ತಲಪಾಡಿ ಅಪಘಾತ: ಬಸ್ ಬ್ರೇಕ್‍ಫೇಲ್ ಸಂಭವಿಸಿಲ್ಲ – ಕೆ.ಎಸ್.ಆರ್.ಟಿ.ಸಿ ಸ್ಪಷ್ಟನೆ
ಮಂಗಳೂರು: ಗುರುವಾರ ತಲಪಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್- ರಿಕ್ಷಾ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ಬಸ್ ಬ್ರೇಕ್ ಫೇಲ್ ಆಗಿರುವುದಿಲ್ಲ ಎಂದು ಕೆ.ಎಸ್.ಆರ್.ಟಿ.ಸಿ ಸ್ಪಷ್ಟಪಡಿಸಿದೆ.ಆಗಸ್ಟ್ 28 ರಂದು ಮಂಗಳೂರು-1ನೇ ಘಟಕದ ಕೆಎ 19 ಎಫ್ 3407 ಸಂಖ್ಯೆಯ ಬಸ್‍ನಲ್ಲಿ ಚಾಲಕರಾಗಿ ನಿಜಲಿಂಗಪ್ಪ ಛಲವಾದಿ ಎಂಬುವವರು ಕರ್ತವ್ಯ ನಿರ್ವಹಿಸುತ್ತಿದ್ದು, ಕಾಸರಗೋಡಿನಿಂದ ನಿರ್ಗಮಿಸಿ ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದಾಗ...
ಲ೦ಚ: ಪುತ್ತೂರು ತಹಶೀಲ್ದಾರ್ ಕಛೇರಿ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ
ಮ೦ಗಳೂರು: ಜಮೀನನ್ನು ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರ ನೀಡಲು ಲ೦ಚಕ್ಕೆ ಬೇಡಿಕೆ ಇಟ್ಟು ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಪ್ರಕರಣ ಪುತ್ತೂರು ತಹಶೀಲ್ದಾರ್ ಕಛೇರಿಯಲ್ಲಿ ನಡೆದಿದೆ. ತಹಶೀಲ್ದಾರ್ ಕಛೇರಿಯ ಭೂ ಸುಧಾರಣಾ ಶಾಖೆಯ ಕೇಸ್ ವರ್ಕರ್ ಸುನೀಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಆರೋಪಿ.
ಪಿರ್ಯಾದಿದಾರರ ಚಿಕ್ಕಪ್ಪ ನವರಿಗೆ ಪುತ್ತೂರು ತಾಲೂಕು ನೆಟ್ಟಣಿಗೆ...
ತಲಪಾಡಿ : ಆಟೋ ರಿಕ್ಷಾಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸೇರಿದಂತೆ ಆರು ಮಂದಿ...
ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಚಾಲಕ ಹಾಗೂ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಒ೦ದೆ ಕುಟು೦ಬದ 5 ಮ೦ದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ.. ಆಟೋರಿಕ್ಷಾ ಚಾಲಕ ಹೈದರ್ ಅಲಿ (47), ಅಜ್ಜಿನಡ್ಕದ ಖತೀಜಾ (60),ಅವರ ತ೦ಗಿ ನಫೀಸಾ (52),...
ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು
ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು
ಮ೦ಗಳೂರು: ರಸ್ತೆ ಕಾಮಗಾರಿಯ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಠನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕದಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ.ಬೆಂಗಳೂರು ನೆಲಮಂಗಲ ನಿವಾಸಿ ತಂದೆ ಹುನಮಂತರಾಯಪ್ಪ (60) ಮೃತಪಟ್ಟವರು.ಹುನಮಂತರಾಯಪ್ಪ ಅವರು ಮಂಗಳೂರಿನಿಂದ ಬೆಂಗಳೂರು ಕಡೆಗೆ ಅವರ ಲಾರಿಯನ್ನು ಚಲಾಯಿಸಿಕೊಂಡು ಬಂದು ಬುಧವಾರ ತಡ...
ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ : ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ
ಮ೦ಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ನವರಾತ್ರಿ ಸ೦ದಭ೯ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.
ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ನಲ್ಲಿ ...
ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ
ಮಂಗಳೂರು: ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ‘ ಅಭಿಯಾನದ ಎಂಟನೇ ಕೂಟವನ್ನು...
ರಂಗ ತರಬೇತಿ ಕೇಂದ್ರ ಆರಂಭಿಸಲು ಚಿಂತನೆ : ಡಾ.ದೇವದಾಸ್ ಕಾಪಿಕಾಡ್
ಮಂಗಳೂರು : ರಂಗಭೂಮಿಯ ಬಗ್ಗೆ ಈಗ ಸಮಾಜದಲ್ಲಿ ಗೌರವದ ಭಾವನೆ ಇದೆ. ಮಕ್ಕಳು ಸೇರಿದಂತೆ ಯುವ ಜನಾಂಗ ನಾಟಕದಲ್ಲಿ ಅಭಿನಯಿಸಲು ಆಸಕ್ತಿ ವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ರಂಗಾಸಕ್ತರನ್ನು ಕಲಾವಿದರಾಗಿ ಬೆಳೆಸುವ ನಿಟ್ಟಿನಲ್ಲಿ ರಂಗ ತರಬೇತಿ ಕೇಂದ್ರವೊಂದನ್ನು ತೆರೆಯಲು ಸಿದ್ಧತೆ ನಡೆಸಲಾಗಿದೆ ಎಂದು ನಟ, ನಿರ್ದೇಶಕ ಡಾ.ದೇವದಾಸ್ ಕಾಪಿಕಾಡ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಮಂಗಳೂರು...
ವಿಶೇಷ ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ
ಮಂಗಳೂರು: ಸಂಜೀವಿನಿ ವಿವಿಧ ಸ್ವಸಹಾಯ ಸಂಘದ ಗ್ರಾಮೀಣ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟವು ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿಸಲು ಸಹಕರಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಅವರ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಹೇಳಿದರು.ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ...
ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ
ಮಂಗಳೂರು: 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು.ಅರ್ಜಿಯನ್ನು ನಿಗದಿತ ನಮೂನೆ ಂಇ-5 ರಲ್ಲಿ ಸಲ್ಲಿಸಬೇಕಾಗಿದ್ದು,...
ಮಹಿಳಾ ಸಂಜೀವಿನಿ ಒಕ್ಕೂಟದ ‘ಅಕ್ಕ ಕೆಫೆ’ ಗೆ ಸ್ಪೀಕರ್ ಚಾಲನೆ
ಮ೦ಗಳೂರು: ಉಳ್ಳಾಲ ತಾಲ್ಲೂಕಿನ ಮುನ್ನೂರು ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಲ್ಲಿ ನೂತನ “ಅಕ್ಕ ಕೆಫೆ” ಉಪಹಾರ ಗೃಹವನ್ನು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಶನಿವಾರ ಉದ್ಘಾಟಿಸಿದರು.ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್‍ಎಲ್‍ಎಂ)-ಸಂಜೀವಿನಿ, ಜಿಲ್ಲಾ ಪಂಚಾಯತ್...





