35.5 C
Karnataka
Saturday, May 2, 2026

ಸುದ್ದಿ

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ : ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ‌ ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಕೇಂದ್ರದಲ್ಲಿ ದ.ಕ.ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ...

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

0
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ...

ಸುರತ್ಕಲ್‌ – ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ

0
ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ...

ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ: ಮಾಹಿತಿ ಶಿಬಿರ

0
ಮ೦ಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01-02 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ "ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ" ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮಾಹಿತಿ ಶಿಬಿರದಲ್ಲಿ 500 ಕ್ಕೂ ಅಧಿಕ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಶಾಸಕರು,...

ಕೆಂಪುಕಲ್ಲು ಗಣಿಗಾರಿಕೆಗೆ : ಪರವಾನಿಗೆಗೆ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

0
ಬೆ೦ಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ...

ಮಿಸ್ಸ್ ವಲ್ಡ್ ಇಂಟರ್ ನ್ಯಾಷನಲ್ ಸ್ಪರ್ಧೆ : ಮೈತ್ರಿ ಮಲ್ಲಿಗೆ ಪ್ರಶಸ್ತಿ

0
ಮಂಗಳೂರು: ಹೊಸದಿಲ್ಲಿಯ ಲೀಲಾ ಪ್ಯಾಲೇಸ್‌ನಲ್ಲಿ ಜುಲೈ 12 ರಂದು ಗ್ಲಾಮರ್ ಗುರ್ಗಾಂವ್ ಆಯೋಜಿಸಿದ್ದ ಮಿಸ್ಸ್ ವಲ್ಡ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಮಂಗಳೂರಿನ ಮೈತ್ರಿ ಮಲ್ಲಿ ಅವರು ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ ಗೆಲ್ಲುವ ಮೂಲಕ ಕರಾವಳಿ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಇದು ಕರ್ನಾಟಕ ರಾಜ್ಯ ಗೆದ್ದ ಏಕೈಕ ಪ್ರಶಸ್ತಿಯಾಗಿದೆ. ದುಬೈ, ಆಸ್ಟ್ರೇಲಿಯಾ,...

ಓದುವ ಹವ್ಯಾಸದಿಂದ ವ್ಯಕ್ತಿತ್ವ ವಿಕಸನ:ಡಾ.ಮೀನಾಕ್ಷಿ ರಾಮಚಂದ್ರ

0
ಮಂಗಳೂರು : ಪುಸ್ತಕ ಓದುವ ಹವ್ಯಾಸದಿಂದ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ. ಅಪಾರ ಜ್ಞಾನ ಸಂಪತ್ತು ಪ್ರಾಪ್ತಿಯಾಗುತ್ತದೆ. ವಿದ್ಯಾರ್ಥಿಗಳು ಜ್ಞಾನ, ಬುದ್ಧಿ, ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಕ್ರಮಗಳ ಓದಿನ ಜತೆಗೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯವಾಗಿದೆ ಎಂದು ಸಾಹಿತಿ, ನಿವೃತ್ತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ರಾಮಚಂದ್ರ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ...

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ

0
ನವದೆಹಲಿ: ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿ ಮಾಡಿದ...

ಮನೆ ಬಾಗಿಲಿಗೆ ಆರೋಗ್ಯ ಸೇವೆ-14 ರೋಗಗಳ ತಪಾಸಣೆ- ಕೈಪಿಡಿ ಬಿಡುಗಡೆ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ ಇವರ ಸಹಯೋಗದೊಂದಿಗೆ ಗೃಹ ಆರೋಗ್ಯ ಯೋಜನೆ ಕಾರ್ಯಾಗಾರ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.ಶಾಸಕ ಐವನ್ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ...

ಜನನ-ಮರಣ :21 ದಿನಗಳೊಳಗೆ ನೋಂದಣಿ ಕಡ್ಡಾಯ– ಅಪರ ಜಿಲ್ಲಾಧಿಕಾರಿ

0
ಮಂಗಳೂರು: ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/ ಗ್ರಾಮ ಪಂಚಾಯತ್ ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್‌ ಕುಮಾರ್ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಗರ...