27.9 C
Karnataka
Sunday, September 13, 2026

ಸುದ್ದಿ

ಎಣ್ಮೂರು ಶ್ರೀ ನಾಗ ಬ್ರಹ್ಮ ಕೋಟಿ ಚೆನ್ನಯ ಆದಿ ಬೈದೆರುಗಳ ನೇಮೋತ್ಸವ

0
ಎಣ್ಮೂರು: ತುಳು ನಾಡಿನ ಐತಿಹಾಸಿಕ ಕ್ಷೇತ್ರ ಎಣ್ಮೂರು ಶ್ರೀ ಆದಿ ಬೈದೆರುಗಳ ನೇಮೋತ್ಸವವು ಮಾ.23 ಶನಿವಾರ ಪೂರ್ವ ಸಂಪ್ರದಾಯದಂತೆ ಸುಗ್ಗಿ ತಿಂಗಳ ಪೂವೆಯಂದು ಜರುಗಲಿರುವುದು .ಬೆಳಿಗ್ಗೆ 8 ಗಂಟೆಗೆ ನಾಗ ತಂಬಿಲ,8.30 ಮೂಹೂರ್ತ ತೋರಣ ನಡೆಯಲಿದೆ.ಮಧ್ಯಾಹ್ನ ಗಂಟೆ 12.30ಕ್ಕೆ ಎಣ್ಮೂರು ಕಟ್ಟ ಬೀಡಿನಿಂದ ಭಂಡಾರ ಹೊರಡುವುದು - ನೇತ್ರಾದಿ ಗರಡಿಯಲ್ಲಿ ದರ್ಶನ.ರಾತ್ರಿ ಗಂಟೆ 8ಕ್ಕೆ...

ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚುನಾವಣೆ:ಕ್ಯಾ.ಗಣೇಶ್‌ ಕಾನಿ೯ಕ್‌

0
ಮ೦ಗಳೂರು: ಮುಂಬರುವ ೧೮ನೇ ಲೋಕಸಭಾ ಚುನಾವಣೆ ಭಾರತದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖ ಚುನಾವಣೆಯಾಗಿದೆ. ಈ ಚುನಾವಣೆಯ ಫಲಿತಾಂಶ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಪರಿಣಾಮಕಾರಿ ಹೆಜ್ಜೆಯಾಗಲಿದೆ ಎ೦ದು ವಿಧಾನ ಪರಿಷತ್‌ ಮಾಜಿ ಸದಸ್ಯ ಕ್ಯಾ.ಗಣೇಶ್‌ ಕಾನಿ೯ಕ್‌ ಹೇಳಿದ್ದಾರೆ.ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನರೇಂದ್ರ...

ಪುತ್ತೂರು: ಜಯಾನಂದ ಬಂಗೇರ ಅವರ ಮನೆಗೆ ಬಿಜೆಪಿ ನಾಯಕರ ಭೇಟಿ

0
ಪುತ್ತೂರು: ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯರಾದ ಜಯಾನಂದ ಕೆ. ಬಂಗೇರ ರವರ ಮನೆಗೆ ಪುತ್ತೂರು ಶಾಸಕರ ಬೆಂಬಲಿಗರು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಕುರಿತು ವಿಚಾರಿಸಲು ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಜಯಾನಂದ ಬಂಗೇರ ರವರ ಮನೆಗೆ ಭೇಟಿ ನೀಡಿದರು. ಜಯಾನಂದರು ಹಾಗೂ ಮನೆಯವರನ್ನು...

