ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ
ಮಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು. ಈ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗುತ್ತಿದೆ. ತಾಲೂಕು ವ್ಯಾಪ್ತಿಯಲ್ಲಿ ಕಡಲಕೊರೆತ ಪ್ರದೇಶಗಳಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು....
ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ನಾರ್ಕೋ ಕೋ ಆರ್ಡಿನೇಷನ್ ಸೆಂಟರ್‍ನ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಾಲಾ ಕಾಲೇಜುಗಳಲ್ಲಿ ಮಾದಕ...
ಶಿಥಿಲಾವಸ್ಥೆಯಲ್ಲಿರುವ ಮಚ್ಚಟ್ಟು-ಕಬ್ಬಿನಾಲೆ ಸಂಪರ್ಕ ಸೇತುವೆ ಜಿಲ್ಲಾಧಿಕಾರಿಯಿಂದ ಪರಿಶೀಲನೆ
ಕುಂದಾಪುರ: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರ ಕೋರಿಕೆಯ ಮೇರೆಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಇವರು ಕುಂದಾಪುರ ತಾಲೂಕು ಅಮಾಸೆಬೈಲು ಸಮೀಪದ ಮಚ್ಚಟ್ಟು-ಕಬ್ಬಿನಾಲೆ ಶಿಥಿಲಾವಸ್ಥೆಯಲ್ಲಿರುವ ಸೇತುವೆಯನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸೇತುವೆಯಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಖುದ್ದಾಗಿ ಪರಿಶೀಲಿಸಿ ಗ್ರಾಮಸ್ಥರ ಜೊತೆ ಚರ್ಚಿಸಿದರು. ಅತಿ ಶೀಘ್ರದಲ್ಲಿ ಈ...
ಮಂಗಳೂರು ತಾ. ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಡಿತರ ಅಂಗಡಿಗಳಿಗೆ ಭೇಟಿ
ಮಂಗಳೂರು: ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆಯು ಸರ್ಮಪಕವಾಗಿ ಅನುಷ್ಟಾನ ಗೊಳ್ಳುತ್ತಿರುವ ಬಗ್ಗೆ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ನೇತೃತ್ವದಲ್ಲಿ ಬುಧವಾರ ನಾಗೂರಿ, ಅಡ್ಯಾರ್, ಮಲ್ಲೂರು , ಬೊಂಡಂತಿಲ , ನೀರುಮಾರ್ಗ, ಮೇರ್ಲಪದವು, ಪೆರ್ಮಂಕಿ ಉಳಾಯಿಬೆಟ್ಟು ಮತ್ತಿತರ ಕಡೆ ಪಡಿತರ ಅಂಗಡಿಗಳಿಗೆ...
ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರು: 2025ನೇ ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಕೊನೆಯ...
ರೆಡ್‌ಕ್ರಾಸ್‌ನಿಂದ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಮಂಗಳೂರು : ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ತಮಗೆ ಅರಿವಿಲ್ಲದಂತೆ ಮಾದಕ ವಸ್ತುಗಳ ಸೇವನೆಯ ಚಟಕ್ಕೆಬಲಿಯಾಗುತ್ತಿದ್ದಾರೆ. ಇದು ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯ ಎಂದು ಲೋಕಾಯುಕ್ತ ಡಿವೈಎಸ್‌ಪಿ ಡಾ.ಗಾನ.ಪಿ.ಕುಮಾರ್ ಹೇಳಿದರು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ...
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು : ಮಂಗಳೂರು ನಗರ ಪೊಲೀಸ್ ಪ್ರಕಟನೆ
ಮ೦ಗಳೂರು: ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಪ್ರಕರಣಗಳ ಕುರಿತ೦ತೆ ನೋಟಿಸ್ ಸ್ವೀಕೃತಿಯಾಗಿರುವ ವಾಹನದ ನೋಂದಣಿ ಮಾಲಕರು ದಂಡವನ್ನು ಪಾವತಿ ಮಾಡಿ, ಮುಂದೆ ಆಗುವ ಪರಿಣಾಮಗಳಿಗೆ ಅವಕಾಶವನ್ನು ನೀಡದಂತೆ ಮಂಗಳೂರು ನಗರ ಪೊಲೀಸ್ ಪ್ರಕಟನೆಯಲ್ಲಿ ಕೋರಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ...
ಎಂ.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ, ಕೊಡೆಮತ್ತು ಸ್ಕೂಲ್ ಬ್ಯಾಗ್ ವಿತರಣೆ
ಮ೦ಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು,ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ...
ವರದಿ ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ : ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು : ವರದಿಯನ್ನು ತಲುಪಿಸುವ ವೇಗಕ್ಕಿಂತ ನಿಖರತೆ ಮುಖ್ಯ.ಯಾವುದೇ ಸಮಸ್ಯೆಗಳ ಸಂದರ್ಭ ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವುದಕ್ಕಿಂತಲೂ ಸತ್ಯವನ್ನು ಎತ್ತಿ ತೋರಿಸುವುದು ಪ್ರಮುಖವಾಗಬೇಕು. ಸುದ್ದಿಯಲ್ಲಿ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಆರೋಪಿ ಮತ್ತು ಸಂತ್ರಸ್ತರನ್ನು ಒಂದೇ ಆಗಿ ಪರಿಗಣಿಸಬಾರದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ...
ತುಳು ನಾಟಕ ಕಾರ್ಯಗಾರ ಉದ್ಘಾಟನೆ
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು.
ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ...








