ರೆಮೋನಾ ಎವೆಟ್ ಪಿರೇರಾಗೆ ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಸನ್ಮಾನ
ಮಂಗಳೂರು: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ.ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ...
ಬಿಜೆಪಿ ವತಿಯಿಂದ ಆಟಿದ ಐಸಿರ
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್...
ವ್ಯಸನ ಮುಕ್ತ ಸಮಾಜ ನಿರ್ಮಿಸಲು ಯುವಕರ ಸಹಕಾರ ಅಗತ್ಯ”
ಮಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಯುವಕರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವ್ಯಸನಗಳಿಗೆ ಆಕರ್ಷಣೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಸನ ಮುಕ್ತ ದಿನದ ಆಚರಣೆಯು ಯುವಜನರಲ್ಲಿ ಅರಿವು ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್ ಹೇಳಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು...
ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಸಭೆ
ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ನೂತನ ಶಕ್ತಿಕೇಂದ್ರದ ಪ್ರಮುಖರ ಸಭೆಯು ಶಾಸಕ ವೇದವ್ಯಾಸ ಕಾಮತ್ ರವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು
ಈ ವೇಳೆ ಮಾತನಾಡಿದ ಶಾಸಕರು, ಪಕ್ಷ ಸಂಘಟನಾತ್ಮಕ ನೆಲೆಯಲ್ಲಿ ಶಕ್ತಿಕೇಂದ್ರದ ಪ್ರಮುಖರಿಗೆ ಅತ್ಯಂತ ಹೆಚ್ಚಿನ ಜವಾಬ್ದಾರಿ ಇದೆ. ನಿಮ್ಮೆಲ್ಲರ ಸಾಮರ್ಥ್ಯ ಅರಿತೇ ಪಕ್ಷವು ಅಂತಹ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ...
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರುಗಿತು.
ಮಾತನಾಡಿದ ಅವರು, ಕೇಂದ್ರ ಸರಕಾರದ ಭದ್ರತಾ ಲೋಪದ ಕಾರಣಕ್ಕೆ ಪಹಲ್ಗಾಮ್ ನಲ್ಲಿ ದೇಶದ 26 ಅಮಾಯಕ ನಾಗರಿಕರ ಹತ್ಯೆಯಾಯಿತು. ಈ ಬಗ್ಗೆ ಸಂಸತ್ ಅಧಿವೇಶನಲ್ಲಿ ಕಾಂಗ್ರೆಸ್ ನಾಯಕರು ಪ್ರಶ್ನಿಸಲು ಮುಂದಾದರೆ ಸರಿಯಾದ...
ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯ: ಫಲಿತಾಂಶ ಆಧಾರಿತ ಶಿಕ್ಷಣ ಕಾರ್ಯಾಗಾರ
ಬೆ೦ಗಳೂರು: ವೇಗವಾಗಿ ಬದಲಾಗುತ್ತಿರುವ ಶಿಕ್ಷಣ ಮತ್ತು ಉದ್ಯೋಗ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು, ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾನಿಲಯವು ಫಲಿತಾಂಶ ಆಧಾರಿತ ಶಿಕ್ಷಣ (OBE) ಕುರಿತು ಕಾರ್ಯಾಗಾರ ಸರಣಿಯನ್ನು ಆಯೋಜಿಸಿತು.ಈ ಕಾರ್ಯಾಗಾರಗಳು ಸ್ಪಷ್ಟ ಕಲಿಕಾ ಫಲಿತಾಂಶಗಳನ್ನು ವ್ಯಾಖ್ಯಾನಿಸಲು ಮತ್ತು ಅವುಗಳನ್ನು ಪಠ್ಯಕ್ರಮ, ಬೋಧನೆ ಮತ್ತು ಮೌಲ್ಯಮಾಪನದೊಂದಿಗೆ ಜೋಡಿಸಲು ಬೋಧಕರಿಗೆ ಸಹಾಯ ಮಾಡಲು ಉದ್ದೇಶಿಸಲಾಗಿತ್ತು. ಉಪಕುಲಪತಿ ರೆ. ಫಾ....
ಭತ್ತದ ಬೆಳೆ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅವಶ್ಯ: ಬಿ.ಕೆ. ದೇವ ರಾವ್
ಮಂಗಳೂರು : ಕೃಷಿಕರು ಭತ್ತದ ಬೆಳೆಯಿಂದ ವಿಮುಖರಾಗಿದ್ದು, ವೈವಿಧ್ಯಮಯ ಭತ್ತದ ತಳಿಗಳು ನಾಶವಾಗುವ ಭೀತಿ ಇದೆ. ಭತ್ತದ ಬೇಸಾಯ ಉಳಿವಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ರೈತರು ಭತ್ತ ಬೆಳೆಯನ್ನು ಕನಿಷ್ಠ ಉಪ ಕಸುಬು ಆಗಿ ಬೆಳೆಸಿ ಸಂರಕ್ಷಿಸಬೇಕು ಎಂದು ಭತ್ತ ತಳಿ ಸಂರಕ್ಷಕ ಬಿ.ಕೆ. ದೇವ ರಾವ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಮಂಗಳೂರು...
ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿ೦ದ ಹಾಸನ–ಬಂಟವಾಳ ರೈಲು ವಿಭಾಗಗಳಲ್ಲಿ ಪರಿಶೀಲನೆ
ಮ೦ಗಳೂರು: ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಇಂದು ಹಾಸನ–ಸಕಲೇಶಪುರ, ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಮತ್ತು ಸುಬ್ರಹ್ಮಣ್ಯ ರಸ್ತೆ–ಬಂಟವಾಳ ಮಾರ್ಗಗಳವರೆಗೆ ತಪಾಸಣೆ ನಡೆಸಿದರು.
ಈ ತಪಾಸಣೆಯ ಉದ್ದೇಶವು ಮಾರ್ಗದ ಮೇಲಿರುವ ಹಳೆಯದಾದ ಟ್ರಾಕ್ ಮೂಲಸೌಕರ್ಯ, ಸಂಜ್ಞಾ ವ್ಯವಸ್ಥೆ (ಸಿಗ್ನಲಿಂಗ್ ಸಿಸ್ಟಮ್), ಭದ್ರತೆ ಮತ್ತು ನಿರ್ವಹಣಾ ಮಾನದಂಡಗಳನ್ನು ಪರಿಶೀಲಿಸುವುದಾಗಿತ್ತು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ...
ಮಂಗಳೂರಿನಲ್ಲಿ ಶೀಘ್ರ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದರಿಂದ ಮನವಿ
ದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ.
ಇಂದು...
ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ: ಆರೋಪಿಯ ಬಂಧನ
ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮಂಗಳೂರು ಉಜ್ಜೋಡಿ ನಿವಾಸಿ ಪೃಥ್ವಿರಾಜ್ ಶೆಟ್ಟಿ @ ಮುನ್ನ (25 ) ಬಂಧಿತ ಆರೋಪಿ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ...









