15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ :ಜಿ. ಪಂ ಸಿಇಒ ಸೂಚನೆ
ಮಂಗಳೂರು: ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಪ್ರತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೃತೃತ್ವದಲ್ಲಿ ಉನ್ನತ ಮಟ್ಡದ ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ...
ಮಂಗಳೂರನ್ನು ಪ್ರಮುಖ ’ಡೇಟಾ ಸೆಂಟರ್ ಹಬ್ ’ಆಗಿ ಅಭಿವೃದ್ಧಿಪಡಿಸಲು ಆಗ್ರಹ
ನವದೆಹಲಿ: ಮಂಗಳೂರನ್ನು ಪ್ರಮುಖ ’ಡೇಟಾ ಸೆಂಟರ್ ಹಬ್ ’ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್. ಕೃಷ್ಣನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ನವದೆಹಲಿಯಲ್ಲಿ ಇಂದು ಕಾರ್ಯದರ್ಶಿ ಕೃಷ್ಣನ್...
ಸಾಹಿತ್ಯದ ಶಕ್ತಿಗೆ ಪರ್ಯಾಯವಿಲ್ಲ : ಡಾ| ಮಹಾಲಿಂಗ ಭಟ್
ಮ೦ಗಳೂರು: "ವಿಶ್ವದಾದ್ಯಂತ ದೇಶವೊಂದಕ್ಕೆ ಒಂದೇ ಭಾಷೆಯಿರುವಾಗ ಭಾರತ ಭೂಖಂಡದಲ್ಲಿ ಸಾವಿರಾರು ಭಾಷೆ - ಸಾಹಿತ್ಯ - ಸಂಸ್ಕೃತಿಗಳಿಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಪುಸ್ತಕ ಮಾತ್ರವಲ್ಲ ಮೌಖಿಕ ಸಾಹಿತ್ಯವೂ ಇದೆ. ಇಪ್ಪತನಾಲ್ಕು ಭಾಷೆಗಳಲ್ಲಿನ ಉತ್ತಮ ಸಾಹಿತ್ಯ ಗುರುತಿಸಿ ಪ್ರಕಟಿಸುವುದು, ಒಂದು ಭಾಷೆಯಿಂದ ಇನ್ನೊಂದಕ್ಕೆ ಅನುವಾದ ಮಾಡಿ ಪ್ರಕಟಿಸುವುದು ಸುಲಭದ ಕೆಲಸವಲ್ಲ. ಕೇಂದ್ರ ಸಾಹಿತ್ಯ...
ರೆಡ್‌ಕ್ರಾಸ್‌ನಿಂದ ಜಿನಿವಾ ಒಪ್ಪಂದ ದಿನಾಚರಣೆ
ಮಂಗಳೂರು : ಯುದ್ಧ ಗಾಯಾಳುಗಳನ್ನು ಹಾಗೂ ಯುದ್ಧ ಕೈದಿಗಳನ್ನು ಮಾನವೀಯತೆಯ ತಳಹದಿಯಲ್ಲಿ ಕಾಪಾಡುವುದು ಎಲ್ಲ ರಾಷ್ಟ್ರಗಳ ಕರ್ತವ್ಯ. ಇಂತಹ ಮಹತ್ವದ ಉದ್ದೇಶವನ್ನು 1949ರ ಜಿನಿವಾ ಒಪ್ಪಂದ ಹೊಂದಿದೆ ಎಂದು ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ.ಪ್ರಭಾಕರ ಶರ್ಮ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ವತಿಯಿಂದ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾಸಭಾಂಗಣದಲ್ಲಿ ಮಂಗಳವಾರ ನಡೆದ ಜಿನಿವಾ...
ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 16 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು...
ಮೊರಾರ್ಜಿ ದೇಸಾಯಿ ಪಿಯು ಕಾಲೇಜು ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ತಾಲೂಕಿನ ಬಲ್ನಾಡು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ 2025-26ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಪ್ರಥಮ ಪಿಯುಸಿಯು ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಾದ ತಲಾ 40 ಸೀಟುಗಳಿಗೆ ಎಸ್‍ಎಸ್‍ಎಲ್‍ಸಿ ಅಂಕ ಮತ್ತು ಸರ್ಕಾರದ...
ಶಕ್ತಿನಗರ: ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನೆ
ಮಂಗಳೂರು : 21ನೇ ಪದವು ಪಶ್ಚಿಮ ವಾರ್ಡಿನ ಶಕ್ತಿನಗರದ ನಾಲ್ಯಪದವಿನಲ್ಲಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ಸಂಪೂರ್ಣ ಸಹಕಾರದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.
ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು...
ಎಂ.ಸಿ.ಸಿ. ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10 ನೇ ಎಟಿಎಂ ಉದ್ಘಾಟನೆ
ಮ೦ಗಳೂರು: ಎಂ.ಸಿ.ಸಿ. ಬ್ಯಾಂಕ್ ಸುರತ್ಕಲ್ ಶಾಖೆಯಲ್ಲಿ ಆಗಸ್ಟ್ 10 ರ೦ದು ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.
ಸಮಾರಂಭವು ಸುರತ್ಕಲ್‌ನ ಸೇಕ್ರೆಡ್ ಹಾರ್ಟ್ ಚರ್ಚ್'ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಮೊಹಮ್ಮದ್ ಹನೀಫ್ ಅವರು ಎಟಿಎಂ...
ಮುದ್ದುಕಂದ ಕೃಷ್ಣರ ಮೋಹಕ ಲೀಲೆ: ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ
ಮಂಗಳೂರು: ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು.
ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ...








