ಜಾಗತಿಕ ಬಂಟರ ಸಂಘಗಳ ಒಕ್ಕೂಟ: 50 ಲಕ್ಷ ರೂಪಾಯಿ ಅನುದಾನ ವಿತರಣೆ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ಆಡಳಿತ ಮಂಡಳಿಯ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ವರದಿ ವಾಚಿಸಿದರು. ಕೋಶಾಧಿಕಾರಿ ಉಳ್ತೂರು ಮೋಹನ ದಾಸ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು. ಬಳಿಕ...
ಗುರು ಸ್ಮರಣೆಯಿಂದ ಬದುಕಿಗೆ ಶ್ರೇಯಸ್ಸು-ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ
ಮಂಗಳೂರು : ಜ್ಞಾನ ಧಾರೆ ಎರೆಯುವ ಗುರುವಿನ ಸ್ಮರಣೆಯಿಂದ ಬದುಕಿಗೆ ಶ್ರೇಯಸ್ಸಾಗುತ್ತದೆ ಎಂದು ಥಿಯೊಸೊಫಿಕಲ್ ಸೊಸೈಟಿ ಮಂಗಳೂರು ಅಧ್ಯಕ್ಷ ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಮಂಗಳೂರು ತಾಲೂಕು ಸಮಿತಿ ಮತ್ತು ಥಿಯೊಸೊಫಿಕಲ್ ಸೊಸೈಟಿ ಮಂಗಳೂರು ವತಿಯಿಂದ ಥಿಯೊಸೊಫಿಕಲ್ ಸೊಸೈಟಿಯ ಬೆಸೆಂಟ್ ಮಂದಿರದಲ್ಲಿ ಜರಗಿದ ವ್ಯಾಸ ಜಯಂತಿ ಆಚರಣೆ ಕಾರ್ಯಕ್ರಮ...
ಸೋಲಾರ್ ಸೂರ್ಯಘರ್ ಯೋಜನೆ: 13 ಗ್ರಾಮಗಳ ಆಯ್ಕೆ
ಮಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜೂನ್ 27 ರಂದು ಜಿಲ್ಲಾ ಮಟ್ಟದ ಸಮಿತಿಯಿಂದ ನಡೆದ ಸಭೆಯಲ್ಲಿ 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ಉಜಿರೆ, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ,...
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 14 ರಿಂದ 17 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಮುನ್ನೆಚ್ಚರಿಕೆ ನೀಡಿರುತ್ತಾರೆ.
ಪುತ್ತೂರು-ಮಂಗಳೂರು ತಡೆರಹಿತ ಬಸ್‍ಗೆ ಚಾಲನೆ
ಮಂಗಳೂರು: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್‍ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೂ ಗುಚ್ಛ ನೀಡುವ ಮೂಲಕ ಶುಭ ಹಾರೈಸಿದರು.ಪುತ್ತೂರು-ಮಂಗಳೂರು ನಡುವೆ...
ಕೆ.ಎಸ್.ಆರ್.ಟಿ.ಸಿ 500 ಕೋಟಿ ಉಚಿತ ಟಿಕೆಟ್ – ಸಂಭ್ರಮ
ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ.ಈ ಹಿನ್ನೆಲೆಯಲ್ಲಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್‍ಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಮತ್ತು...
ಶಾರೂಖ್ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ: ಮಂಗಳೂರಿನಲ್ಲಿ ಕಾರ್ಯಕ್ರಮ
ಮಂಗಳೂರು:ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು.
ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ...
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ
ಮಂಗಳೂರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪ್ರತಿನಿಧಿ ಪತ್ರಿಕೆಯ...
ಕವಿತೆ ಮನಸ್ಸಿನ ಭಾವನೆಗಳ ಅಭಿವ್ಯಕ್ತಿ: ಕವಿ ಡಾ.ವಸಂತ ಕುಮಾರ್ ಪೆರ್ಲ
ಮಂಗಳೂರು : ಕವಿತೆ ಮನಸ್ಸಿನ ಭಾವನೆಗಳ ಅಭಿವ್ಯಕ್ತಿಯಾಗಿದೆ. ಭಾವನೆಗಳನ್ನು ವ್ಯಕ್ತ ಪಡಿಸಲು ಕವಿತೆ ಶಕ್ತಿಯುತ ಸಾಧನವಾಗಿದ್ದು, ಕವಿ ಯುಗದ ಧ್ವನಿಯಾಗಬೇಕು ಎಂದು ಹಿರಿಯ ಕವಿ, ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ನಗರದ ಲಾಲ್ಬಾಗ್‌ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್‌ನಲ್ಲಿ ನಡೆದ ಹನಿ ಇಬ್ಬನಿ- ಸಿಹಿ ಸಿಂಚನ...
ಜು.13ರಂದು ಹನಿ ಇಬ್ಬನಿ ಬಹುಭಾಷಾ ಕವಿಗೋಷ್ಠಿ
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದಲ್ಲಿವನಮಹೋತ್ಸವ ಮತ್ತು ಹನಿ ಇಬ್ಬನಿ- ಸಿಹಿ ಸಿಂಚನ ಬಹುಭಾಷಾ ಕವಿಗೋಷ್ಠಿ ಜು.13 ರಂದು ಬೆಳಗ್ಗೆ 9.30ಕ್ಕೆ ನಗರದ ಲಾಲ್ ಬಾಗ್ ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್ ನಲ್ಲಿ ನಡೆಯಲಿದೆ.ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ನ ಜನರಲ್ ಮ್ಯಾನೇಜರ್, ಮಾಜಿ ಮೇಯರ್...