ಅಬಕಾರಿ ಅಕ್ರಮ ತಡೆಗೆ ವಿಚಕ್ಷಣ ದಳ ರಚನೆ

0
ಮಂಗಳೂರು: 2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ನೀತಿಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನಡೆಯಬಹುದಾದ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ವತಿಯಿಂದ ಜಿಲ್ಲಾ ಹಾಗೂ ಉಪ ವಿಭಾಗ ಮಟ್ಟದಲ್ಲಿ ವಿಚಕ್ಷಣ ದಳಗಳನ್ನುರಚಿಸಲಾಗಿದೆ. ಸಾರ್ವಜನಿಕರು ಅಬಕಾರಿ ಅಕ್ರಮಗಳ ಬಗ್ಗೆ ಮಾಹಿತಿಯನ್ನು ವಿಚಕ್ಷಣದಳಗಳ ನಿಯಂತ್ರಣಾಧಿಕಾರಿಗಳಿಗೆ ದೂರು ನೀಡಬಹುದು.ಸದರಿ ವಿಚಕ್ಷಣ ದಳಗಳ ನಿಯಂತ್ರಣಾಧಿಕಾರಿಗಳುಜಿಲ್ಲಾ ಮಟ್ಟ: ಟಿ.ಎಂ.ಶ್ರೀನಿವಾಸ, ಅಬಕಾರಿ ಉಪ...

ಮಾ.23-24 :ದ .ಕ .ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನ

0
ಮಂಗಳೂರು: ದ .ಕ .ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ 23-24 ರ೦ದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ "ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ " ಘೋಷಣೆಯಿಂದ ನಡೆಯಲಿದೆ ಎಂದು ಕಸಾಪ ದ.ಕ. ಅಧ್ಯಕ್ಷ ಡಾ .ಎಂ .ಪಿ. ಶ್ರೀನಾಥ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹಿರಿಯ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ಅವರು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.ಇಡೀ...

ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ:ನಳಿನ್‌ಕುಮಾರ್ ಕಟೀಲ್

0
ಮಂಗಳೂರು : ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಖಂಡಿಸಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ ಭೀತಿ ಎದುರಾಗಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಗೂಂಡಾಗಿರಿ ನಡೆಸಲು ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಶಾಸಕರ ದರ್ಪಕ್ಕೆ ಬಿಜೆಪಿ...

ಲೋಕಸಭಾ ಚುನಾವಣೆ ಸಂಬಂಧ ಸಭೆ, ಸಮಾರಂಭ, ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ

0
ಮಂಗಳೂರು: ಇದೀಗ ಘೋಷಣೆಯಾಗಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೂಚನೆ ನೀಡಿದರು. ಅವರು ಮಾ.18ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ...

ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ.ದೇವೇಂದ್ರಪ್ಪ ಹೆಚ್.

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ರಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶಹೊರಡಿಸಿದೆ.ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ...

ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಸ್ವಾಗತ

0
ಮಂಗಳೂರು: ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವವನ್ನು ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಭಕ್ತಿಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ ಹಿಂದೂಗಳ ಪಾಲಿನ ಅತ್ಯಂತ ಪವಿತ್ರ ತೀರ್ಥಕ್ಷೇತ್ರವಾದ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆಯ ನಂತರ...

ನಂತೂರು: ದೇವ ವನ ಪಾರ್ಕ್ಉದ್ಘಾಟನೆ

0
ಮ೦ಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ ವಾರ್ಡ್ 32 ರ ನಂತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ದೇವ ವನ ಪಾರ್ಕ್ ಶಾಸಕ ವೇದವ್ಯಾಸ ಕಾಮತ್ ಅವರ ಘನ ಉಪಸ್ಥಿತಿಯಲ್ಲಿ, ವಿಠಲ ಶೆಣೈಯವರಿಂದ ಉದ್ಘಾಟನೆಗೊಂಡಿತು. ಉದ್ಘಾಟನೆಯ ನಂತರ ಮಾತನಾಡಿದ ಶಾಸಕರು, ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 18 ಲಕ್ಷ ರೂ. ಅನುದಾನದಲ್ಲಿ ಈ ಪಾರ್ಕ್ ಅಭಿವೃದ್ಧಿಗೊಂಡಿದ್ದು ಸ್ಥಳೀಯ ಮ.ನ.ಪಾ...