34.5 C
Karnataka
Saturday, May 2, 2026

ಸುದ್ದಿ

ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

0
ಬೆ೦ಗಳೂರು: ಭಾರತದ ಹೈಸ್ಪೀಡ್ ರೈಲು ಮೂಲಸೌಕರ್ಯವನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ಮೂರು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದರು. ಈ ಉದ್ಘಾಟನೆಯ ಭಾಗವಾಗಿ ಬಹುನಿರೀಕ್ಷಿತ ಬೆಂಗಳೂರು–ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಜೊತೆಗೆ ಶ್ರೀ ಮಾತಾ ವೈಷ್ಣೋ...

ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಬಳಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ...

ಬಾಂಧವ್ಯ ಬೆಸೆಯುವ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ ಪುಟಾಣಿಗಳು

0
ಮಂಗಳೂರು: ಬಾಂಧವ್ಯ ಬೆಸೆಯುವ, ಒಗ್ಗಟ್ಟನ್ನು ಸಾಂಕೇತಿಸುವ ಬಂಧುತ್ವದ ಹಬ್ಬ ರಕ್ಷಾ ಬಂಧನ ನಾಡಿನೆಲ್ಲೆ ಶನಿವಾರ ನಡೆದಿದೆ. ದೇರಳಕಟ್ಟೆಯ ಚಿಲ್ಟನ್ ಪ್ಲೇ ಸ್ಕೂಲ್‌ನಲ್ಲಿಯೂ ವಿಶೇಷ ರೀತಿಯಲ್ಲಿ ರಕ್ಷಾ ಬಂಧನದ ಆಚರಣೆ ನಡೆಯಿತು. ಪುಟ್ಟ ಪುಟ್ಟ ಪುಟಾಣಿಗಳೇ ತುಂಬಿರುವ ಈ ಪ್ಲೇ ಸ್ಕೂಲ್‌ನಲ್ಲಿ ಶನಿವಾರ ಸಂಭ್ರಮ ಸಡಗರ ಮನೆಮಾಡಿತ್ತು. ಪುಷ್ಪಾಲಂಕೃತ ದೀವಿಗೆಯ ಸುತ್ತ ರಕ್ಷೆಯನ್ನಿಟ್ಟು ಆರತಿ ಬೆಳಗಿದ...

‘ಬಲೆ ತುಳು ಓದುಗ’ ಅಭಿಯಾನ

0
ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು.ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್...

ಕ್ವಿಟ್ ಇಂಡಿಯಾ ದಿನಾಚರಣೆ: ಗೌರವಾರ್ಪಣೆ

0
ಮ೦ಗಳೂರು: ಕ್ವಿಟ್ ಇಂಡಿಯಾ ದಿನಾಚರಣೆಯ ಅಂಗವಾಗಿ ಶನಿವಾರ ಜಿಲ್ಲಾಡಳಿತ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿ ಅವರಿಗೆ ಗೌರವ ಸಲ್ಲಿಸಲಾಯಿತು. ನಗರದ ಕುದ್ರೋಳಿ ಅಳಕೆಯಲ್ಲಿರುವ ವಿಠಲ ಕಿಣಿ ಅವರ ಮನೆಗೆ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಭೇಟಿ ನೀಡಿ ಸನ್ಮಾನಿಸಿ, ಗೌರವಿಸಿದರು.ವಿಠಲ ಕಿಣಿ ಅವರೊಂದಿಗೆ ಸಮಾಲೋಚಿಸಿದ...

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎ೦ ಉದ್ಘಾಟನೆ

0
ಮ೦ಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ ನ ಗ್ರಾಹಕ ಸೇವೆ ಮತ್ತು ಬ್ಯಾಂಕಿ೦ಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿ ಬ್ಯಾಂಕಿನ ಪ್ರಗತಿಯನ್ನು ವಿವರಿಸಿದರು. ಎಟಿಎಂ ಅನ್ನು ಬೆಳ್ಮನ್‌ನ ಮಾನ್ಯ...

ಪಿಲಿಕುಳ: ಆಗಸ್ಟ್ 10 ರಂದು ಆಟಿ ಕೂಟ

0
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆ, ಬ್ಯಾಂಕ್ ಆಫ್ ಬರೋಡ ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಆಟಿಕೂಟ ಆಗಸ್ಟ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಡುಶೆಡ್ಡೆ ಪಿಲಿಕುಳ ಗುತ್ತು ಮನೆಯಲ್ಲಿ ಆಯೋಜಿಸಲಾಗಿದೆ. ಕಲ್ಕೂರ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ಸರಯೂ ಯಕ್ಷ ಬಳಗ ಕೋಡಿಕಲ್ ಇವರಿಂದ 'ಮಹಾಶೂರ ಭೌಮಾಸುರ' ಎಂಬ ಯಕ್ಷಗಾನ ಕಾರ್ಯಕ್ರಮ...

ವೆನ್‍ಲಾಕ್‍ನಲ್ಲಿ ಪೊಲೀಸ್ ಔಟ್ ಪೋಸ್ಟ್ : ಉಸ್ತುವಾರಿ ಸಚಿವರ ಸೂಚನೆ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ವೆನ್‍ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರೊಂದಿಗೆ ಸಭೆ ನಡೆಸಿದರು.ವೆನ್‍ಲಾಕ್ ಆಸ್ಪತ್ರೆಯ ವಿವಿಧ ಅಭಿವೃದ್ಧಿ ವಿಷಯದ...

ಬ್ಯಾಕ್ ಟು ಊರು’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಪ್ರಬಲ ದಿಕ್ಸೂಚಿ: ಸಂಸದ ಕ್ಯಾ. ಚೌಟ

0
ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು...

ಮಂಗಳೂರು ವಿ.ವಿ: ಅತಿಥಿ ಉಪನ್ಯಾಸಕರ ಸಂದರ್ಶನ

0
ಮಂಗಳೂರು: 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿ-ಸಂದರ್ಶನ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗಿದ್ದು, ಆಯ್ಕೆಗೆ ಸಂಬಂಧಿಸಿ ಸಂದರ್ಶನವು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ನಡೆಯಲಿದೆ.ವಿಷಯವಾರು ದಿನಾಂಕ ಮತ್ತು ಸಮಯ : ಆಗಸ್ಟ್ 11 :- ಬೆಳಿಗ್ಗೆ 10 ರಿಂದ 10:30 ಕನ್ನಡ, ಬೆಳಿಗ್ಗೆ 10:30 ರಿಂದ...