23.3 C
Karnataka
Thursday, June 18, 2026

ಸುದ್ದಿ

ಮಂಗಳೂರು ವಿ.ವಿ 44 ನೇ ವಾರ್ಷಿಕ ಘಟಿಕೋತ್ಸವ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44 ನೇ ವಾರ್ಷಿಕ ಘಟಿಕೋತ್ಸವವನ್ನು 2026ನೇ ಮಾರ್ಚ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದು, ನಿಖರವಾದ ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತದೆ.ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 31 ರೊಳಗೆ ವಿವಿಧ ಪದವಿಗಳನ್ನು...

ಬಲ್ಮಠ – ಫಳ್ನೀರ್ ರಸ್ತೆ: ಪಾರ್ಕಿಂಗ್ ನಿಷೇಧ

0
ಮಂಗಳೂರು: ನಗರದ ಯುನಿಟಿ ಆಸ್ಪತ್ರೆಯಿಂದ ಬಲ್ಮಠ ರಸ್ತೆಗೆ ಸಂಪರ್ಕಿಸುವ ವಾಸ್ ಲೇನ್ ರಸ್ತೆಯಲ್ಲಿ ವಾಸ್‍ಲೇನ್ ಒಂದನೇ ಅಡ್ಡ ರಸ್ತೆಯಿಂದ ಯುನಿಟಿ ಆಸ್ಪತ್ರೆಯವರೆಗೆ (ರಸ್ತೆಯ ಬಲಬದಿ-ಪಶ್ಚಿಮ ದಿಕ್ಕು) ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.ಯುನಿಟಿ ಆಸ್ಪತ್ರೆಯಿಂದ ಬಲ್ಮಠ ರಸ್ತೆಗೆ ಸಂಪರ್ಕಿಸುವ ವಾಸ್ ಲೇನ್ ರಸ್ತೆಯನ್ನು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮಂಗಳೂರು ಮಹಾನಗರ ಪಾಲಿಕೆಯಿಂದ ಅಗಲೀಕರಣಗೊಳಿಸಿ ರಸ್ತೆ ಬದಿಗಳನ್ನು...

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ಡಿಸೆಂಬರ್-2025 ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ.ತರಬೇತಿ ವಿವರ:- ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಡಿಸೆಂಬರ್ 19 ರಿಂದ 20 ರವರೆಗೆ ಮತ್ತು ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಡಿಸೆಂಬರ್ 29...

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

0
ಮಂಗಳೂರು: ಬಿ.ಪಿ.ಎಲ್ ಪಡಿತರ ಚೀಟಿಯನ್ನು ಎ.ಪಿ.ಎಲ್ ಆಗಿ ಬದಲಾಯಿಸುವ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲನೆ ಮಾಡಬೇಕೆಂದು ಸರ್ಕಾರದ ಆದೇಶವಿದ್ದು, ಇದನ್ನು ಆಹಾರ ಇಲಾಖೆಯ ಅಧಿಕಾರಿಗಳು ಸರಿಯಾಗಿ ಪರಿಶೀಲಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್

0
ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿ...

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ: ಸಿಆರ್‌ ಸಿ ಕೇಂದ್ರ ಉದ್ಘಾಟನೆ

0
ಬೆ೦ಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯವು ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ (CRC)ವನ್ನು ಉದ್ಘಾಟಿಸಿದೆ. ಕ್ರಿಶ್ಚಿಯನ್ ಮಿಷನರಿಗಳು, ಪಂಡಿತರು ಮತ್ತು ಸಂಸ್ಥೆಗಳು ಕರ್ನಾಟಕ ಮತ್ತು ಭಾರತದ ಇತಿಹಾಸ, ಸಂಸ್ಕೃತಿ ಮತ್ತು ಬೌದ್ಧಿಕ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಸಂಗ್ರಹಿಸುವುದು, ಸಂರಕ್ಷಿಸುವುದು ಮತ್ತು ವಿಮರ್ಶಾತ್ಮಕವಾಗಿ ಅಧ್ಯಯನಿಸುವುದು ಈ ಕೇಂದ್ರದ ಮುಖ್ಯ ಉದ್ದೇಶ.ಉದ್ಘಾಟನಾ ಸಮಾರಂಭದಲ್ಲಿ ಅರ್ಚ್‌ಬಿಷಪ್ ಪೀಟರ್ ಮಚಾದೊ,...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ

0
ಮಂಗಳೂರು{ ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 11 ರಂದು ಚುನಾವಣೆ ಮತ್ತು ಡಿಸೆಂಬರ್ 13 ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ “ಶುಷ್ಕದಿನ” ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ,...

”ನೈಸರ್ಗಿಕ ಕೃಷಿಯಿಂದ ಆರೋಗ್ಯಯುತ ಸಮಾಜ ಸೃಷ್ಟಿ”

0
ಮಂಗಳೂರು: ನೈಸರ್ಗಿಕವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ರಾಸಾಯನಿಕ ಮುಕ್ತ ತರಕಾರಿ ಹಾಗೂ ಬೆಳೆಗಳು ದೊರಕಿ ಜನರು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ ತಿಳಿಸಿದ್ದಾರೆ.ಅವರು ಮಂಗಳವಾರ ಕೃಷಿ ವಿಜ್ಞಾನ ಕೇಂದ್ರ, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಭಾರತ ಸರ್ಕಾರ, ಕೃಷಿ...

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

0
ಮಂಗಳೂರು: 2025-26ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ವ್ಯಕ್ತಿ/...

ಸಂಘಟಿತ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

0
ಮಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 31. ಕಾರ್ಮಿಕರ ಮಾಸಿಕ ವೇತನ ರೂ. 35,000 ಗಿಂತ ಮೀರಿರಬಾರದು....