತ ಅರ್ಜಿಯನ್ನು ಪಡೆದು 3 ಪಾಸ್ ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಜನವರಿ 10ರೊಳಗೆ...
ಪಚ್ಚನಾಡಿ ತ್ಯಾಜ್ಯ ಘಟಕಕ್ಕೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು: ಮಹಾನಗರಪಾಲಿಕೆಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಉಂಟಾದ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.ತ್ಯಾಜ್ಯ ಘಟಕದ ವಿವಿಧ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ ಅವರು, ತ್ಯಾಜ್ಯ ನಿರ್ವಹಣೆಯ ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಬೆಂಕಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.ಮಂಗಳೂರು ಮಹಾನಗರಪಾಲಿಕೆ...
ಮಹಾನಗರಪಾಲಿಕೆ ಫೋನ್ ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸಾರ್ವಜನಿಕರೊಂದಿಗೆ ಡಿ.28 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ದೂರವಾಣಿ ಸಂಖ್ಯೆ: 0824-2220301 ಅಥವಾ 0824-2220318 ಕರೆ ಮಾಡಿ ತಿಳಿಸಬಹುದು ಎಂದು ಮಹಾನಗರಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ- ಶಿಕ್ಷಕರಿಗೆ ವಿಶೇಷ ಸನ್ಮಾನ ಹಾಗೂ ಕೌನ್ಸಲಿಂಗ್ : ಶಾಸಕ ಕಾಮತ್
ಮಂಗಳೂರು: ಮಂಗಳೂರಿನ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನದ ಮೂಲಕ ಪ್ರೋತ್ಸಾಹ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಆರಂಭಿಸುವ ನಿಟ್ಟಿನಲ್ಲಿ ಮೊದಲಿಗೆ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಅವರ ಮುತುವರ್ಜಿಯಲ್ಲಿ ಏರ್ಪಡಿಸಲಾಗಿದ್ದು ಇದೇ ಬರುವ 30ನೇ...







